ಬೆಂಗಳೂರಿನಲ್ಲಿ ಎಚ್​ಐವಿ ಪ್ರಮಾಣ ಏರಿಕೆ; ಯುವಕರೇ ಹೆಚ್ಚಾಗಿ ಏಡ್ಸ್ ರೋಗಕ್ಕೆ ತುತ್ತು

HIV and AIDS in Bengaluru; ಬೆಂಗಳೂರು ಮತ್ತು ಕರ್ನಾಟಕದಲ್ಲಿ ಮತ್ತೆ ಎಚ್​ಐವಿ ಏಡ್ಸ್ ಹಾವಳಿ ಜೋರಾಗಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜಧಾನಿಯಲ್ಲಿ ಏಡ್ಸ್ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಹಾಗಾದರೆ, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ ಕಾರಣವೇನು? ಈಗ ಹೇಗಿದೆ ಪರಿಸ್ಥಿತಿ? ಏನು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಎಚ್​ಐವಿ ಪ್ರಮಾಣ ಏರಿಕೆ; ಯುವಕರೇ ಹೆಚ್ಚಾಗಿ ಏಡ್ಸ್ ರೋಗಕ್ಕೆ ತುತ್ತು
ಬೆಂಗಳೂರಿನಲ್ಲಿ ಎಚ್​ಐವಿ ಪ್ರಮಾಣ ಏರಿಕೆ; ಯುವಕರೇ ಹೆಚ್ಚಾಗಿ ಏಡ್ಸ್ ರೋಗಕ್ಕೆ ತುತ್ತು
Follow us
Vinay Kashappanavar
| Updated By: Ganapathi Sharma

Updated on: Jun 13, 2024 | 7:33 AM

ಬೆಂಗಳೂರು, ಜೂನ್ 13: ಕೊರೊನಾ ಸಾಂಕ್ರಾಮಿಕದ ಬಳಿಕ ಜನರಿಗೆ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದೆ. ಕಳೆದ ಕೆಲವು ವರ್ಷಗಳ ಮುನ್ನ ಜಾಗತಿಕವಾಗಿ ಭಯ ಹುಟ್ಟಿಸಿದ್ದ ಎಚ್​ಐವಿ ಏಡ್ಸ್ (HIV AIDS) ಖಾಯಿಲೆ ಕಳೆದ ಕೆಲವಾರು ವರ್ಷಗಳಿಂದ ಅಷ್ಟಾಗಿ ವರದಿಯಾಗಿರಲಿಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ (Bengaluru)  ಹೆಚ್ಚಾಗಿರುವುದು ಆತಂಕ ಹೆಚ್ಚಿಸಿದೆ.

ಹ್ಯೂಮನ್ ಇಮ್ಯುನೋಡಿಫೀಶಿಯೆನ್ಸಿ ವೈರಸ್ ಅಥವಾ ಎಚ್ಐವಿ ಒಂದು ಜಾಗತಿಕ ಆರೋಗ್ಯ ಸಮಸ್ಯೆಯಾಗಿದೆ. ಇದು ಸಮಸ್ಯೆಯಾಗಿಯೇ ಮುಂದುವರೆದಿದೆ. ಯಾಕಂದರೆ ಈ ವೈರಸ್​​ಗೆ ಸೂಕ್ತವಾದ ಔಷಧಿ ಇಲ್ಲ. ವಿಶ್ವಾದ್ಯಂತ ಸುಮಾರು 40 ದಶಲಕ್ಷಕ್ಕೂ ಅಧಿಕ ಜನ ಈ ಸೋಂಕು ಪೀಡಿತರಾಗಿದ್ದಾರೆ. ಸರ್ಕಾರವೂ ಇದರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡುತ್ತಲೇ ಇದೆ. ಆದರೆ ಜನರ ಜಾಗೃತಿ ಕೊರತೆ, ಏಡ್ಸ್ ಬಗ್ಗೆ ಕಡಿಮೆಯಾಗುತ್ತಿರುವ ಭಯ ಈಗ ಮತ್ತೆ ಯುವಕರಲ್ಲಿ ಏಡ್ಸ್ ಏರಿಕೆಗೆ ಕಾರಣವಾಗಿದೆ.

ರಾಜ್ಯದಲ್ಲಿ ಎಚ್ಐವಿ ಸೋಂಕಿತರು ಅತಿ ಹೆಚ್ಚು ಬೆಂಗಳೂರು ನಗರದಲ್ಲಿಯೇ ಪತ್ತೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಅದರಲ್ಲೂ ಅವಿವಾಹಿತರಲ್ಲಿಯೇ ಎಚ್​ಐವಿ ಸೋಂಕು ಹೆಚ್ಚಾಗುತ್ತಿದೆ. ಮದುವೆಗೂ ಮುನ್ನವೇ ಯುವಕರಲ್ಲಿ ಎಚ್​ಐವಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 1.85 ಲಕ್ಷ ಸೋಂಕಿತರಿದ್ದಾರೆ. ಇದರಲ್ಲಿ ನವವಿವಾಹಿತರೇ ಹೆಚ್ಚಿದ್ದಾರೆ.

ಬೆಂಗಳೂರಿನಲ್ಲಿ ಶೇ 20 ರಿಂದ 25 ರಷ್ಟು ಯುವಕರಲ್ಲಿಯೇ ಸೋಂಕು ಕಾಣಿಸಿಕೊಂಡಿದೆ. 14 ವರ್ಷಕ್ಕಿಂತ ಕೆಳಗಿನ ವಯಸ್ಸಿನವರಲ್ಲಿಯೂ ಈಗ ಹೆಚ್ಚಾಗಿ ಎಚ್​ಐವಿ ಕಂಡುಬರುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಹಾಗೂ ಕೋಲಾರ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ಮಾದಕ ವ್ಯಸನ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಹೆಚ್ಚಾಗಿ ಏಡ್ಸ್ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಕೂಡಾ ಈ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಿದೆ ಎಂದು ಆರೋಗ್ಯ ಇಲಾಖೆಯ ಯೋಜನಾ ನಿರ್ದೇಶಕ ಡಾ. ನಾಗರಾಜ್ ತಿಳಿಸಿದ್ದಾರೆ.

ಒಂದೇ ಆಸ್ಪತ್ರೆಯಲ್ಲಿ 267 ಜನರಿಗೆ ಏಡ್ಸ್

ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಯೊಂದರಲ್ಲಿಯೇ ಕಳೆದ ಒಂದು ವರ್ಷದಲ್ಲಿ 18555 ಜನರಿಗೆ ಎಚ್​ಐವಿ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 267 ಜನರಿಗೆ ಪಾಸಿಟಿವ್ ಕಂಡುಬಂದಿದ್ದು, ಇದರಲ್ಲಿ 12 ಗರ್ಭಿಣಿಯರಲ್ಲಿ ಸೋಂಕು ಕಂಡು ಬಂದಿದೆ. ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ಈ ಅಸ್ಪತ್ರೆಯಲ್ಲಿ ಪತ್ತೆಯಾಗಿದೆ.

ವೈದ್ಯರು ಹೇಳುವುದೇನು?

ಬಾಧಿತ ವ್ಯಕ್ತಿಯ ರೋಗನಿರೋಧಕ ವ್ಯವಸ್ಥೆಯ ಮೇಲೆ ಎಚ್​ಐವಿ ಪರಿಣಾಮ ಉಂಟುಮಾಡುತ್ತದೆ. ಇದು ಅನೇಕ ಸೋಂಕುಗಳು ಹಾಗೂ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಡಿಮೆ ಮಾಡುತ್ತಿದೆ. ಹೀಗಾದಾಗ ವ್ಯಕ್ತಿಗೆ ಇತರ ಅನೇಕ ಸೋಂಕುಗಳು ಮತ್ತು ಕ್ಯಾನ್ಸರ್ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಕೆಸಿ ಜನರಲ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ ಕಾವ್ಯಶ್ರೀ ಹೇಳಿದ್ದಾರೆ.

ಎಚ್ಐವಿ ಸೋಂಕಿನ ಲಕ್ಷಣಗಳು ಏನು?

  • ಕೆಲವು ತಿಂಗಳು ಲಕ್ಷಣರಹಿತವಾಗಿರುವುದು
  • ಜ್ವರ, ಅತಿಸಾರ,
  • ಕೆಮ್ಮು, ಲಿಂಫ್ ನಾಳಗಳ ಊತ
  • ದದ್ದುಗಳು ಹಾಗೂ ತಲೆನೋವು
  • ಊದಿಕೊಂಡ ದುಗ್ಧರಸ ಗ್ರಂಥಿಗಳು,
  • ರಾತ್ರಿ ಬೆವರುವಿಕೆ
  • ಬಾಯಿ ಹುಣ್ಣುಗಳು ಅಥವಾ ಜನನಾಂಗದ ಹುಣ್ಣುಗಳು
  • ಕೀಲು ನೋವು, ಆಯಾಸ

ಎಚ್ಐವಿ ಸೋಂಕಿಗೆ ಕಾರಣಗಳು

  • ಅಸುರಕ್ಷಿತ ಲೈಂಗಿಕ ಸಂಪರ್ಕ
  • ಅಸುರಕ್ಷಿತ ರಕ್ತ ವರ್ಗಾವಣೆ
  • ಸೋಂಕಿತರ ಸೂಜಿಗಳನ್ನು ಹಂಚಿಕೊಳ್ಳುವುದು
  • ಸೋಂಕಿತ ಸೂಜಿಗಳು ಮತ್ತು ಸಿರಿಂಜ್​​ಗಳನ್ನು ಹಂಚಿಕೊಳ್ಳುವುದರಿಂದ
  • ತಾಯಿಯಿಂದ ಮಗುವಿಗೆ
  • ದೇಹದ ದ್ರವಗಳ ಮೂಲಕ ಹರಡುತ್ತದೆ

ಇದನ್ನೂ ಓದಿ: ಸೊಂಟದ ಸುತ್ತಲಿನ ಕೊಬ್ಬನ್ನು ಕರಗಿಸಲು ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ

ಒಟ್ಟಿನಲ್ಲಿ ಇತ್ತಿಚ್ಚಿಗೆ ಅವಿವಾಹಿತ ಯುವಕರಲ್ಲಿ ಎಚ್​​​ಐವಿ ಹೆಚ್ಚಾಗುತ್ತಿದ್ದು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ. ಕೊಂಚ ಯಾಮಾರಿದರೂ ಸದ್ದಿಲ್ಲದೆ ವೈರಸ್ ಪ್ರಾಣಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಹೀಗಾಗಿ ಯುವ ಜನರು ಜಾಗೃತವಾಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್