AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು

ಬುಧವಾರ (ಅ.16) ದಿಂದ ರವಿವಾರ (ಅ.20)ರವರೆಗು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್​ ನಡುವೆ ಟೆಸ್ಟ್​ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ.

ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು
ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ
ವಿವೇಕ ಬಿರಾದಾರ
|

Updated on: Oct 15, 2024 | 7:24 AM

Share

ಬೆಂಗಳೂರು, ಅಕ್ಟೋಬರ್​ 15: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಬುಧವಾರ (ಅ.16) ರಿಂದ ರವಿವಾರ (ಅ.20)ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ (India vs New Zealand Test Cricket) ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಐದೂ ದಿನವು ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ವಾಹನಗಳ ನಿಲುಗಡೆ ನಿಷೇಧ

  • ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ. ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ.
  • ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
  • ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ವಾಹನಗಳ ನಿಲುಗಡೆ ಸ್ಥಳಗಳು

  • ಯು.ಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.
  • ಕಿಂಗ್ಸ್ ರಸ್ತೆ, (ಕಬ್ಬನ್‌ ಪಾರ್ಕ್ ಒಳಭಾಗ) ವಾಹನ ನಿಲ್ಲಿಸಬಹುದು.
  • ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್​ವರೆಗೆ ಕ್ಯಾಬ್/ಆಟೋರಿಕ್ಷಾಗಳು ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್