IND VS SA T-20:ಮೆಟ್ರೋ ಅವಧಿಯಲ್ಲಿ ಬದಲಾವಣೆ, ಹೆಚ್ಚುವರಿ ಬಸ್​ಗಳ ವ್ಯವಸ್ಥೆ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

| Updated By: Rakesh Nayak Manchi

Updated on: Jun 16, 2022 | 7:07 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ-20 ಪಂದ್ಯಾವಳಿ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ (ಜೂ.19 ರಂದು) ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೆ ಪ್ರಯಾಣಿಕರ ದಟ್ಟಣೆ ನಿಗ್ರಹಿಸಲು ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.

IND VS SA T-20:ಮೆಟ್ರೋ ಅವಧಿಯಲ್ಲಿ ಬದಲಾವಣೆ, ಹೆಚ್ಚುವರಿ ಬಸ್​ಗಳ ವ್ಯವಸ್ಥೆ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು ಮೆಟ್ರೋ
Follow us on

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಟಿ-20 ಪಂದ್ಯಾ(Match)ವಳಿ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ (ಜೂ.19 ರಂದು) ಮೆಟ್ರೋ (Metro) ಸಂಚಾರದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್​ಸಿಎಲ್​, ಭಾರತ ಮತ್ತು ಆಫ್ರಿಕಾ ತಂಡಗಳ ನಡುವಿನ ಪಂದ್ಯಾವಳಿ ಹಿನ್ನೆಲೆ ಮೆಟ್ರೋ ಅವಧಿಯನ್ನು ವಿಸ್ತರಿಸಲಾಗಿದೆ. ಸೋಮವಾರ ಬೆಳ್ಳಗ್ಗೆ 1 ಗಂಟೆಯ ತನಕ (ಭಾನುವಾರ ಮಧ್ಯರಾತ್ರಿ ಒಂದು ಗಂಟೆಯವರೆಗೆ) ಮೆಟ್ರೋ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ: IND vs SA 4th T20 Match Live Streaming: ಸರಣಿ ಜೀವಂತವಾಗಿರಿಸಲು ಭಾರತ ಗೆಲ್ಲಲೇಬೇಕು! ಪಂದ್ಯದ ಬಗ್ಗೆ ಮಾಹಿತಿಯಿದು

ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು  ನೀಗಿಸಲು ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪಂದ್ಯ ನಡೆಯುವ  ಜೂನ್ 19 ಮಧ್ಯಾಹ್ನ 3 ಗಂಟೆಯಿಂದ ಮೆಟ್ರೋ ಪ್ರಯಾಣಿಕರಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಒಂದು ಟಿಕೆಟ್ ಬೆಲೆಯನ್ನು 50 ರೂಪಾಯಿ ನಿಗದಿ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿವಿಧೆಡೆ ಹೆಚ್ಚುವರಿ ಬಸ್ ವ್ಯವಸ್ಥೆ

ಟಿ-20 ಪಂದ್ಯ ಹಿನ್ನೆಲೆ ಬಿಎಂಟಿಸಿಯು ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್​ಗಳ ವ್ಯವಸ್ಥೆಯನ್ನು ಕಲ್ಪಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೆಂಗಳೂರಿನ ವಿವಿಧೆಡೆ ಮಧ್ಯಾಹ್ನ 3ರಿಂದ ಪಂದ್ಯ ಮುಗಿಯುವವರೆಗೆ ಹೆಚ್ಚುವರಿ ಬಸ್​ಗಳು ಓಡಾಡಲಿವೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್‌ ನಿಲ್ದಾಣ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಮೃಗಾಲಯ, ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್, ಮಾಗಡಿ ರಸ್ತೆಯ ಜನಪ್ರಿಯ ಟೌನ್‌ಶಿಪ್, ನೆಲಮಂಗಲ, ಯಲಹಂಕ 5ನೇ ಹಂತ, ಆರ್.ಕೆ ಹೆಗಡೆ‌ ನಗರ, ಬಾಗಲೂರು, ಹೊಸಕೋಟೆ ಬಸ್ ನಿಲ್ದಾಣಗಳಿಗೆ ಬಸ್​ಗಳು ವ್ಯವಸ್ಥಿತವಾಗಿ ಸಂಚಾರ ನಡೆಸಲಿವೆ.

ಇಂಡೋ ಆಫ್ರಿಕಾ ತಂಡಗಳ ನಡುವಿನ ಐದನೇ ಹಾಗೂ ಕೊನೆಯ ಪಂದ್ಯ ಭಾನುವಾರ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಭಾರತ ತಂಡ ವಿಶಾಖಪಟ್ಟಣಂನಲ್ಲಿ ಗೆದ್ದುಕೊಂಡಿದ್ದರೂ ಪ್ರವಾಸಿ ತಂಡ ದಕ್ಷಿಣ ಆಫ್ರಿಕಾಕ್ಕೆ ಸರಣಿ ಕೈವಶ ಮಾಡಿಕೊಳ್ಳಲು ಕೇವಲ ಒಂದೇ ಒಂದು ಗೆಲುವು ಅಗತ್ಯವಿದೆ. ಹೀಗಾಗಿ ಶುಕ್ರವಾರ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ನಾಲ್ಕನೇ ಪಂದ್ಯ ಭಾರತಕ್ಕೂ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.

ಇದನ್ನೂ ಓದಿ: ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಕೇಸ್ ಹೆಚ್ಚಳ; ಕಾನ್ಪುರದ ಐಐಟಿ ವರದಿ ನಿರ್ಲಕ್ಷ್ಯವಹಿಸುವಂತಿಲ್ಲ ಎಂದ ಸಚಿವ ಸುಧಾಕರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆ ಹಿನ್ನೆಲೆ ರಾಜ್ಯ ಗೃಹಸಚಿವ ಅರಜ ಜ್ಞಾನೇಂದ್ರ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ತೆಗೆದುಕೊಂಡ ರಕ್ಷಣೆ ಮತ್ತು ಭದ್ರತಾ ವ್ಯವಸ್ಥೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Thu, 16 June 22