ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಏಡಾಟ ಹೆಚ್ಚಾಗ್ತೀದೆ.. ನಿರಂತರ ವಾಹನಗಳ ಓಡಾಟ ವೇಗವಾಗಿ ಸಂಚರಿಸುವ ವಾಹನಗಳಿಂದ ಬೆಂಗಳೂರು ವಿವಿ ಆಕ್ಸಿಡೆಂಟ್ ಹಬ್ ಆಗ್ತಿದ್ದು ವಿದ್ಯಾರ್ಥಿಗಳು ಶಿಕ್ಷಕಯರು ಪರದಾಡುವಂತಾಗಿದ್ದು ಈಗ ಮತ್ತೆ ಬೆಂಗಳೂರು ಜ್ಞಾನ ಭಾರತಿ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣಕ್ಕೆ ಒತ್ತಾಯ ಕೇಳಿ ಬರ್ತಿದೆ.

ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ
Follow us
Vinay Kashappanavar
| Updated By: ಆಯೇಷಾ ಬಾನು

Updated on: Jun 19, 2024 | 6:51 AM

ಬೆಂಗಳೂರು, ಜೂನ್.19: ಬೆಂಗಳೂರು ಯೂನಿವರ್ಸಿಟಿಯಲ್ಲಿ (Bangalore University) ಕಳೆದ ಕೆಲವು ದಿನಗಳಿಂದ ವಾಹನಗಳ ಸಂಚಾರ ಏರಿಕೆಯಾಗ್ತಲೇ ಇದೆ. ಇದರಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೈಯಲ್ಲಿ ಜೀವ ಹಿಡ್ಕೊಂಡೇ ಕ್ಯಾಂಪಸ್ ನಲ್ಲಿ ಓಡಾಡಬೇಕಾಗಿದೆ. ಹೀಗಾಗಿ ವಿದ್ಯಾರ್ಥಿಗಳು (Student) ಹಾಗೂ ಶಿಕ್ಷಕರು (Teacher) ಕಳೆದ ಕೆಲ ವರ್ಷಗಳಿಂದ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ರು. ಇದೀಗ ಪಬ್ಲಿಕ್ ವಾಹನ ಓಡಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಮತ್ತೆ ಒತ್ತಡ ಹೆಚ್ಚಾಗಿದೆ. ಜ್ಞಾನಭಾರತಿ ಆವರಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾದ ಹಿನ್ನೆಲೆ ವಾಹನಗಳ ಕಡಿವಾಣಕ್ಕೆ ಡಿಮ್ಯಾಂಡ್ ಕೇಳಿ ಬಂದಿದೆ. ವಿದ್ಯಾರ್ಥಿಗಳ ಅಪಘಾತಗಳ ಸಂಖ್ಯೆ ಸಹ ಹೆಚ್ಚಾದ ಹಿನ್ನೆಲೆ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ

ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ನಾಗರಬಾವಿಯಿಂದ ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೆಚ್ಚಾಗಿ ಜನರ ಸಂಚಾರ ಕಂಡುಬರ್ತಿದೆ. ಹೀಗಾಗಿ ಅಪಘಾತ ಹೆಚ್ಚಾಗಿ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಒದಗಿಸುವ ಬಗ್ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ವಾಹನಗಳ ಆರ್ಭಟ ಹೆಚ್ಚಾಗಿರುವ ಹಿನ್ನಲೆ ನಿತ್ಯ ಸಾವಿರಾರು ಬೈಕ್ ಕಾರು ಆಟೋ ಬಸ್ ಕ್ಯಾಂಪಸ್ ನಲ್ಲಿ ಸಂಚಾರ ಮಾಡ್ತೀದ್ದು ಕ್ಯಾಂಪಸನಲ್ಲಿ ಓಡಾಡುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯದಲ್ಲಿಯೇ ಓಡಾಡಬೇಕಿದೆ. ನಿತ್ಯ ಹಾಸ್ಟೇಲ್, ಕ್ಯಾಂಪಸ್ ನಲ್ಲಿ ರೋಡ್ ಕ್ರಾಸ್ ಮಾಡಲು ಪರದಾಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಕ್ಯಾಂಪಸ್ ಭಾಗದಲ್ಲಿ ಸಮಯ ನಿರ್ಬಂಧ ಪ್ರಯೋಜನ ಇಲ್ಲವಾಗಿದೆ. ಹೀಗಾಗಿ ಕ್ಯಾಂಪಸ್ ನಲ್ಲಿ ಮೀತಿ ಮಿರಿದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕುವಂತೆ ವಿವಿಯ ಶಿಕ್ಷಕರು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ

ಇನ್ನೂ ಈ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದು ಜ್ಞಾನಭಾರತಿ ವಿವಿಯ ವಾಹನಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಾರ್ವಜನಿಕರಿಗೆ ಪರ್ಯಾಯ ರಸ್ತೆ ಕಲ್ಪಿಸುವಂತೆ ಒತ್ತಾಯ ಮಾಡಿದ್ದಾರೆ. ಕ್ಯಾಂಪಸ್ ನಲ್ಲಿ ಸಾರ್ವಜನಿಕೆ ಓಡಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದು ಪರ್ಯಾಯ ರಸ್ತೆ ಸಂಪರ್ಕ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ವಿವಿ ಕೂಡಾ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆ ಕೂಡಾ ಪ್ಲಾನ್ ಮಾಡಿದೆ.

ಒಟ್ನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟ ಹೆಚ್ಚಾಗಿರೊದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರ ವಲಯಕ್ಕೆ ಕಿರಿಕಿರಿ ಎದುರಾಗಿದೆ. ಕಳೆದ ವರ್ಷವಷ್ಟೇ ವಾಹನಗಳ ಆರ್ಭಟದಿಂದ ವಿದ್ಯಾರ್ಥಿನಿ ಬಲಿಯಾಗಿದ್ದು ಘಟನೆ ಮಾಸುವ ಮುನ್ನವೇ ಮತ್ತೆ ವಾಹನಗಳ ಸಂಚಾರ ಏರಿಕೆ ಸಮಸ್ಯೆ ತಂದೊಡಿದೆ. ಹೀಗಾಗಿ ಸರ್ಕಾರಕ್ಕೆ ಈ ಬಗ್ಗೆ ಮತ್ತೆ ಒತ್ತಾಯ ಕೇಳಿ ಬಂದಿದ್ದು ಈ ಸಾರಿಯಾದ್ರೂ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಬ್ರೇಕ್ ಬೀಳುತ್ತಾ ಅಂತಾ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ