Independence Day 2023: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಭರ್ಜರಿ ಸಿದ್ಧತೆ, ಹಲವೆಡೆ ವಾಹನ ನಿಲುಗಡೆ ನಿಷಿದ್ಧ

ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಲಿದ್ದಾರೆ. ಸದ್ಯ ಈಗಾಗಲೇ ಪೆಂಡಾಲ್, ಪೀಠೋಪಕರಣ ಹಾಕಿ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Aug 13, 2023 | 11:12 AM

ಬೆಂಗಳೂರು, ಆ.13: ಆಗಸ್ಟ್​ 15ರಂದು 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ(Independence Day) ಹಿನ್ನೆಲೆ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ(Manik Shah Parade Ground) ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಜೊತೆಗೆ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಕೆಎಸ್​​ಆರ್​ಪಿ, ಸಿಎಆರ್, ಹೋಮ್​ಗಾರ್ಡ್, ಸಂಚಾರಿ ಪೊಲೀಸರು ಸೇರಿದಂತೆ 1350 ಪೊಲೀಸ್ ಸಿಬ್ಬಂದಿ, 38 ತುಕಡಿಗಳು ಭದ್ರತೆಗೆ ನಿಯೋಜನೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಯಾರಿ ಬಗ್ಗೆ ಮಾಹಿತಿ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವಿರಲಿದ್ದು ಭದ್ರತಾ ದೃಷ್ಟಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಮಾಣಿಕ್ ಶಾ ಪರೇಡ್ ಮೈದಾನದಲ್ಲೇ ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಆಯುಕ್ತರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ 100 ಸಿಸಿಟಿವಿ ಅಳವಡಿಸಲಾಗುತ್ತದೆ. 2 ಬ್ಯಾರೇಜ್ ಸ್ಕ್ಯಾನರ್ ಅಳವಡಿಕೆ, ಮುಂಜಾಗ್ರತಾ ಕ್ರಮವಾಗಿ ಆಂಬ್ಯುಲೆನ್ಸ್, ಅಗ್ನಿಶಾಮಕ ದಳ ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜನೆ ಮಾಡಲಾಗುತ್ತೆ ಎಂದರು.

ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಲಿದ್ದಾರೆ. ಸದ್ಯ ಈಗಾಗಲೇ ಪೆಂಡಾಲ್, ಪೀಠೋಪಕರಣ ಹಾಕಿ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 3 ದಿನಗಳ ಕಾಲ ಪರೇಡ್ ರಿಹರ್ಸಲ್ ನಡೆಯಲಿದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಡಿಪಿ ಬದಲಿಸಿದ ಪ್ರಧಾನಿ ಮೋದಿ

ಸಾಂಸ್ಕೃತಿಕ ಕಾರ್ಯಕ್ರಮಗಳ ತಂಡಗಳ ವಿವರ

  • ಶ್ರೀಪದ ದೇವರಾಜ್ ತಂಡದಿಂದ ನಾಡಗೀತೆ,ರೈತಗೀತೆ
  • ವೀರನಮನ- ಕರ್ನಾಟಕ ಪಬ್ಲಿಕ್ ಸ್ಕೂಲ್,ಸಾರಕ್ಕಿ ಮಕ್ಕಳ ತಂಡ
  • ವೀರಭೂಮಿ ವಿದುರಾಶ್ವತ್ಥ ಧ್ವಜ ಸತ್ಯಾಗ್ರಹ- ಬಿಬಿಎಂಪಿ ಸಂಯುಕ್ತ ಪ.ಪೂ.ಕಾಲೇಜ್,ಹೇರೋಹಳ್ಳಿ
  • ರೋಪ್ ಸ್ಕಿಪಿಂಗ್-ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ,ಬೈಲಹೊಂಗಲ, ಬೆಳಗಾವಿ
  • ಕಲಾರಿಪಯಟ್ಟು-ಎಂ.ಇ.ಜಿ ತಂಡ
  • ಟೆಂಟ್ ಪೆಗ್ಗಿಂಗ್-ಎ.ಎಸ್.ಸಿ ತಂಡ
  • ಮೋಟಾರ್ ಸೈಕಲ್ ಪ್ರದರ್ಶನ-ಎ.ಎಸ್.ಸಿ.ತಂಡ

ಯಾವ್ಯಾವ ರಸ್ತೆಯಲ್ಲಿ ನಿರ್ಬಂಧ?

  • ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
  • ಕಬ್ಬನ್ ರಸ್ತೆ, ಸಿ.ಟಿ.ಓ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
  • ಎಂ.ಜಿ.ರಸ್ತೆ,ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ರಸ್ತೆವರೆಗೆ

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ