ಬೆಂಗಳೂರು: ಕಳೆದ ಐದು ದಿನಗಳಿಂದ ಗದ್ದಲದಲ್ಲೇ ಕಳೆಯುತ್ತಿರುವ ಸದನದಲ್ಲಿ ಇಂದು (ಫೆಬ್ರವರಿ 22) ಶಾಸಕರ(MLA) ಸಂಬಳ ಭತ್ಯೆ ಹೆಚ್ಚಳ ಮಾಡಲಾಗಿದೆ. ವಿಧಾನಸಭೆ, ವಿಧಾನ ಪರಿಷತ್ ಎರಡೂ ಶಾಸಕರ ಸಂಬಳ(Salary) ಭತ್ಯೆ ಹೆಚ್ಚಳ ಮಾಡಲಾಗಿದೆ. ಇಂದು ಸಚಿವರ (Ministers) ವೇತನ, ಭತ್ಯೆ ಹೆಚ್ಚಳದ ವಿಧೇಯಕ ಅಂಗೀಕಾರ ಮಾಡಲಾಗಿದೆ. ಜತೆಹೆ ನಿವೃತ್ತಿ ವೇತನ ತಿದ್ದುಪಡಿ ವಿಧೇಯಕ ಅಂಗೀಕಾರ ಮಾಡಲಾಗಿದೆ.
ವಿಧೇಯಕಕ್ಕೆ ಶಾಸಕ ಬಂಡೆಪ್ಪ ಕಾಶಂಪೂರ್ ವಿರೋಧ ವ್ಯಕ್ತಪಡಿಸಿದ್ದಾರೆ. ಗದ್ದಲದ ನಡುವೆಯೇ ಸದನದಲ್ಲಿ ವಿಧೇಯಕ ಅಂಗೀಕಾರ ಮಾಡಲಾಗಿದೆ. ಇನ್ನು ಮುಂದೆ ಪ್ರತಿ 5 ವರ್ಷಕ್ಕೆ ಸಂಬಳ, ಭತ್ಯೆ ಹೆಚ್ಚಳ ಮಾಡಲಾಗುತ್ತದೆ. ಯಾವುದೇ ಬಿಲ್ ಮಂಡನೆ ಅವಶ್ಯಕತೆ ಇಲ್ಲದೆ ನೇರವಾಗಿ ವಿಧಾನಸಭೆ, ವಿಧಾನ ಪರಿಷತ್ ಎರಡೂ ಶಾಸಕರ ಸಂಬಳ ಹೆಚ್ಚಳ ಮಾಡಲಾಗುತ್ತದೆ.
ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ
ವಿಧಾನಪರಿಷತ್: ಕಾಂಗ್ರೆಸ್ ಗದ್ದಲದ ನಡುವೆ 2022ನೇ ಸಿವಿಲ್ ಸರ್ವೀಸ್ ವಿಧೇಯಕ ಅಂಗೀಕಾರ
2011ನೇ ಸಾಲಿನ ಗೆಜೆಟ್ ಪ್ರೊಬೆಷನರಿ ಆಯ್ಕೆ ಮತ್ತು ನೇಮಕಾತಿ ಸಿಂದುಗೊಳಿಸುವ ವಿಧೇಯಕವನ್ನು ಅಂಗೀಕಾರ ಮಾಡಲಾಗಿದೆ. ಕಾಂಗ್ರೆಸ್ ಗದ್ದಲದ ನಡುವೆ 2022ನೇ ಸಿವಿಲ್ ಸರ್ವೀಸ್ ವಿಧೇಯಕವನ್ನು ಸಿಎಂ ಪರವಾಗಿ ಕಾನೂನು ಸಚಿವ ಮಾಧುಸ್ವಾಮಿ ಮಂಡನೆ ಮಾಡಿದ್ದಾರೆ. ಈ ವಿಧೇಯಕವನ್ನು ಪರಿಷತ್ ಸದಸ್ಯರಾದ ಶ್ರೀಕಂಠೇಗೌಡ, ಹನುಮಂತ ನಿರಾಣಿ, ರವಿಕುಮಾರ್, ಎಸ್. ವಿ ಸಂಕನೂರು, ತಿಪ್ಪೇಸ್ವಾಮಿ ಹಾಗೂ ರುದ್ರೇಗೌಡ ಸ್ವಾಗತಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅತ್ಯಂತ ಬೇಜವಾವ್ದಾರಿಯ ಪಕ್ಷ: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ
ಕಾಂಗ್ರೆಸ್ಗೆ ಜನರ, ಸದನದ ಘನತೆಯೂ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಅತ್ಯಂತ ಬೇಜವಾವ್ದಾರಿಯ ಪಕ್ಷ. ಈಶ್ವರಪ್ಪ ಹೇಳದ್ದನ್ನು ಕಾಂಗ್ರೆಸ್ ದೊಡ್ಡದು ಮಾಡುತ್ತಿದೆ. ಕಾಂಗ್ರೆಸ್ ಮಾಡುತ್ತಿರುವುದು ಜನತೆಯ ಹಿತಾಸಕ್ತಿ ವಿರುದ್ಧ. ರಾಜ್ಯದ ಜನರಿಗೆ ಕಾಂಗ್ರೆಸ್ ದ್ರೋಹ ಮಾಡುತ್ತಿದೆ. ನಮ್ಮ ಕೆಲಸದ ಮೇಲೆ ಜನರ ಬಳಿ ಹೋಗುತ್ತೇವೆ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ
ಕಾಂಗ್ರೆಸ್ ಪ್ರತಿಭಟನೆ ಹಿಂಪಡೆಯದ ಹಿನ್ನೆಲೆ ವಿಧಾನಸಭೆ ಕಲಾಪವನ್ನು ಸ್ಪೀಕರ್ ಕಾಗೇರಿ ಮಾರ್ಚ್ 4ಕ್ಕೆ ಮುಂದೂಡಿದ್ದಾರೆ. ಕಳೆದ ಒಂದು ವಾರ ದಿಂದ ನಿಮ್ಮ ಮನವಿಗೆ ಬೆಲೆ ಕೊಡ್ತಿಲ್ಲ. ವಿರೋಧ ಪಕ್ಷದ ಸ್ಥಾನವನ್ನೂ ಕೂಡ ಕಾಂಗ್ರೆಸ್ ಕಳೆದುಕೊಳ್ತಾರೆ. ಅವರು ರಾಜಕೀಯ ಲಾಭಕ್ಕಾಗಿ ಧರಣಿ ಮಾಡ್ತಿದ್ದಾರೆ. ಆದರೆ ರಾಜಕೀಯ ಲಾಭವೂ ಕೂಡ ಆಗುವುದಿಲ್ಲ. ಹೀಗಾಗಿ ವಿಧಾನಸಭಾ ಕಲಾಪ ಮಾರ್ಚ್ 4 ನೇ ತಾರೀಖಿಗೆ ಮುಂದೂಡಿಕೆ ಮಾಟಲಾಗಿದೆ.
ಇದನ್ನೂ ಓದಿ:
ವಿಧಾನಸಭೆಯಲ್ಲಿ 2022ನೇ ಸಾಲಿನ ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ
ಸಚಿವ ಈಶ್ವರಪ್ಪ ವಜಾಗೆ ಕಾಂಗ್ರೆಸ್ ಬಿಗಿ ಪಟ್ಟು, ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿದ ಸ್ಪೀಕರ್
Published On - 12:08 pm, Tue, 22 February 22