5ನೇ ಆವೃತ್ತಿ “ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋ”ಗೆ ಸಿಎಂ ಬೊಮ್ಮಾಯಿ ಚಾಲನೆ, ಸಣ್ಣ ಕೈಗಾರಿಕೆಗಳಿಗೆ ಮುಕ್ತ ಅವಕಾಶ

| Updated By: ಆಯೇಷಾ ಬಾನು

Updated on: Sep 15, 2022 | 11:15 AM

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಇವತ್ತಿನಿಂದ ಮೂರು ದಿನ ಕಾಲ 5ನೇ ಆವೃತ್ತಿ "ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋ" ಆಯೋಜನೆಗೊಂಡಿದೆ.

5ನೇ ಆವೃತ್ತಿ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋಗೆ ಸಿಎಂ ಬೊಮ್ಮಾಯಿ ಚಾಲನೆ, ಸಣ್ಣ ಕೈಗಾರಿಕೆಗಳಿಗೆ ಮುಕ್ತ ಅವಕಾಶ
ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋಗೆ ಸಿಎಂ ಬೊಮ್ಮಾಯಿ ಚಾಲನೆ
Follow us on

ನೆಲಮಂಗಲ: ಮಾದವಾರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಇವತ್ತಿನಿಂದ ಮೂರು ದಿನ ಕಾಲ ಅಂದರೆ ಸೆ.15 ರಿಂದ ಸೆ.17 ರವರೆಗೆ 5ನೇ ಆವೃತ್ತಿ “ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋ” ಆಯೋಜನೆಗೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ, ಡಾ.ಅಶ್ವಥ್ ನಾರಾಯಣ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ವಸ್ತು ಪ್ರದರ್ಶನ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಲಘು ಉದ್ಯೋಗ ಭಾರತಿ ಕರ್ನಾಟಕ ಶಾಖೆ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಈ ಪ್ರದರ್ಶನದಲ್ಲಿ ಏರೋಸ್ಪೇಸ್, ಡಿಫೆನ್ಸ್‌ ಮತ್ತು ಜನರಲ್ ಇಂಜಿನಿಯರಿಂಗ್ ವಿಭಾಗಗಳಿಗೆ ಸಂಬಂಧಿಸಿದಂತೆ ಡಿಆರ್ ಡಿಓ, ಇಸ್ರೋ, ಎಚ್ ಎಎಲ್, ಬಿಇಎಲ್, ಬಿಎಚ್ ಇಎಲ್, ಬಿಇಎಂಎಲ್ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕೈಗಾರಿಕೆಗಳು ಹಾಗೂ ಖಾಸಗಿ ಕೈಗಾರಿಕೆಗಳು ಸೇರಿದಂತೆ 400 ಕ್ಕೂ ಹೆಚ್ಚು ಮಳಿಗೆಗಳು ಪ್ರದರ್ಶನದಲ್ಲಿ ತೆರೆದುಕೊಳ್ಳಲಿವೆ. ಪ್ರದರ್ಶನದಲ್ಲಿ ಸುಮಾರು 20 ಸಾವಿರ ವ್ಯಾಪಾರ ಪ್ರತಿನಿಧಿಗಳು ಭಾಗವಹಿಸಲಿದ್ದು 159 ತಜ್ಞರು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಉಪನ್ಯಾಸ ಸಹ ನೀಡಲಿದ್ದಾರೆ. ಅತೀ ಸಣ್ಣ ಹಾಗೂ ಸಣ್ಣ ಕೈಗಾರಿಕೆಗಳ ವ್ಯವಹಾರ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಈ ಪ್ರದರ್ಶನ ಏರ್ಪಡಿಸಲಾಗಿದೆ.

ರಕ್ಷಣಾ ಇಲಾಖೆಗೆ ಸಂಬಂಧಿಸಿದ ಉಪಕರಣಗಳ ಉತ್ಪಾದನೆ ಮಾಡಬಯಸುವ ಕೈಗಾರಿಕೆಗಳಿಗೆ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ಅವಕಾಶವನ್ನು ಸಹ ಕಲ್ಪಿಸಲಾಗಿದ್ದು, ನೋಂದಿತ ಕೈಗಾರಿಕೆಗಳ ಮಾಲೀಕರ ಸಾಧಕ ಬಾಧಕಗಳ ಬಗ್ಗೆ ಸಮಾಲೋಚಿಸಿಸಿ ರಕ್ಷಣಾ ಇಲಾಖೆ ಅಧಿಕಾರಿಗಳು ಮುಂದಿನ ಕ್ರಮ ಜರುಗಿಸಲಿದ್ದಾರೆ. ಸಣ್ಣ ಕೈಗಾರಿಕೆಗಳಿಗೆ ಈ ಪ್ರದರ್ಶನ ಉತ್ತಮ ವೇದಿಕೆ ಇದಾಗಿದೆ. ಇನ್ನೂ ಈ ಶೋದಿಂದ ಪೀಣ್ಯಾ, ಡಾಬಸ್ ಪೇಟೆ, ನೆಲಮಂಗಲ ಭಾಗದ ಕೈಗಾರಿಗಳಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಸಣ್ಣ ಕೈಗಾರಿಕೆಗಳಿಗೆ ಮುಕ್ತ ಅವಕಾಶ ಇದೆ. ಇಂಜಿನಿಯರಿಂಗ್ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ, ಉಚಿತ ಪ್ರವೇಶ ಮತ್ತು ವಸ್ತು ಪ್ರದರ್ಶನಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:15 am, Thu, 15 September 22