AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show: ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ; ಸಮಯ, ಟಿಕೆಟ್​ ದರ, ಇಲ್ಲಿದೆ ಮಾಹಿತಿ

Independence Day 2025: ಸ್ವಾತಂತ್ರ್ಯ ದಿನಾಚರಣೆ ಹಿನ್ನಲ್ಲೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಇಂದಿನಿಂದ 12 ದಿನಗಳ ಕಾಲ 218ನೇ ವಾರ್ಷಿಕ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ವೀರಗಾಥೆ ಅನಾವರಣಗೊಂಡಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಫ್ಲವರ್ ಶೋನ ಶುಲ್ಕ, ಸಮಯ ಪಾರ್ಕಿಂಗ್‌ ವ್ಯವಸ್ಥೆ ಮಾಹಿತಿ ಇಲ್ಲಿದೆ.

Lalbagh Flower Show: ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ; ಸಮಯ, ಟಿಕೆಟ್​ ದರ, ಇಲ್ಲಿದೆ ಮಾಹಿತಿ
ಫಲಪುಷ್ಪ ಪ್ರದರ್ಶನ
ಗಂಗಾಧರ​ ಬ. ಸಾಬೋಜಿ
|

Updated on:Aug 07, 2025 | 10:15 AM

Share

ಬೆಂಗಳೂರು, ಆಗಸ್ಟ್ 07: ಸ್ವಾತಂತ್ರ್ಯ ದಿನಾಚರಣೆಗೆ (Independence Day) ದಿನಗಣನೆ ಶುರುವಾಗಿದೆ. ಪ್ರತಿ ಬಾರಿ ಸ್ವಾತಂತ್ರ್ಯ ದಿನಾಚರಣೆ ಹತ್ತಿರವಾದಂತೆ ಬೆಂಗಳೂರಿನ ಲಾಲ್‌ಬಾಗ್‌ನ ಫಲಪುಷ್ಟ (Lalbagh Flower Show) ಪ್ರದರ್ಶನದತ್ತ ಎಲ್ಲರ ಚಿತ್ತ ಹರಿಯುತ್ತದೆ. ಸಸ್ಯಕಾಶಿಯಲ್ಲಿ ಪುಷ್ಪಲೋಕವೇ ಧರೆಗಿಳಿಯುತ್ತದೆ. ಇದೀಗ ಇಂದಿನಿಂದ (ಆ.07) ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ ಆರಂಭಗೊಳ್ಳಲಿದ್ದು, 12 ದಿನ ಪ್ರದರ್ಶನಗೊಳ್ಳಲಿದೆ.

ಸಿಎಂ ಸಿದ್ದರಾಮಯ್ಯರಿಂದ ಚಾಲನೆ 

ಬ್ರಿಟೀಷರ ಸೊಲ್ಲಡಗಿಸಿದ್ದ ವೀರವನಿತೆ ಕಿತ್ತೂರು ರಾಣಿ, ಆಂಗ್ಲರ ನಿದ್ದೆಗೆಡಿಸಿದ್ದ ವೀರ ಸಂಗೊಳ್ಳಿ ರಾಯಣ್ಣ ಇವರಿಬ್ಬರೂ ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಸಂಕೇತ. ಸ್ವಾತಂತ್ರ್ಯೋತ್ಸವ ನಿಮಿತ್ತ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ತೋಟಗಾರಿಕಾ ಇಲಾಖೆ ನಡೆಸುವ 218ನೇ ಫಲಪುಷ್ಪ ಪ್ರದರ್ಶನದಲ್ಲಿ ಕಿತ್ತೂರಿನ ವೀರ ಪರಂಪರೆ ಅನಾವರಣಗೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10 ಗಂಟೆಗೆ ಗಾಜಿನ ಮನೆಯಲ್ಲಿ ಫ್ಲವರ್ ಶೋಗೆ ಚಾಲನೆ ನೀಡಲಿದ್ದಾರೆ. 12 ದಿನಗಳ ಪ್ರದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

ಕಿತ್ತೂರು ಸಂಸ್ಥಾನದ ಕೋಟೆಯ ಪ್ರಾತಿನಿಧಿಕ ಪುಷ್ಪ ಮಾದರಿ, ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆಗಳು, ಕೋಟೆ ವಿನ್ಯಾಸದ ವರ್ಟಿಕಲ್ ಗಾರ್ಡನ್, ರಾಯಣ್ಣ ಹುತಾತ್ಮರಾಗುವ ಸನ್ನಿವೇಶದ ಪ್ರದರ್ಶನ, ಹೂ ಜೋಡಣೆ ನಡುವೆ ವೀರವನಿತೆಯರ ಕಲಾಕೃತಿಗಳು, 109 ಪ್ರಭೇದದ 30 ಲಕ್ಷಕ್ಕೂ ಹೆಚ್ಚು ಹೂಗಳನ್ನ ಬಳಸಲಾಗುತ್ತಿದ್ದು, ರಾಣಿ ಚೆನ್ನಮ್ಮನ ಐಕ್ಯಸ್ಮಾರಕದ ಪುಷ್ಪ ಮಾದರಿ ಈ ಪ್ರದರ್ಶನದಲ್ಲಿರಲಿದೆ.

ಟಿಕೆಟ್​ ದರ, ಸಮಯ, ಪಾರ್ಕಿಂಗ್‌ ವ್ಯವಸ್ಥೆ

ಮುಂಜಾನೆ 6 ಗಂಟೆಯಿಂದ 9 ಗಂಟೆಯವರೆಗೆ ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 6,30ರವರೆಗೆ ಟಿಕೆಟ್‌ ನೀಡಲಾಗುತ್ತದೆ. ಗಾಜಿನ ಮನೆಯ ಪ್ರವೇಶವು ರಾತ್ರಿ 7 ಗಂಟೆವರೆಗೆ ಮಾತ್ರ ಇರಲಿದೆ. ವಾರಾಂತ್ಯ 100 ರೂ ಹಾಗೂ 12 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ 30 ರೂ. ಶುಲ್ಕವಿರುತ್ತೆ. ಸಮವಸ್ತ್ರದಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಎಲ್ಲಾ ದಿನಗಳಲ್ಲಿ ಉಚಿತ ಪ್ರವೇಶ ನೀಡಲಾಗುತ್ತೆ.

ಇದನ್ನೂ ಓದಿ: ಆಗಸ್ಟ್​ 7ರಿಂದ ಲಾಲ್​ಬಾಗ್​ನಲ್ಲಿ ಪುಷ್ಪ ಪ್ರದರ್ಶನ

ಅಷ್ಟೇ ಅಲ್ಲ, 136 ಸಿಸಿಟಿವಿ ಅಳವಡಿಕೆ ಜೊತೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಫ್ಲವರ್ ಶೋಗೆ ಆಗಮಿಸುವವರಿಗೆ ಶಾಂತಿನಗರ ಟಿಟಿಎಂಸಿ, ಜೆಸಿ ರಸ್ತೆ ಬಿಬಿಎಂಪಿ ಕಾಂಪ್ಲೆಕ್ಸ್ ಹಾಗೂ ಅಲ್‌ಅಮೀನ್ ಕಾಲೇಜು ಸಮೀಪ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 am, Thu, 7 August 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!