ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?

ಕರ್ನಾಟಕದಲ್ಲಿ ಡೆಂಗ್ಯೂ ಹಾವಳಿ ಹೆಚ್ಚುತ್ತಿದ್ದು, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 1902 ಪ್ರಕರಣ ದಾಖಲಾಗಿದ್ದು, ನಿನ್ನೆ ಒಂದೇ ದಿನ ನಗರದಲ್ಲಿ 65 ಪ್ರಕರಣ ಪತ್ತೆಯಾಗಿದೆ. ಈ ಹಿನ್ನಲೆ ಈಗಾಗಲೇ ಪಾಲಿಕೆ ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾಗಿದೆ. ಜೊತೆಗೆ ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಸೆಪ್ಟೆಂಬರ್​ಗೆ ಡೆಂಗ್ಯೂ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?
ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ
Follow us
ಶಾಂತಮೂರ್ತಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 02, 2024 | 3:23 PM

ಬೆಂಗಳೂರು, ಜು.02: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ(Dengue Fever) ಅಬ್ಬರ ಜೋರಾಗಿದ್ದು, ನಗರದ ಕಗ್ಗದಾಸಪುರದ 27 ವರ್ಷದ ಯುವಕ ಈ ಮಹಾಮಾರಿಗೆ ಸಾವಿಗೀಡಾಗಿದ್ದಾನೆ ಎಂದು ನಿನ್ನೆ(ಜು.01) ಬಿಬಿಎಂಪಿ (BBMP) ಖಚಿತಪಡಿಸಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 1902 ಪ್ರಕರಣ ದಾಖಲಾಗಿದ್ದು, ನಿನ್ನೆ ಒಂದೇ ದಿನ ನಗರದಲ್ಲಿ 65 ಪ್ರಕರಣ ಪತ್ತೆಯಾಗಿದೆ. ಈ ಹಿನ್ನಲೆ ಈಗಾಗಲೇ ಪಾಲಿಕೆ ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾಗಿದೆ.

ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?

ಸೆಪ್ಟೆಂಬರ್​ಗೆ ಡೆಂಗ್ಯೂ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ‘ಪೀಕ್ ಆಗೋದು ಸೆಪ್ಟೆಂಬರ್​ನಲ್ಲಿ ಆದರೆ, ಈ ಬಾರಿ ಜೂನ್​ನಲ್ಲೇ ಪೀಕ್​ಗೆ ಹೋಗಿದೆ. ಕಳೆದ ವರ್ಷ 750 ಕೇಸ್ ಮಾತ್ರ ಜೂನ್​ನಲ್ಲಿ‌ಇತ್ತು. ಈ ಬಾರಿ 2000 ರೀಚ್ ಆಗುತ್ತಿದೆ. ಸೆಪ್ಟೆಂಬರ್ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ನಾವು ತಂಡಗಳನ್ನ ರಚನೆ ಮಾಡಿ ಜನರನ್ನ ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಆರೋಗ್ಯ ಸಮೀಕ್ಷೆಯಲ್ಲಿ ಕಂಡುಬಂತು ಆಘಾತಕಾರಿ ಅಂಶ

ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾದ ಪಾಲಿಕೆ

ಇನ್ನು ಕ್ಯಾಂಪೇನಿಂಗ್ ನಡೆಸಲಾಗುತ್ತಿದೆ, ಮನೆ ಮನೆಗೆ ಪಾಪ್ ಪ್ಲೇಟ್ ಹಂಚಿ ತಿಳುವಳಿಕೆ ನೀಡುತ್ತಿದ್ದೇವೆ. ಜೊತೆಗೆ ಬಸ್ ಸ್ಟ್ಯಾಂಡ್ ಜಾಹೀರಾತುಗಳನ್ನ ಹಾಕಲಿದ್ದೇವೆ. ಫ್ರೆಶ್ ವಾಟರ್​ನಲ್ಲಿ ಉತ್ಪತಿಯಾಗುವ ಸೊಳ್ಳೆಗಳಿಂದ ಡೆಂಗ್ಯೂ ಸೋಂಕು ಬರುತ್ತದೆ. ಬಿಬಿಎಂಪಿಯಲ್ಲಿ ಆರು ಸಾವಿರ ಟೆಸ್ಟಿಂಗ್ ಕಿಟ್ ಇದೆ. 95% ಕೇಸ್​ಗಳು ಖಾಸಗಿಯಲ್ಲಿ ರಿಪೋರ್ಟಿಂಗ್ ಆಗುತ್ತಿದೆ. ಪಿಹೆಚ್​ಸಿ ಗೆ ಬಂದಿರುವ ಅತೀ ಹೆಚ್ಚು ಜ್ವರ ಹಾಗೂ ರೋಗಲಕ್ಷಣಗಳು ಇರುವ ರೋಗಿಗಳಿಗೆ ಟೆಸ್ಟ್ ಮಾಡಲಾಗುತ್ತಿದೆ.

ಚಿಕಿತ್ಸೆ ಏನು?

ಡೆಂಗ್ಯೂ ಸೋಂಕು ತಗುಲಿದ ವ್ಯಕ್ತಿಯಲ್ಲಿ ಬಿಳಿ ರಕ್ತಕಣಗಳು 20 ಸಾವಿರಕ್ಕಿಂತ ಕಡಿಮೆ ಇದ್ದರೆ, ಅಂತಹ ವ್ಯಕ್ತಿಗೆ ಬ್ಲಡ್ ಡೊನೆಟ್ ಅವಶ್ಯಕತೆ ಇದೆ. ಉಳಿದಂತೆ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಡೆಂಘೀ ನಿರ್ಮೂಲನೆಗೆ ಮತ್ತಷ್ಟು ಕ್ರಮಗಳನ್ನ ಕೈಗೊಳ್ಳಲಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ