Independence Day 2022: ಅನಾಮಧೇಯ ಹೋರಾಟಗಾರರಿಗೆ ಅಮೃತ ಮಹೋತ್ಸವ ಅರ್ಪಣೆ: ಬಸವರಾಜ ಬೊಮ್ಮಾಯಿ

CM Basavaraj Bommai Independence Day Speech: ದೇಶದ ಸ್ವಾವಲಂಬನೆಗೆ ರೈತರ ಕೊಡುಗೆ ದೊಡ್ಡದು ಎಂದ ಅವರು ಗಡಿಯಲ್ಲಿ ಚಳಿಮಳೆಗಾಳಿಗೆ ಜಗ್ಗದೆ ಕಾಯುತ್ತಿರುವ ಯೋಧರ ಕರ್ತವ್ಯ ತತ್ಪರತೆಯನ್ನು ಸ್ಮರಿಸಿದರು.

Independence Day 2022: ಅನಾಮಧೇಯ ಹೋರಾಟಗಾರರಿಗೆ ಅಮೃತ ಮಹೋತ್ಸವ ಅರ್ಪಣೆ: ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾತಂತ್ರ್ಯ ದಿನಾಚರಣೆ ಭಾಷಣ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 15, 2022 | 9:43 AM

ಬೆಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೋಟ್ಯಂತರ ಜನರು ಪಾಲ್ಗೊಂಡಿದ್ದರು. ಬದ್ಧತೆ ಹೋರಾಟದಿಂದ ಅತಿಶಕ್ತ ಬ್ರಿಟಿಷ್ ಸಾಮ್ರಾಜ್ಯವನ್ನು ಮಣಿಸಬಹುದು ಎಂಬುದನ್ನು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸಾಧಿಸಿ ತೋರಿಸಿದರು. ಬಹುತೇಕ ಹೋರಾಟಗಾರರು ಅನಾಮಧೇಯರಾಗಿಯೇ ಉಳಿದರು. ಅಂಥ ಅನಾಮಧೇಯ ಹೋರಾಟಗಾರರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಮರ್ಪಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಮೊದಲ ಪ್ರಧಾನಿ ಜವಾಹರ್​ಲಾಲ್ ನೆಹರು ಸೇರಿದಂತೆ ಹಲವರ ಕೊಡುಗೆಗಳನ್ನು ಸ್ಮರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ನಿರ್ಧಾರಗಳನ್ನು ಶ್ಲಾಘಿಸಿದರು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಗಡಿಗೆ ಭೇಟಿ ಕೊಟ್ಟಿದ್ದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಧೈರ್ಯ ಮತ್ತು ಮಾನವೀಯ ನಿರ್ಧಾರಗಳನ್ನು ನೆನಪಿಸಿಕೊಂಡರು. ದೇಶದ ಸ್ವಾವಲಂಬನೆಗೆ ರೈತರ ಕೊಡುಗೆ ದೊಡ್ಡದು ಎಂದ ಅವರು ಗಡಿಯಲ್ಲಿ ಚಳಿಮಳೆಗಾಳಿಗೆ ಜಗ್ಗದೆ ಕಾಯುತ್ತಿರುವ ಯೋಧರ ಕರ್ತವ್ಯ ತತ್ಪರತೆಯನ್ನು ಸ್ಮರಿಸಿದರು.

ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರುವುದರೊಂದಿಗೆ ಬೊಮ್ಮಾಯಿ ಭಾಷಣ ಆರಂಭಿಸಿದರು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ ಬಲಿದಾನ ಮಾಡಿದ್ದಾರೆ. ರೈತರು ಕರ ನಿರಾಕರಣೆ ಚಳವಳಿ ಮಾಡಿದ್ದರು. ಸಿಪಾಯಿ ದಂಗೆಗೆ ರೈತರ ಚಳವಳಿಯು ಪೂರಕವಾಗಿ ನಿಂತಿತ್ತು. ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಅಹಿಂಸೆಯ ಮಾರ್ಗದ ಮೂಲಕ ಸ್ವಾತಂತ್ರ್ಯ ಪಡೆಯಬಹುದು ಎಂಬುದನ್ನು ಮಹಾತ್ಮಾ ಗಾಂಧೀಜಿ ಸಾಧಿಸಿ ತೋರಿಸಿದರು. ದೇಶದ ಆಂತರಿಕ ಭದ್ರತೆಗೆ ನಿಂತಿರುವ ಪೊಲೀಸರಿಗೆ ನಮನ. ದೇಶದ ಅಭಿವೃದ್ಧಿಗೆ ಅನೇಕರ ಕೊಡುಗೆ ಇದೆ. ವಿಜ್ಞಾನಿಗಳು, ರೈತರು, ಕೂಲಿಕಾರ್ಮಿಕರಿಗೆ ನನ್ನ ನಮನ ಎಂದು ಹೇಳಿದರು.

ಸ್ವಾತಂತ್ರ್ಯೋತ್ಸದ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ನೆನಪಿಸಿಕೊಂಡರು. ನಮ್ಮ ನಾಯಕರು, ಯಡಿಯೂರಪ್ಪನವರು. ಅವರ ದಕ್ಷ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ಕೊವೀಡ್ ಅನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಅಮೃತ ಮಹೋತ್ಸವದ ಯೋಜನೆ ಗಳನ್ನು ಹಿಂದಿನ ಸ್ವಾತಂತ್ರ್ಯ ಸಂದರ್ಭದಲ್ಲಿ ಇದೇ ವೇದಿಕೆ ಮೇಲೆ ನಿಂತು ಘೋಷಣೆ ಮಾಡಿದ್ದೆ. ಇವಾಗ ಅದೆಲ್ಲವನ್ನು ಮಾಡಿ ಮುಗಿಸಿದ್ದೇವೆ ಎಂದು ನುಡಿದರು.

ಹೊಸ ಯೋಜನೆಗಳ ಘೋಷಣೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದರು. ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ, ಅಭ್ಯುದಯಕ್ಕಾಗಿ ಹಾಗು ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆ ನೀಡಲು ಸರ್ಕಾರ ತೀರ್ಮಾನಿದೆ ಎಂದರು. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ ₹ 250 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ ₹ 50 ಸಾವಿರ ಸಾಲದ ಸಹಾಯಧನ ಯೋಜನೆ ಕೊಡುತ್ತೇವೆ ಎಂದರು.

ರೈತರ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ವಿಸ್ತರಿಸುತ್ತೇವೆ. ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಯೋಜನೆ ವಿಸ್ತರಿಸುತ್ತೇವೆ. ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುತ್ತೇವೆ. ಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸುತ್ತೇವೆ. 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ. ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

Published On - 9:35 am, Mon, 15 August 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್