ಬಿಬಿಎಂಪಿ ಅಧಿಕಾರಿಗಳು, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ; ಪಾಲಿಕೆ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ವೃಂದ ಮತ್ತು ನೇಮಕಾತಿ ನಿಯಾಮಾಳಿಗಳನ್ವಯ 5219 ಹುದ್ದೆಗಳಿಗೆ ಮಂಜೂರು ವಿಚಾರವಾಗಿ ಕರ್ತವ್ಯ ಬಹಿಷ್ಕರಿಸಿ ಮುಷ್ಕರ ಮಾಡಲು ಪಾಲಿಕೆ ನೌಕರರು ನಿರ್ಧಾರ ಮಾಡಿದ್ದಾರೆ. ಕೇಂದ್ರ ಕಚೇರಿ ಸೇರಿ 198 ವಾರ್ಡ್ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ದು, ಮೂವರ ಕೆಲಸ ಒಬ್ಬ ನೌಕರನ‌ ಮೇಲೆ ಬಿದ್ದಿದೆ.

ಬಿಬಿಎಂಪಿ ಅಧಿಕಾರಿಗಳು, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ;  ಪಾಲಿಕೆ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
Follow us
| Updated By: preethi shettigar

Updated on:Sep 07, 2021 | 10:19 AM

ಬೆಂಗಳೂರು: ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಂದ ಇಂದಿನಿಂದ ಅನಿರ್ದಿಷ್ಟವಧಿ ಮುಷ್ಕರ ಆರಂಭವಾಗಿದ್ದು, ವೃಂದ ಮತ್ತು ನೇಮಕಾತಿ ಹಾಗೂ ಹಲವು ಬೇಡಿಕೆ ಆಧರಿಸಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಲಾಗುತ್ತಿದೆ. ಧರಣಿ ಪರಿಣಾಮ ಇಂದು ಪಾಲಿಕೆಯ ಸೇವೆಗಳಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.

ವೃಂದ ಮತ್ತು ನೇಮಕಾತಿ ನಿಯಾಮಾಳಿಗಳನ್ವಯ 5219 ಹುದ್ದೆಗಳಿಗೆ ಮಂಜೂರು ವಿಚಾರವಾಗಿ ಕರ್ತವ್ಯ ಬಹಿಷ್ಕರಿಸಿ ಮುಷ್ಕರ ಮಾಡಲು ಪಾಲಿಕೆ ನೌಕರರು ನಿರ್ಧಾರ ಮಾಡಿದ್ದಾರೆ. ಕೇಂದ್ರ ಕಚೇರಿ ಸೇರಿ 198 ವಾರ್ಡ್ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ದು, ಮೂವರ ಕೆಲಸ ಒಬ್ಬ ನೌಕರನ‌ ಮೇಲೆ ಬಿದ್ದಿದೆ.

ನೇಮಕಾತಿ ಸಂಬಂಧ ಹಲವು ಬಾರಿ ಪ್ರಸ್ತಾವನೆ ಹೋಗಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಹೀಗಾಗಿ 5219 ಹುದ್ದೆಗಳಿಗೆ ಮಂಜೂರು ನೀಡುವುದು, ಕೊವಿಡ್​ನಿಂದ ಮೃತ ಪಟ್ಟ ಕುಟುಂಬಕ್ಕೆ ಪರಿಹಾರ, ನಗರ ಯೊಜನೆ ವಿಭಾಗದಲ್ಲಿ 39 ಹುದ್ದೆ ಸೃಷ್ಟಿ ವಿರೋಧಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದು ಮುಷ್ಕರಲ್ಲಿ ಭಾಗಿಯಾದ ನೌಕರರು ತಿಳಿಸಿದ್ದಾರೆ.

ಕೆಲಸ ಕಾಯಂಗೆ ಆಗ್ರಹಿಸಿ 16 ಸಾವಿರ ಪೌರಕಾರ್ಮಿಕರಿಂದ ಪ್ರತಿಭಟನೆ 16 ಸಾವಿರ ಪೌರಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದ ಪೌರಕಾರ್ಮಿಕರು, ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ನಿನ್ನೆ ಪೌರಕಾರ್ಮಿಕರ ಪ್ರತಿಭಟನೆ ಹಿನ್ನಲೆ ಬೆಂಗಳೂರಿನ ಮನೆ ಮನೆಯಿಂದ ಕಸ ಸಂಗ್ರಹಣೆ, ಕಸ ಗುಡಿಸುವ ಕೆಲಸ ಬಂದ್ ಆಗಿದೆ. ಅಲ್ಲದೆ ಪೌರಕಾರ್ಮಿಕರು ಬಿಬಿಎಂಪಿ ಆವರಣವನ್ನು ಸ್ವಚ್ಛಗೊಳಿಸದೆ ಧರಣಿ ನಡೆಸಿದ್ದಾರೆ. ಇತ್ತ ಶಾಸಕರು, ಸಚಿವರ ಮನೆಯಿಂದ ಕೂಡ ಕಸ ಸಂಗ್ರಹ ಮಾಡದೆ, 16 ಸಾವಿರ ಜನ ಪೌರಕಾರ್ಮಿಕರು, 10 ಸಾವಿರ ಕಸದ ಆಟೋ-ಟಿಪ್ಪರ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಪೌರಕಾರ್ಮಿಕರಿಂದ ಪ್ರತಿಭಟನೆ ರಾಜ್ಯದಲ್ಲಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಖಾಯಂ ಮಾಡದಿದ್ದರೆ ಮುಂದಿನ ತಿಂಗಳು ಅನಿರ್ದಿಷ್ಟಾವಧಿ ಧರಣಿ ಮಾಡುತ್ತೇವೆ ಎಂದು ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೆಲಸ ಕಾಯಂಗೆ ಆಗ್ರಹಿಸಿ 16 ಸಾವಿರ ಪೌರಕಾರ್ಮಿಕರಿಂದ ಪ್ರತಿಭಟನೆ; ಬಿಬಿಎಂಪಿ ಆವರಣ ಸ್ವಚ್ಛಗೊಳಿಸದೆ ಹಾಗೆಯೇ ಬಿಟ್ಟರು!

ವಕೀಲರ ಮುಷ್ಕರ ಮತ್ತು ಕೋರ್ಟ್ ಬಹಿಷ್ಕಾರಗಳನ್ನು ತಡೆಯಲು ನಿಯಮ ರೂಪಿಸಲಿದ್ದೇವೆ: ಬಾರ್ ಕೌನ್ಸಿಲ್ ಆಫ್ ಇಂಡಿಯಾ

Published On - 10:16 am, Tue, 7 September 21

ತಾಜಾ ಸುದ್ದಿ
ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ, ವಿಡಿಯೋ
ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ, ವಿಡಿಯೋ
ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸಿಎಂ ಹೇಡಿಯಂತೆ ಓಡಿಹೋಗಿದ್ದಾರೆ: ಅಶೋಕ
ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸಿಎಂ ಹೇಡಿಯಂತೆ ಓಡಿಹೋಗಿದ್ದಾರೆ: ಅಶೋಕ
ಮುಡಾ ಹಗರಣ: ನ್ಯಾಯ ಕೇಳಲು ರಾಜ್ಯಪಾಲರಲ್ಲಿಗೆ ಹೋದ ವಿರೋಧ ಪಕ್ಷಗಳ ಶಾಸಕರು
ಮುಡಾ ಹಗರಣ: ನ್ಯಾಯ ಕೇಳಲು ರಾಜ್ಯಪಾಲರಲ್ಲಿಗೆ ಹೋದ ವಿರೋಧ ಪಕ್ಷಗಳ ಶಾಸಕರು
ಶಿರೂರು ಗುಡ್ಡ ಕುಸಿತ: ನದಿಯಲ್ಲಿ ತೇಲಿಬಂತು ಟ್ರಕ್​ನಲ್ಲಿದ್ದ ಮರದ ತುಂಡು
ಶಿರೂರು ಗುಡ್ಡ ಕುಸಿತ: ನದಿಯಲ್ಲಿ ತೇಲಿಬಂತು ಟ್ರಕ್​ನಲ್ಲಿದ್ದ ಮರದ ತುಂಡು
ಬಿಜೆಪಿ ನಾಯಕರಿಂದ ಹೂವು ನೀಡಿ ಮನವೊಲಿಸುವ ಪ್ರಯತ್ನಕ್ಕೂ ಮಣಿಯದ ಸ್ಪೀಕರ್
ಬಿಜೆಪಿ ನಾಯಕರಿಂದ ಹೂವು ನೀಡಿ ಮನವೊಲಿಸುವ ಪ್ರಯತ್ನಕ್ಕೂ ಮಣಿಯದ ಸ್ಪೀಕರ್
ಅರ್ಜುನ್ ಮತ್ತಿಬ್ಬರ ಶೋಧ ಜಾರಿ, ಡ್ರೋನ್ ಮತ್ತು ಕೋಸ್ಟ್ ಗಾರ್ಡ್ ಚಾಪರ್ ಬಳಕೆ
ಅರ್ಜುನ್ ಮತ್ತಿಬ್ಬರ ಶೋಧ ಜಾರಿ, ಡ್ರೋನ್ ಮತ್ತು ಕೋಸ್ಟ್ ಗಾರ್ಡ್ ಚಾಪರ್ ಬಳಕೆ
ಮೃತ ಮಾಲೀಕನಿಗಾಗಿ ಹುಡುಕಾಡುತ್ತಿರುವ ಸಾಕು ನಾಯಿ, ಮನಕಲಕುವ ದೃಶ್ಯ ಇಲ್ಲಿದೆ
ಮೃತ ಮಾಲೀಕನಿಗಾಗಿ ಹುಡುಕಾಡುತ್ತಿರುವ ಸಾಕು ನಾಯಿ, ಮನಕಲಕುವ ದೃಶ್ಯ ಇಲ್ಲಿದೆ
13 ವರ್ಷದ ಹಿಂದೆ ಜೈಲಿನಲ್ಲಿದ್ದಾಗ ದರ್ಶನ್ ಹೇಗಿದ್ದರು: ಜೈಲಧಿಕಾರಿ ನೆನಪು
13 ವರ್ಷದ ಹಿಂದೆ ಜೈಲಿನಲ್ಲಿದ್ದಾಗ ದರ್ಶನ್ ಹೇಗಿದ್ದರು: ಜೈಲಧಿಕಾರಿ ನೆನಪು
ವಾತಾವರಣ ಅನುಕೂಲಕರವಾಗಿದೆ, ಬಿಜೆಪಿ ಸದಸ್ಯರು ಪಾದಯಾತ್ರೆ ಮಾಡಲಿ: ಖರ್ಗೆ
ವಾತಾವರಣ ಅನುಕೂಲಕರವಾಗಿದೆ, ಬಿಜೆಪಿ ಸದಸ್ಯರು ಪಾದಯಾತ್ರೆ ಮಾಡಲಿ: ಖರ್ಗೆ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ