Chamrajpet Idgah Maidan: ಅನುಮತಿ ಕೊಡಲಿ, ಬಿಡಲಿ ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ; ನಾಗರಿಕ ಒಕ್ಕೂಟದ ಖಚಿತ ನುಡಿ

ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ ಎಂದು ಹೇಳಿದರು.

Chamrajpet Idgah Maidan: ಅನುಮತಿ ಕೊಡಲಿ, ಬಿಡಲಿ ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ; ನಾಗರಿಕ ಒಕ್ಕೂಟದ ಖಚಿತ ನುಡಿ
ಚಾಮರಾಜಪೇಟೆ ನಾಗರಿಕ ಒಕ್ಕೂಟದ ಮುಖಂಡರು ಬಿಬಿಎಂಪಿ ನಿರ್ಧಾರವನ್ನು ಸ್ವಾಗತಿಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 07, 2022 | 12:39 PM

ಬೆಂಗಳೂರು: ನಗರದ ವಿವಾದಿತ ಚಾಮರಾಜಪೇಟೆಯ (ಈದ್ಗಾ) ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸುವುದು ಶತಃಸಿದ್ಧ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ನಾಯಕರು ಒಕ್ಕೊರಲಿನಿಂದ ಹೇಳಿದರು. ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ‘ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ನಾವು ತೀರ್ಮಾನಿಸಿದ್ದೇವೆ’ ಎಂದು ಘೋಷಿಸಿದರು.

ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ಅನುಮತಿ ಕೊಡಲಿ ಬಿಡಲಿ, ಸ್ವಾತಂತ್ರ್ಯ ದಿನವನ್ನು ನಾವು ಸಂಭ್ರಮದಿಂದ ಆಚರಿಸಿಯೇ ತೀರುತ್ತೇವೆ. ಹಿಂದೂ ಸಂಘಟನೆಗಳೂ ಈ ಕಾರ್ಯಕ್ರಮಕ್ಕೆ ಸಹಯೋಗ ನೀಡುವ ಭರವಸೆ ನೀಡಿವೆ ಎಂದು ಹೇಳಿದರು. ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ನಮ್ಮ ಜೀವ ಹೋದರೂ ನಾವು ಧ್ವಜಾರೋಹಣ ಮಾಡುತ್ತೇವೆ. ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದರು.

ಚಾಮರಾಜಪೇಟೆ ಆಟದ ಮೈದಾನದಲ್ಲಿ ತಿರಂಗಾ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ವಕ್ಫ್​ ಮಂಡಳಿಯು ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಹೇಳಿದೆ. ನಾವೂ ಸಹ ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಬಳಿಯೂ ಮೈದಾನದ ಬಗ್ಗೆ ಎಲ್ಲ ದಾಖಲೆಗಳು ಇವೆ. ನಾವೂ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದರು. ಚಾಮರಾಜಪೇಟೆ ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್ ಹೆಸರಿಡಬೇಕು. ಇಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರೇ ಬಂದು ಧ್ವಜಾರೋಹಣ ಮಾಡಬೇಕು ಎಂದು ಹೇಳಿದರು.

ಚಾಮರಾಜಪೇಟೆ ನಾಗರಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುಕ್ಮಾಂಗದ ಮಾತನಾಡಿ, ಸತತ 3 ತಿಂಗಳ ಉಗ್ರ ಹೋರಾಟದ ನಂತರ ಈ ಫಲಿತಾಂಶ ಬಂದಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕನ್ನಡ ಪರ ಸಂಘಟನೆಗಳು ಹಾಗೂ ಹಿಂದೂ ಪರ ಸಂಘಟನೆಗಳು ಬೆಂಬಲ ಕೊಟ್ಟಿದ್ದವು. ನಾವು ಈ ವಿಚಾರವಾಗಿ ಬಂದ್​ಗೆ ಕರೆ ನೀಡಿದಾಗ ಎಲ್ಲರ ಬೆಂಬಲ ಸಿಕ್ಕಿತ್ತು. ಹೊಳೆ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ. ಯಾರು ಏನೇ ಹೇಳಿದರೂ ಮೈದಾನದಲ್ಲಿ ನಾವು ತ್ರಿವರ್ಣ ಧ್ವಜ ಹಾರಿಸುತ್ತೇವೆ ಎಂದು ಹೇಳಿದರು.

ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ಮಾತನಾಡಿ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಂದ ಗೊಂದಲವಾಯಿತು. ಈ ಕ್ಷೇತ್ರದ ಶಾಸಕರು, ಇಬ್ಬರು ಮೂವರು ಮಾಜಿ ಕಾರ್ಪೊರೇಟರ್​ಗಳ ಕುಮ್ಮಕ್ಕಿನಿಂದ ಸಮಸ್ಯೆಯಾಗುತ್ತಿತ್ತು. ಪಾಲಿಕೆಯ ಹೆಸರಿನ ಖಾತೆಯಲ್ಲಿದ್ದ ಸ್ವತ್ತು, ಕಂದಾಯ ಇಲಾಖೆಗೆ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಕಂದಾಯ ಇಲಾಖೆಗೆ ಹಸ್ತಾಂತರ ಮಾಡುವುದು ಅನಿವಾರ್ಯ. ಕಂದಾಯ ಇಲಾಖೆಯು ಈ ಸ್ವತ್ತಿಗೆ ಜಯಚಾಮರಾಜೇಂದ್ರ ಆಟದ ಮೈದಾನವೆಂದು ನಾಮಕರಣ ಮಾಡಬೇಕು ಎಂದು ಕೋರಿದರು.

ಬಿಬಿಎಂಪಿ ನಿರ್ಧಾರಕ್ಕೆ ಪಟಾಕಿ ಹೊಡೆದು ಸ್ವಾಗತ

ಚಾಮರಾಜಪೇಟೆ ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕಂದಾಯ ಇಲಾಖೆಗೆ ಸೇರಿದ್ದು ಎನ್ನುವ ಬಿಬಿಎಂಪಿ ಜಂಟಿ ಆಯುಕ್ತರ ನಿರ್ಣಯವನ್ನು ಚಾಮರಾಜಪೇಟೆಯ ಹಲವು ನಿವಾಸಿಗಳು ಸ್ವಾಗತಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಶಾಸಕ ಜಮೀರ್ ಅಹಮ್ಮದ್ ಕಚೇರಿಯ ಪಕ್ಕದಲ್ಲೇ ವಿಜಯೋತ್ಸವ ಆಚರಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

Published On - 12:39 pm, Sun, 7 August 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ