AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಫೈನಲ್ ಪಂದ್ಯ; ಮ್ಯಾಚ್ ವೀಕ್ಷಣೆಗೆ ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಲ್ಲಿ ವ್ಯವಸ್ಥೆ

ಮ್ಯಾಚ್ ವೀಕ್ಷಣೆಗೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಸಜ್ಜಾಗಿದೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗಾಗಿ ಪಬ್​ಗಳಲ್ಲಿ ಎಲ್​ಇಡಿ ಟಿವಿಗಳ ಅಳವಡಿಕೆ ಮಾಡಲಾಗಿದ್ದು, ನಗರದ ಪಬ್​ಗಳಲ್ಲಿ ಪಂದ್ಯ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋರಮಂಗಲದ ಟಿಪ್ಸಿ ಬುಲ್ ಪಬ್​ನಲ್ಲಿ ವಿಶೇಷವಾಗಿ 50 ಅಡಿ ತ್ರಿವರ್ಣ ಧ್ವಜ ಹಾಕಿ ವೆಲಕಮ್ ಮಾಡಲು ಪ್ಲ್ಯಾನ್ ಮಾಡಲಾಗಿದೆ.

ವಿಶ್ವಕಪ್​ ಫೈನಲ್ ಪಂದ್ಯ; ಮ್ಯಾಚ್ ವೀಕ್ಷಣೆಗೆ ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಲ್ಲಿ ವ್ಯವಸ್ಥೆ
ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ವಿಶ್ವಕಪ್ ಪಂದ್ಯ ವೀಕ್ಷಣೆಗೆ ವ್ಯವಸ್ಥೆ
Vinayak Hanamant Gurav
| Edited By: |

Updated on:Nov 18, 2023 | 10:17 PM

Share

ಬೆಂಗಳೂರು, ನ.18: ಭಾರತ ಮತ್ತು ಆಸ್ಟ್ರೇಲಿಯಾ ಹೈ ಓಲ್ಟೇಜ್ ಫೈನಲ್ ಪಂದ್ಯ ನಾಳೆ(ನ.19)ಅಹಮದಾಬಾದ್(Ahmedabad)ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಶ್ವಕಪ್(World Cup)​ನ ಲೀಗ್​ ಪಂದ್ಯಗಳಲ್ಲಿ ಯಾವುದೇ ಒಂದು ಸೋಲು ಕಾಣದೆ ಭಾರತ ಫೈನಲ್ ಪ್ರವೇಶಿಸಿದೆ. ಈ ಹಿನ್ನಲೆಯಲ್ಲಿ ಮ್ಯಾಚ್ ವೀಕ್ಷಣೆಗೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಸಜ್ಜಾಗಿದೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗಾಗಿ ಪಬ್​ಗಳಲ್ಲಿ ಎಲ್​ಇಡಿ ಟಿವಿಗಳ ಅಳವಡಿಕೆ ಮಾಡಲಾಗಿದ್ದು, ನಗರದ ಪಬ್​ಗಳಲ್ಲಿ ಪಂದ್ಯ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋರಮಂಗಲದ ಟಿಪ್ಸಿ ಬುಲ್ ಪಬ್​ನಲ್ಲಿ ವಿಶೇಷವಾಗಿ 50 ಅಡಿ ತ್ರಿವರ್ಣ ಧ್ವಜ ಹಾಕಿ ವೆಲಕಮ್ ಮಾಡಲು ಪ್ಲ್ಯಾನ್ ಮಾಡಿದ್ದು, ನಾಳೆ 2 ಗಂಟೆಯಿಂದ ಪಂದ್ಯ ಮುಗಿಯುವವರೆಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡಲಾಗಿದೆ.

ಎಲ್ಲೆಲ್ಲಿ ಪಂದ್ಯ ವೀಕ್ಷಿಸಲು ವ್ಯವಸ್ಥೆ

ವಿಶ್ವಕಪ್ ಫೈನಲ್ ಪಂದ್ಯದ ನೇರಪ್ರಸಾರ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ಈಗಾಗಲೇ ಈ ಕೆಳಕಂಡ ಜಿಲ್ಲೆಗಳಲ್ಲಿ ಎಲ್​ಇಡಿ ಸ್ಕ್ರೀನ್ ಅಳವಡಿಸಲಾಗಿದೆ.

ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನೇರ ಪ್ರಸಾರ

ತುಮಕೂರು: ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನೇರ ಪ್ರಸಾರ ಮಾಡಿಕೊಳ್ಳಲಾಗಿದೆ. ತುಮಕೂರು ಜಿಲ್ಲಾಡಳಿತ ವತಿಯಿಂದ ಬೃಹತ್ ಪರದೇ ಮೇಲೆ ಕ್ರಿಕೆಟ್ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಲಿರುವ ಕ್ರಿಕೆಟ್ ಪಂದ್ಯಕ್ಕೆ ಜಿಲ್ಲಾಡಳಿತವೇ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ:ಹಿಂದಿ ಬಿಗ್​ಬಾಸ್​ನಲ್ಲಿ ಕ್ರಿಕೆಟ್ ಮೇನಿಯಾ, ಕನ್ನಡ ಬಿಗ್​ಬಾಸ್ ಸ್ಪರ್ಧಿಗಳಿಗೆ ವಿಶ್ವಕಪ್ ಫೈನಲ್ ನೋಡೊ ಭಾಗ್ಯ ಇಲ್ಲವಾ?

ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರ

ರಾಮನಗರ: ರಾಮನಗರ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ. ಬೃಹತ್ ಎಲ್​ಇಇಡಿ ಅಳವಡಿಸಿ ನೇರಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಉಚಿತ ವ್ಯವಸ್ಥೆ ಆಗಿದೆ. ಇನ್ನು ಪೊಲೀಸ್ ಭದ್ರತೆಯಲ್ಲಿ ಪಂದ್ಯಾವಳಿ ವೀಕ್ಷಣೆ ನಡೆಯಲಿದೆ.

ಭಾರತ ತಂಡಕ್ಕೆ ಶುಭ ಕೋರಿದ ಕ್ರೀಡಾ ಸಚಿವ ಬಿ. ನಾಗೇಂದ್ರ

ಬಳ್ಳಾರಿ: ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಪೈನಲ್ ಮ್ಯಾಚ್ ಹಿನ್ನಲೆ ಭಾರತ ತಂಡಕ್ಕೆ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಶುಭ ಕೋರಿದ್ದಾರೆ. ಫೈನಲ್ ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿ. ಭಾರತದ ಕೀರ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆ ಬರೆಯಲಿ. ರಾಜ್ಯದ ಕ್ರೀಡ ಸಚಿವನಾಗಿ ಶುಭ ಹಾರೈಸುವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sat, 18 November 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ