ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳು ಹೆಚ್ಚಳ ಹಿನ್ನೆಲೆ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್ಲೈನ್ಸ್ ಜಾರಿ
ಜಪಾನ್ ಮತ್ತು ಥೈಲ್ಯಾಂಡ್‌ನಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೊತ್ತುಪಡಿಸಿದ ದೇಶಗಳಿಂದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದ ಮಾರ್ಗಸೂಚಿಗಳನ್ನು ಸರ್ಕಾರ ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ಕೊವಿಡ್-19 (Covid-19) ಪ್ರಕರಣಗಳು ಹೆಚ್ಚಳ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್ಲೈನ್ಸ್ ಜಾರಿ ಮಾಡಿಲಾಗಿದೆ. ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರದಿಂದ ಟೈಟ್ ರೂಲ್ಸ್ ಜಾರಿ ಮಾಡಿದ್ದು, ಏರ್ಪೋರ್ಟ್ಗಳಲ್ಲಿ ರ್ಯಾಂಡಮ್ ಟೆಸ್ಟ್ ನಡೆಸಲು ಮತ್ತು ವಿದೇಶಗಳಿಂದ ಬರುವವರ ಮೇಲೆ ನಿಗಾವಹಿಸಲು ಸೂಚನೆ ನೀಡಲಾಗಿದೆ. ಜಪಾನ್, ಥೈಲ್ಯಾಂಡ್‌ನಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಬೆಂಗಳೂರು, ಮಂಗಳೂರು ಏರ್ಪೋರ್ಟ್ನಲ್ಲಿ ಸ್ಕ್ರೀನಿಂಗ್ ಮಾಡಲಾಗುವುದು. ಲಕ್ಷಣ ಕಂಡುಬಂದವರಿಗೆ ಏರ್ಪೋರ್ಟ್ನಲ್ಲೇ RTPCR ಪರೀಕ್ಷೆ ಮಾಡಿ ಜಿನೋಮಿಕ್ ಸೀಕ್ವೆನ್ಸಿಂಗ್ಗೆ ಕಳುಹಿಸಬೇಕು. ಕೊರೊನಾ ದೃಢಪಟ್ಟವರಿಗೆ ಈಗಿರುವ ಶಿಷ್ಟಾಚಾರದಂತೆ ಚಿಕಿತ್ಸೆ ನೀಡಲಾಗುವುದು.
ಜಪಾನ್ ಮತ್ತು ಥೈಲ್ಯಾಂಡ್‌ನಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೊತ್ತುಪಡಿಸಿದ ದೇಶಗಳಿಂದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದ ಮಾರ್ಗಸೂಚಿಗಳನ್ನು ಸರ್ಕಾರ ನೀಡಿದೆ. 2% ಪ್ರಯಾಣಿಕರನ್ನ ರ್ಯಾಂಡಮ್ ಪರೀಕ್ಷೆ ಒಳಪಡಿಸಲು ಸರ್ಕಾರ ಮುಂದಾಗಿದೆ. ಜಪಾನ್ ಮತ್ತು ಥೈಲ್ಯಾಂಡ್‌ನಿಂದ ಬೆಂಗಳೂರು ಮತ್ತು ಮಂಗಳೂರು ಉದ್ದೇಶಿತ ವಿಮಾನ ನಿಲ್ದಾಣಗಳಿಗೆ ನೇರ ವಿಮಾನಗಳನ್ನು ಹೊಂದಿರುವ ಪ್ರಯಾಣಿಕರಿಗೆ ಟೆಲಿ ಮಾನಿಟರಿಂಗ್ ಮತ್ತು ಕಡ್ಡಾಯ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಹಲವು ದೇಶಗಳಲ್ಲಿ ಕೊರೋನಾ ಕೇಸ್ ಹೆಚ್ಚಳ ಹಿನ್ನೆಲೆ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್ ಲೈನ್ಸ್ ಜಾರಿ ಮಾಡಲಾಗಿದೆ. ದಕ್ಷಿಣ ಕೊರಿಯಾ, ಜಪಾನ್, ಥೈಲ್ಯಾಂಡ್, ಆಸ್ಟ್ರೇಲಿಯಾ, ವಿಯೆಟ್ನಾಂ, ನ್ಯೂಜಿಲೆಂಡ್ಗಳಲ್ಲಿ ಕೇಸ್ ಹೆಚ್ಚಳವಾಗಿದ್ದು, ಜಪಾನ್ ಹಾಗೂ ಥೈಲ್ಯಾಂಡ್ ಇಂದ ಬರುವ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
1. ಜಪಾನ್, ಥೈಲ್ಯಾಂಡ್ ಇಂದ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ 2. ಕೋವಿಡ್ ಲಕ್ಷಣಗಳಿರುವ ಪ್ರಯಾಣಿಕರ ಸ್ಯಾಂಪಲ್ ಏರ್ ಪೋರ್ಟ್ ಲ್ಯಾಬ್ನಲ್ಲೇ ಪರೀಕ್ಷೆ ಮಾಡುವುದು. ಪಾಸಿಟಿವ್ ಬಂದರೆ ಜೀನೋಮ್ ಸೀಕ್ವೆನ್ಸಿಂಗ್ ಕಳಿಸುವುದು. 3. ಜಪಾನ್, ಥೈಲ್ಯಾಂಡ್ ಇಂದ ಬರುವ ಪ್ರಯಾಣಿಕರನ್ನ 14 ದಿನಗಳ ಕಾಲ ಟೆಲಿ ಮಾನಿಟರಿಂಗ್ ಮಾಡುವುದು ಕಡ್ಡಾಯ.
ಆಯಕಟ್ಟಿನ ಜಾಗಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿ ಫಿಕ್ಸ್ ಮಾಡಿದ ಬಿಬಿಎಂಪಿ
ಬೆಂಗಳೂರು: ಕೊರೊನಾ ಸೋಂಕು ತನ್ನ ನಾಲ್ಕನೆಯ ಅಲೆಯಲ್ಲಿ ಇನ್ನೂ ಭಾರತವನ್ನು ಅಷ್ಟಾಗಿ ತಾಕಿಲ್ಲ ಎಂದು ಹೇಳುತ್ತಿರುವಾಗಲೇ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು ಶುಕ್ರವಾರ 133 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದರೆ ಬೆಂಗಳೂರಿನಲ್ಲಿ ಇಂದು 127 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,737 ಇದೆ. ಬೆಂಗಳೂರಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,667 ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.16ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮಧ್ಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಮುಖ್ಯವಾಗಿ ಆಯಕಟ್ಟಿನ ಜಾಗಗಳಾದ ಆಸ್ಪತ್ರೆಗಳಿಗೆ, ಥಿಯೇಟರ್ ಹಾಗೂ ಹೋಟೆಲ್, ಮಾಲ್ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಕೊವಿಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. OPDಗಳಲ್ಲಿ ಎಲ್ಲಾ ILI/ SARI ಪ್ರಕರಣ ಪರೀಕ್ಷಿಸಬೇಕು. ಒಳರೋಗಿಗಳಿಗೆ ಕೊವಿಡ್-19 ಪರೀಕ್ಷೆ ಮಾಡಬೇಕು ಎಂದು ಸೂಚಿಸಿದೆ. ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.
ಇದನ್ನೂ ಓದಿ;
‘ಕೆಜಿಎಫ್ 2’ ಚಿತ್ರದ 16ನೇ ದಿನದ ಕಲೆಕ್ಷನ್ ಹಿಂದಿಕ್ಕಲು ಒದ್ದಾಡಿದ ಅಜಯ್ ದೇವಗನ್ ಹೊಸ ಸಿನಿಮಾ