ಬೆಂಗಳೂರಿನ ಮೂರು ಭಾಗದಲ್ಲಿ ಕ್ಲಸ್ಟರ್ ಬ್ರೇಕ್ ಔಟ್​; ಸ್ಕೂಲು, ಕಾಲೇಜುಗಳಲ್ಲೇ ಹೆಚ್ಚಾಯ್ತು ಸೋಂಕಿತರ ಸಂಖ್ಯೆ

ದಿ ಇಂಟರ್ನ್ಯಾಷನಲ್ ಸ್ಕೂಲ್​ನಲ್ಲಿ ಮೊದಲು ಇಬ್ಬರು ವಿದ್ಯಾರ್ಥಿಗಳಿಗೆ ಜ್ವರ, ನೆಗಡಿ ಪತ್ತೆಯಾಗಿತ್ತು. ಈ ಇಬ್ಬರು ವಿದ್ಯಾರ್ಥಿಗಳು ನಾಗಪುರದವರಾಗಿದ್ದಾರೆ. ನಂತರ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಧೃಡವಾಗಿದೆ.

ಬೆಂಗಳೂರಿನ ಮೂರು ಭಾಗದಲ್ಲಿ ಕ್ಲಸ್ಟರ್ ಬ್ರೇಕ್ ಔಟ್​; ಸ್ಕೂಲು, ಕಾಲೇಜುಗಳಲ್ಲೇ ಹೆಚ್ಚಾಯ್ತು ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Nov 27, 2021 | 4:00 PM

ಬೆಂಗಳೂರು: ನಗರದಲ್ಲಿ ಮತ್ತೆ ಕೊರೊನಾ (Coronavirus) ಆತಂಕ ಹೆಚ್ಚಾಗಿದೆ. ಅದರಲ್ಲೂ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿದೆ. ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 12 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನು ಆನೇಕಲ್ ತಾಲೂಕಿನ ದೊಮ್ಮಸಂದ್ರದ ದಿ ಇಂಟರ್ನ್ಯಾಷನಲ್ ಸ್ಕೂಲ್​ನಲ್ಲಿ 47 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಇದೇ ಸ್ಕೂಲ್​ನಲ್ಲಿ (School) 33 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿತ್ತು. ಆದರೆ ಇಂದು (ನವೆಂಬರ್ 27) ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಸುಕ್ರುತ ಕಾಲೇಜಿನಲ್ಲಿ 17 ಜನರಿಗೆ ಸೋಂಕು ದೃಢಪಟ್ಟಿದೆ.

ದಿ ಇಂಟರ್ನ್ಯಾಷನಲ್ ಸ್ಕೂಲ್​ನಲ್ಲಿ ಮೊದಲು ಇಬ್ಬರು ವಿದ್ಯಾರ್ಥಿಗಳಿಗೆ ಜ್ವರ, ನೆಗಡಿ ಪತ್ತೆಯಾಗಿತ್ತು. ಈ ಇಬ್ಬರು ವಿದ್ಯಾರ್ಥಿಗಳು ನಾಗಪುರದವರಾಗಿದ್ದಾರೆ. ನಂತರ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಧೃಡವಾಗಿದೆ. ಬಳಿಕ ಇದೇ ಸ್ಕೂಲ್​ನ 400ಕ್ಕೂ ಅಧಿಕ ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಮೊದಲು 33 ಜನರಿಗೆ ಸೋಂಕು ಧೃಡವಾಗಿತ್ತು. ಈಗ ಈಗ ಸೋಂಕಿತರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ.

ಕೊರೊನಾ ಕಡಿಮೆಯಾಯ್ತು ಅಂತಾ ಮೈಮರೆಯುವ ಮುನ್ನ ಎಚ್ಚರ ರಾಜ್ಯದ ಜನತೆ ಇನ್ನು ಕೊರೊನಾ ಕಡಿಮೆಯಾಗಿದೆ ಎಂದು ಮೈಮರೆಯುವ ಹಾಗೆ ಇಲ್ಲ. ಏಕೆಂದರೆ ಡೆಲ್ಟಾಗಿಂತಲೂ ವೇಗವಾಗಿ ಕೊರೊನಾ ಹೊಸ ರೂಪಾಂತರಿ ಹರಡುತ್ತಿರುವುದು ಪತ್ತೆಯಾಗಿದೆ. ಬೋಟ್ಸ್ವಾನನಾದಲ್ಲಿ 3, ದಕ್ಷಿಣ ಆಫ್ರಿಕಾದಲ್ಲಿ 6, ಹಾಂಕಾಂಗ್‌ನಲ್ಲಿ 1 ಹೊಸ ತಳಿ ಪತ್ತೆಯಾಗಿದೆ. ಬಿ.1.1529 ಹೊಸ ತಳಿ ಹೆಚ್ಚು ವೇಗವಾಗಿ ಹರಡಲಿದೆ ಎಂದು ತಜ್ಞರು ಕೂಡ ಹೇಳಿದ್ದಾರೆ. ಅಲ್ಲದೇ ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರಗೊಳಿಸುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ.

ಕೇಂದ್ರದಿಂದಲೂ ರಾಜ್ಯ ಆರೋಗ್ಯ ಇಲಾಖೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂರು ದೇಶಗಳಿಂದ ಬರುವವರಿಗೆ ಕಡ್ಡಾಯ ಟೆಸ್ಟ್, ಸ್ಕ್ರೀನಿಂಗ್ ಹಾಗೂ ಟ್ರಾಕಿಂಗ್ ಮಾಡುವಂತೆ ಸೂಚನೆ ನೀಡಲಾಗಿದೆ. ಡೆಲ್ಟಾಗಿಂತ ವೇಗವಾಗಿ ಹರಡಬಲ್ಲ ಕೊರೊನಾ ಬಿ.1.1529 ಹೊಸ ತಳಿ ಬಗ್ಗೆ ತಜ್ಞರು ಕೂಡ ಆತಂಕ ವ್ಯಕ್ತಡಿಸಿದ್ದು, ಡಿಸೆಂಬರ್ – ಜನವರಿ ಎರಡು ತಿಂಗಳ ಕಟ್ಟೆಚ್ಚರ ವಹಿಸುವಂತೆ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

ಧಾರವಾಡ: ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 77 ಜನರಿಗೆ ಕೊರೊನಾ ಧೃಡ ಧಾರವಾಡ ನಗರದ ಎಸ್‌ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 77 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಕಾಲೇಜಿನಲ್ಲಿ ಈವರೆಗೆ ಒಟ್ಟು 281 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಕಾಲೇಜಿನಲ್ಲಿ ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿರುವುದರಿಂದ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಹೊರ ರೋಗಿಗಳ ವಿಭಾಗ ಬಂದ್ ಮಾಡಲಾಗಿದೆ. ತುರ್ತು ಸೇವಾ ಸಿಬ್ಬಂದಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದ್ದು, ಆಸ್ಪತ್ರೆಗೆ ಬರುತ್ತಿರುವ ಜನರನ್ನು ಸಿಬ್ಬಂದಿಗಳು ವಾಪಸ್ ಕಳುಹಿಸುತ್ತಿದ್ದಾರೆ. ನವೆಂಬರ್ 28ರವರೆಗೆ ಓಪಿಡಿ ಬಂದ್ ಆಗಲಿದೆ.

ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ; ವಿದ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳಿಸಿದ ಸಿಬ್ಬಂದಿ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಮರಸೂರು ಬಳಿಯಿರುವ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಹಿನ್ನೆಲೆ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳಿಸಿದ್ದಾರೆ. ಇನ್ನೂ 106 ವಿದ್ಯಾರ್ಥಿಗಳ ಟೆಸ್ಟ್ ರಿಪೋರ್ಟ್ ಬರಬೇಕಿದೆ. ಆದರೆ ಅದಕ್ಕೂ ಮುನ್ನವೇ ವಿದ್ಯಾರ್ಥಿಗಳನ್ನು ಮನೆಗಳಿಗೆ ಕಳಿಸುತ್ತಿದ್ದಾರೆ.

ಮೈಸೂರು : ಕೇರಳದಲ್ಲಿ ನ್ಯೂರೋ ವೈರಸ್ ಪತ್ತೆ; ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಕೇರಳದಲ್ಲಿ ನ್ಯೂರೋ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಆರೋಗ್ಯ ಸಿಬ್ಬಂದಿಗಳು ಗಡಿಯಲ್ಲಿ ಸರ್ವೆ ಮಾಡುತ್ತಿದ್ದು, ಮನೆ ಮನೆಗೆ ಹೋಗಿ ಸರ್ವೆ ಕಾರ್ಯ ಮುಂದುವರಿಸಿದ್ದಾರೆ. ಸದ್ಯ ಕೇರಳದ ವೈನಾಡಿನಲ್ಲಿ 13 ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಕೇರಳದಿಂದ ಬಂದಿರುವವರ ಬಗ್ಗೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಕೇರಳದಿಂದ ಬಂದು ವಾಂತಿ, ಭೇದಿ ಕಾಣಿಸಿಕೊಂಡರೆ ಅಂತವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ‌ ನೀಡಲಾಗಿದೆ ಎಂದು ಟಿವಿ9ಗೆ ಹೆಚ್.ಡಿ.ಕೋಟೆ ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Coronavirus: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ

ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ನೆದರ್ಲೆಂಡ್ಸ್‌ ಪ್ರವಾಸ ಅರ್ಧಕ್ಕೆ ರದ್ದು! ಭಾರತ ಪ್ರವಾಸವೂ ಅನುಮಾನ?

Published On - 8:32 am, Sat, 27 November 21

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ