AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಭಾರತಕ್ಕೆ ಈಗಿಂದಲೇ ತಯಾರಿ ಅಗತ್ಯ: ಪ್ರಲ್ಹಾದ್ ಜೋಶಿ

ಮೂರು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ಭಾರತ 2047 ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಷ್ಟ್ರವನ್ನಾಗಿಸುವುದೇ ವಿಷನ್ ಇಂಡಿಯಾ @2047 ಗುರಿಯಾಗಿದೆ.

2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಭಾರತಕ್ಕೆ ಈಗಿಂದಲೇ ತಯಾರಿ ಅಗತ್ಯ: ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
TV9 Web
| Updated By: Rakesh Nayak Manchi|

Updated on:Nov 20, 2022 | 7:11 AM

Share

ಬೆಂಗಳೂರು: ಮೂರು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ಭಾರತ 2047 ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಷ್ಟ್ರವನ್ನಾಗಿಸುವುದೇ ವಿಷನ್ ಇಂಡಿಯಾ @2047 ಗುರಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad joshi) ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು (ನ.19) ವಿಷನ್ ಇಂಡಿಯಾ @2047 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತ 2047 ಕ್ಕೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದೆ. ಇದಕ್ಕೆ ಈಗಿನಿಂದಲೇ ಎಲ್ಲ ಕ್ಷೇತ್ರಗಳಲ್ಲೂ ತಯಾರಿ ಅಗತ್ಯವಾಗಿದೆ. 30 ಟ್ರಿಲಿಯನ್ ಡಾಲರ್ ಆರ್ಥಿಕತೆ ದೇಶವಾದಾಗ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಿ ಭಾರತ ಬದಲಾಗಿರುತ್ತೆ. ದೇಶಕ್ಕೆ ಹೇರಳವಾದ ವಿದ್ಯುತ್ ಅವಶ್ಯಕತೆ ಇದ್ದು, ಅದಕ್ಕಾಗಿ ಕಲ್ಲಿದ್ದಲು ಉತ್ಪಾದನೆಯನ್ನೂ ಹೆಚ್ಚಿಸುವತ್ತ ಕೇಂದ್ರ ಕಲ್ಲಿದ್ದಲು ಸಚಿವಾಲಯ ಗಮನ ಹರಿಸಿದೆ ಎಂದು ಹೇಳಿದರು‌.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಗಾರವು ಮುಂಬರುವ 25 ವರ್ಷಗಳಲ್ಲಿ ಭಾರತವನ್ನು ಹೇಗೆ ಪ್ರಗತಿಯ ಪಥದಲ್ಲಿ ಮುನ್ನಡೆಸಬಹುದು ಎಂಬ ಬಗ್ಗೆ ಸ್ಟಾರ್ಟಪ್‌ಗಳು ಮತ್ತು ಉದ್ಯಮಶೀಲತೆ ಕೇಂದ್ರೀಕರಿಸಲಿದೆ ಎಂದರು.

“ಅಮೃತ್ ಕಾಲ” ಎಂದು ಕರೆಯಲ್ಪಡುವ ಮುಂದಿನ ಎರಡೂವರೆ ದಶಕಗಳು ಭಾರತದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಲಿವೆ. ಈ ಅವಧಿಯಲ್ಲಿ ಭಾರತವನ್ನು ಅಭೂತಪೂರ್ವ ರೀತಿಯಲ್ಲಿ ಪರಿವರ್ತಿಸುವುದು ಪ್ರಧಾನಿ ಮೋದಿಯವರ ದೃಷ್ಟಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತವು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ

ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೊಯಲ್ ದೇಶದ ತಂತ್ರಜ್ಞಾನದ ರಾಜಧಾನಿಯಾಗಿರುವ ಬೆಂಗಳೂರು ಸಹಭಾಗಿತ್ವ ಸಹಕಾರ ಮತ್ತು ಸ್ಪರ್ಧೆಗಳಿಂದ ಜಾಗತಿಕ ಮಟ್ಟದಲ್ಲಿ ವಿರಾಜಮಾನವಾಗಿದೆ ಎಂದರು. ಭಾರತವು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದ್ದು, 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಹೊರಹೊಮ್ಮಲಿದೆ. ಕೇಂದ್ರ ಸರಕಾರವು ದೊಡ್ಡ ಉದ್ಯಮಿಗಳಂತೆಯೇ ಸಣ್ಣಪುಟ್ಟ ವ್ಯಾಪಾರಿಗಳಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಓಪನ್ ಡೇಟಾ ಇ-ಕಾಮರ್ಸ್‌ ವ್ಯವಸ್ಥೆಗೆ ಚಾಲನೆ ನೀಡಿದ್ದು, ಇದೂ ಸಹ ಬೆಂಗಳೂರಿನಿಂದಲೇ ಆರಂಭವಾಗಬೇಕು ಎಂದು ಗೊಯಲ್ ತಮ್ಮ ಆಶಯ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Sat, 19 November 22