ಪ್ರಯಾಣಿಕರ ಗಮನಕ್ಕೆ: ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು
ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ಹೆಚ್ಚಿನ ಜನರು ತಮ್ಮ ಊರುಗಳಿಗೆ ತೆರಳುವ ನಿರೀಕ್ಷೆಯಿದೆ. ಈ ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆ ಬೆಂಗಳೂರಿನಿಂದ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ. ಈ ರೈಲುಗಳ ಸಮಯಾವಧಿ ಮತ್ತು ನಿಲುಗಡೆಗಳ ಮಾಹಿತಿ ಇಲ್ಲಿದೆ.

ಬೆಂಗಳೂರು, ಆಗಸ್ಟ್ 05: ಸ್ವಾತಂತ್ರ್ಯ ದಿನಾಚರಣೆ (Independance Day) ಮತ್ತು ಗಣೇಶ ಚತುರ್ಥಿಯ (Ganesh Chaturthi) ರಜೆಗೆ ಬೆಂಗಳೂರಿನಿಂದ ಅನೇಕ ಜನರು ತಮ್ಮ ಊರುಗಳಿಗೆ ತೆರಳುತ್ತಾರೆ. ಇದರಿಂದ, ರೈಲುಗಳಲ್ಲಿ ಹೆಚ್ಚುವರಿ ಜನದಟ್ಟಣೆ ಉಂಟಾಗುತ್ತದೆ. ಹೀಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಯಶವಂತಪುರ ಮಡಗಾಂವ್ ಮತ್ತು ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ (Bengaluru-Belagavi) ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ. ರೈಲು ಪ್ರಯಾಣದ ವಿವರ
- ರೈಲು ಸಂಖ್ಯೆ 06541/06542: ಯಶವಂತಪುರ-ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (ಒಂದು ಟ್ರಿಪ್)
- ರೈಲು ಸಂಖ್ಯೆ 06541: ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಆಗಸ್ಟ್ 14 ರಂದು ರಾತ್ರಿ 11:55 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಆಗಸ್ಟ್ 15 ರಂದು ಸಂಜೆ 6:05 ಕ್ಕೆ ಮಡಗಾಂವ್ ತಲುಪಲಿದೆ.
- ರೈಲು ಸಂಖ್ಯೆ 06542: ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 17, 2025 ರಂದು ರಾತ್ರಿ 10:15 ಕ್ಕೆ ಮಡಗಾಂವ್‌ನಿಂದ ಹೊರಟು, ಆಗಸ್ಟ್ 18 ರಂದು ಸಂಜೆ 4:30 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.
ಈ ರೈಲುಗಳು ಎರಡೂ ಮಾರ್ಗಗಳಲ್ಲಿ, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳಿ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ.
ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಆ.10ರಂದು ಮೋದಿ ಚಾಲನೆ
ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಅದರಲ್ಲಿ 12 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್‌ಆರ್/ಡಿ ಬೋಗಿಗಳಿವೆ.
- ರೈಲು ಸಂಖ್ಯೆ 06571/06572 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳು (ಒಂದು ಟ್ರಿಪ್)
- ರೈಲು ಸಂಖ್ಯೆ 06571: ಎಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 22 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 7:30 ಕ್ಕೆ ಬೆಳಗಾವಿ ತಲುವಲಿದೆ. ರೈಲು ಸಂಖ್ಯೆ 06572: ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 23 ರಂದು ಸಂಜೆ 5:30 ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
- ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳು (ಒಂದು ಟ್ರಿಪ್)
- ರೈಲು ಸಂಖ್ಯೆ 06573: ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 26 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:25 ಕ್ಕೆ ಬೆಳಗಾವಿ ತಲುಪಲಿದೆ.
- ರೈಲು ಸಂಖ್ಯೆ 06574: ಬೆಂಗಳೂರು- ಬೆಳಗಾವಿ-ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು27 ರಂದು ಸಂಜೆ 5:30 ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
ಈ ಎರಡೂ ರೈಲುಗಳು ಸಹ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ ಹರಿಹರ, ಎಸ್‌ಎಂಎಂ ಹಾವೇರಿ, ಎಸ್.ಎಸ್.ಎಸ್ ಹುಬ್ಬಳ್ಳಿ, ಧಾರವಾಡ, ಅಳ್ತಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತವೆ.
ಈ ರೈಲುಗಳಲ್ಲಿ 1 ಎಸಿ ಟು ಟೈಯರ್, 3 ಎಸಿತ್ರಿ ಟೈಯರ್, 10 ಸ್ವೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್‌ಆರ್/ಡಿ ಸೇರಿ ಒಟ್ಟು 19 ಬೋಗಿಗಳಿವೆ.
ಹೆಚ್ಚುವರಿ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸಲು, ದಯವಿಟ್ಟು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ರೈಲ್ವೇ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಿ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:50 pm, Tue, 5 August 25




