IT Riad: ಡಿಕೆ ಬ್ರದರ್ಸ್ ಆಪ್ತನ ನಿವಾಸದ ಮೇಲೆ ಐಟಿ ದಾಳಿ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿವಿಧೆಡೆ ದೂರು ಬಂದ ಕಡೆಗಳಲ್ಲಿ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ. ಅದರಂತೆ ಕರ್ನಾಟಕದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಆಪ್ತನ ಮೇಲೆ ಐಟಿ ದಾಳಿಯಾಗಿದೆ.

IT Riad: ಡಿಕೆ ಬ್ರದರ್ಸ್ ಆಪ್ತನ ನಿವಾಸದ ಮೇಲೆ ಐಟಿ ದಾಳಿ!
ಕೆಂಪರಾಜು
Edited By:

Updated on: Apr 14, 2024 | 5:42 PM

ಬೆಂಗಳೂರು (ಏಪ್ರಿಲ್.14): ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (dk Shivakumar) ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು (income tax department raids) ದಾಳಿ ಮಾಡಿದ್ದಾರೆ. ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ನಿವಾಸದ ಮೇಲೆ ಇಂದು (ಏಪ್ರಿಲ್ 14)‌ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಎರಡು ಇನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆಯೇ ಕೆಂಪರಾಜು ಮನೆಯ ಮೇಲೆ ದಾಳಿ ಮಾಡಿದ್ದು, ಈವರೆಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಡಿಕೆ ಶಿವಕುಮಾರ್​ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆಂಪರಾಜು ಗ್ರಾನೈಟ್ ಹಾಗೂ ಕ್ರಶರ್ ಸೇರದಂತೆ ಹಲವು ಉದ್ಯಮಗಳನ್ನು ಹೊಂದಿದ್ದಾರೆ.