
ಬೆಂಗಳೂರು, ಆಗಸ್ಟ್ 05: ಸ್ವಾತಂತ್ರ್ಯ ದಿನಾಚರಣೆ (Independance Day) ಮತ್ತು ಗಣೇಶ ಚತುರ್ಥಿಯ (Ganesh Chaturthi) ರಜೆಗೆ ಬೆಂಗಳೂರಿನಿಂದ ಅನೇಕ ಜನರು ತಮ್ಮ ಊರುಗಳಿಗೆ ತೆರಳುತ್ತಾರೆ. ಇದರಿಂದ, ರೈಲುಗಳಲ್ಲಿ ಹೆಚ್ಚುವರಿ ಜನದಟ್ಟಣೆ ಉಂಟಾಗುತ್ತದೆ. ಹೀಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಯಶವಂತಪುರ ಮಡಗಾಂವ್ ಮತ್ತು ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ (Bengaluru-Belagavi) ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ.
ರೈಲು ಪ್ರಯಾಣದ ವಿವರ
ಈ ರೈಲುಗಳು ಎರಡೂ ಮಾರ್ಗಗಳಲ್ಲಿ, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳಿ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ.
ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಆ.10ರಂದು ಮೋದಿ ಚಾಲನೆ
ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಅದರಲ್ಲಿ 12 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್‌ಆರ್/ಡಿ ಬೋಗಿಗಳಿವೆ.
ಈ ಎರಡೂ ರೈಲುಗಳು ಸಹ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ ಹರಿಹರ, ಎಸ್‌ಎಂಎಂ ಹಾವೇರಿ, ಎಸ್.ಎಸ್.ಎಸ್ ಹುಬ್ಬಳ್ಳಿ, ಧಾರವಾಡ, ಅಳ್ತಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲುತ್ತವೆ.
ಈ ರೈಲುಗಳಲ್ಲಿ 1 ಎಸಿ ಟು ಟೈಯರ್, 3 ಎಸಿತ್ರಿ ಟೈಯರ್, 10 ಸ್ವೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್
ಮತ್ತು 2 ಎಸ್ಎಲ್‌ಆರ್/ಡಿ ಸೇರಿ ಒಟ್ಟು 19 ಬೋಗಿಗಳಿವೆ.
ಹೆಚ್ಚುವರಿ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸಲು, ದಯವಿಟ್ಟು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ರೈಲ್ವೇ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಿ.
Published On - 6:50 pm, Tue, 5 August 25