ಭಾರತ-ನ್ಯೂಜಿಲೆಂಡ್ ಟೆಸ್ಟ್ ಪಂದ್ಯ
ಬೆಂಗಳೂರು, ಅಕ್ಟೋಬರ್ 15: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಬುಧವಾರ (ಅ.16) ರಿಂದ ರವಿವಾರ (ಅ.20)ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ (India vs New Zealand Test Cricket) ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಐದೂ ದಿನವು ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
ವಾಹನಗಳ ನಿಲುಗಡೆ ನಿಷೇಧ
- ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
- ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ. ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ.
- ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
- ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.
ವಾಹನಗಳ ನಿಲುಗಡೆ ಸ್ಥಳಗಳು
- ಯು.ಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.
- ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.
- ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ) ವಾಹನ ನಿಲ್ಲಿಸಬಹುದು.
- ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್ವರೆಗೆ ಕ್ಯಾಬ್/ಆಟೋರಿಕ್ಷಾಗಳು ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ