IND vs NED Match: ಇಂದು ಭಾರತ, ನೆದರ್ಲೆಂಡ್ ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ನಿಷೇಧ
Chinnaswamy Stadium: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ-ನೆದರ್ಲೆಂಡ್ ನಡುವೆ ಇಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಬೆಂಗಳೂರು, ನವೆಂಬರ್ 12: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ, ನೆದರ್ಲೆಂಡ್ ತಂಡಗಳು (IND vs NED Match) ಸೆಣಸಾಡಲಿವೆ. ಭಾರತ-ನೆದರ್ಲೆಂಡ್ ನಡುವೆ ಇಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಬೆಂಗಳೂರಲ್ಲಿ 4 ಪಂದ್ಯ ನಡೆದಿದ್ದು, ಇಂದು 5ನೇ ಪಂದ್ಯ ನಡೆಯಲಿದೆ. ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ನಿಗದಿತ ಸ್ಥಳದಲ್ಲಿ ಮಾತ್ರ ವಾಹನಗಳ ನಿಲುಗಡೆಗೆ ಅವಕಾಶ
ನಗರದ ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ರಾಜಭನವ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ಸಂಪೂರ್ಣ ನಿಷೇಧಿಸಿದ್ದು, ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್, ಶಿವಾಜಿನಗರ ಬಸ್ ನಿಲ್ದಾಣ ಸೇರಿದಂತೆ ನಿಗದಿತ ಸ್ಥಳದಲ್ಲಿ ಮಾತ್ರ ವಾಹನಗಳ ನಿಲುಗಡೆಗೆ ಪೊಲೀಸರು ಮನವಿ ಮಾಡಿದ್ದಾರೆ.
ಅದೇ ರೀತಿಯಾಗಿ ಸರಕು ಸಾಗಣೆ ವಾಹನಗಳಿಗೆ ನಿಷೇಧಿಸಲಾಗಿದ್ದು, ಕ್ಯಾಬ್ಗಳಿಗೆ ಪಿಕ್ ಅಪ್ ಮತ್ತು ಡ್ರಾಪ್ ವಾಹನಗಳಿಗೆ ಪೊಲೀಸರು ಸ್ಥಳ ಗುರುತಿಸಿದ್ದಾರೆ. ಯಾವುದೇ ಸಂಚಾರ ದಟ್ಟಣೆ ಆಗದಂತೆ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: IND vs NED, ICC World Cup: ಚಿನ್ನಸ್ವಾಮಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ವಿಡಿಯೋ
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಮತ್ತು ನೆದರ್ಲೆಂಡ್ ಸೆಣಸಾಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದ್ದು, ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಹಾಗಾಗಿ ನಾಲ್ವರು ಡಿಸಿಪಿಗಳ ನೇತೃತ್ವದಲ್ಲಿ ಎಂ.ಚಿನ್ನಸ್ವಾಮಿ ಮೈದಾನಕ್ಕೆ ಭದ್ರತೆ ಒದಗಿಸಲಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗದಂತೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
ಪೊಲೀಸ್ ಭದ್ರತೆ
ನಾಲ್ವರು ಡಿಸಿಪಿ, 9 ಎಸಿಪಿ, 28 ಇನ್ಸ್ಪೆಕ್ಟರ್, 86 ಪಿಎಸ್ಐಗಳು, 4 KSRP ತುಕಡಿ ಸೇರಿ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧ್ವಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳು, ಮುಂಜಾಗ್ರತಾ ಕ್ರಮವಾಗಿ ಸ್ಟೇಡಿಯಂ ಬಳಿ 2 ಆ್ಯಂಬುಲೆನ್ಸ್ ವ್ಯವಸ್ಥೆ, ಎಂ.ಚಿನ್ನಸ್ವಾಮಿ ಮೈದಾನದ ಎಲ್ಲಾ ಗೇಟ್ಗಳ ಬಳಿ ತೀವ್ರ ತಪಾಸಣೆ, ವೀಕ್ಷಕರು ಟಿಕೆಟ್ ಹಿಂದೆ ನಮೂದಿಸಿರುವ ನಿಯಮ ಪಾಲಿಸಬೇಕು ಎಂದು ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.