AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.16ರಂದು ಬೆಂಗಳೂರಿನಲ್ಲಿ ಭಾರತ-ವೆಸ್ಟ್ ಇಂಡೀಸ್ ವ್ಯಾಚ್: ರಸ್ತೆಗಳಲ್ಲಿ ವಾಹನ ಸಂಚಾರ ಮಾರ್ಪಾಡು, ಪಾರ್ಕಿಂಗ್ ಬ್ಯಾನ್

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದು ಟಿ-20 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ ಎರಡು ಪಂದ್ಯಗಳಲ್ಲಿ ಗೆದ್ದು ಸಮಯಬಲ ಸಾಧಿಸಿವೆ. ಹೀಗಾಗಿ ನಾಳೆ (ಅಕ್ಟೋಬರ್ 16) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ತೀವ್ರ ರೋಚಕವಾಗರಲಿದೆ. ಈ ಫೈನಲ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿರುವ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಓಡಾಡಲಿರುವ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ಬಿಗ್ ಅಲರ್ಟ್ ನೀಡಿದ್ದಾರೆ.

ಅ.16ರಂದು ಬೆಂಗಳೂರಿನಲ್ಲಿ ಭಾರತ-ವೆಸ್ಟ್ ಇಂಡೀಸ್ ವ್ಯಾಚ್: ರಸ್ತೆಗಳಲ್ಲಿ ವಾಹನ ಸಂಚಾರ ಮಾರ್ಪಾಡು, ಪಾರ್ಕಿಂಗ್ ಬ್ಯಾನ್
M Chinnaswamy Stadium
ರಮೇಶ್ ಬಿ. ಜವಳಗೇರಾ
|

Updated on:Oct 16, 2026 | 4:52 PM

Share

ಬೆಂಗಳೂರು, ಅಕ್ಟೋಬರ್ 16): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂದರೆ (ಅಕ್ಟೋಬರ್ 17) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂತಿಮ ಟಿ-20 ಪಂದ್ಯ ನಡೆಯಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸಂಚಾರಿ ಪೊಲೀಸರು, ಕೆಲ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ. ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ಸಮಸ್ಯೆ ಆಗಬಾರದು ಎನ್ನುವ ದೃಷ್ಟಿಯಿಂದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಮಾರ್ಪಾಡು ಮಾಡಲಾಗಿದೆ. ಇನ್ನು ಪಾರ್ಕಿಂಗ್ ಸಹ ಸಂಪೂರ್ಣ ನಿಷೇಧಿಸಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ, ಎಲ್ಲಿ ವಾಹನ ನಿಲ್ಲಿಸಬಹುದು ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಸಾರ್ವಜನಿಕ ಸಂಪರ್ಕ ಬಳಲು ಮನವಿ

ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಬಹುದಾದ ಸಂಚಾರ ದಟ್ಟಣೆ ಉಂಟಾಗಬಹುದು. ಹೀಗಾಗಿ ಸಂಚಾರ ಸುಗಮಗೊಳಿಸುವ ಸಲುವಾಗಿ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ (ಬಿ.ಎಂ.ಟಿ.ಸಿ) ವಾಹನಗಳನ್ನು ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ಅಭಿಮಾನಿಗಳಿಗೆ ನಮ್ಮ ಮೆಟ್ರೋದಿಂದ ಭರ್ಜರಿ ಗುಡ್ ನ್ಯೂಸ್: ಮಧ್ಯರಾತ್ರಿವರೆಗೂ ಮೆಟ್ರೋ ಸಂಚಾರ ವಿಸ್ತರಣೆ

ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧ?

  • ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ.
  • ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ.
  • ಲಿಂಕ್ ರಸ್ತೆ: ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ​ಸೆಂಟ್ರಲ್ ಸ್ಟ್ರೀಟ್ ರಸ್ತೆ.
  • ಕಬ್ಬನ್ ರಸ್ತೆ: ಸಿಟಿಒ ವೃತ್ತದಿಂದ ಡಿಕನ್ಸ್‌ನ್ ರಸ್ತೆ ಎರಡೂ ಬದಿ. ಕಾಮರಾಜ್‌ ರಸ್ತೆ ಜಂಕ್ಷನ್‌ನಿಂದ ಡಿಕನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
  • ಸೇಂಟ್ ಮಾರ್ಕ್ಸ್ ರಸ್ತೆ: ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ.
  • ​ಮ್ಯೂಸಿಯಂ ರಸ್ತೆ: ಎಂ.ಜಿ. ರಸ್ತೆಯಿಂದ ಸೇಂಟ್​ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ.
  • ಕಸ್ತೂರಬಾ ರಸ್ತೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆ: ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಆರ್‌ಆರ್‌ಎಂಆರ್ ವೃತ್ತದವರೆಗೆ.
  • ಕಬ್ಬನ್‌ ಪಾರ್ಕ್ ಒಳಭಾಗ: ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್‌ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ಲ್ಯಾವೆಲ್ಲೆ ರಸ್ತೆ: ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ.
  • ವಿಠಲ್ ಮಲ್ಯ ರಸ್ತೆ: ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್​ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ.

ಪಾರ್ಕಿಂಗ್ ಗೆ ಪರ್ಯಾಯ ಸ್ಥಳಗಳು

  • ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳ ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ.
  • ಫ್ರೀಡಂ ಪಾರ್ಕ ಎಂ.ಎಲ್.ಸಿ.ಪಿ ಪಾರ್ಕಿಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  • ಸೆಂಟ್ ಜೋಸೆಫ್ (ಯುರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಯಲ್ಲಿ ನಿಲುಗಡೆಗೆ ವ್ಯವಸೆ ಮಾಡಲಾಗಿದೆ.
  • ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಟೆನ್ನಿಸ್ ಕ್ಲಬ್ ರಸ್ತೆಯಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಸ್ಟೇಡಿಯಂ ಪ್ರವೇಶಿಸಲು ಹಾಗೂ ನಿರ್ಗಮಿಸುವ ಸ್ಥಳಗಳು

  •  ಗೇಟ್‌ನಂ-ಇ] ರಿಂದ ಗೇಟ್ ನಂ-ಇತಿ ಮತ್ತು ಗೇಟ್‌ನಂ ಇ-18, ಇ-19, ಇ-22 ಹಾಗೂ ಇ-23 ಕಬ್ಬನ್‌ ರಸ್ತೆಯಲ್ಲಿದ್ದು, ಈ ಗೇಟ್‌ಗಳ ಮುಖಾಂತರ ಪ್ರವೇಶಿಸಬಹುದಾಗಿದೆ.
  • ಗೇಟ್ ನಂ. ಇ-11 ರಿಂದ ಗೇಟ್ ನಂ ಇ-17 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶಿಸಬಹುದಾಗಿದೆ.
  • ಕ್ಲೀನ್ಸ್ ರಸ್ತೆಯಲ್ಲಿ ಗೇಟ್ ನಂ. ಇ-07 ಮತ್ತು ಇ-08 ದಲ್ಲಿ ಪ್ರವೇಶವಿದ್ದು, ಗೇಟ್ ನಂ- ಇ-09, ಇ-9ಎ ಗೇಟ್‌ನಲ್ಲಿ ನಿರ್ಗಮಿಸಲು ಮಾತ್ರ ಅವಕಾಶವಿರುತ್ತದೆ.
  • ಕ್ಲೀನ್ಸ್ ರಸ್ತೆಯ ಗೇಟ್ ನಂ-ಇ10 ರಲ್ಲಿ ಆಟಗಾರರು, ಸಹ ಆಟಗಾರರು ಹಾಗೂ ಸ್ಟೇಡಿಯಂ ಅಧಿಕಾರಿಗಳು ವಿ.ಐ.ಪಿ ರವರಿಗೆ ಅವಕಾಶವಿರುತ್ತದೆ.

ಓಲಾ, ಉಬರ್, ಆಟೋ, ಕ್ಯಾಬ್‌ ಪಿಕ್ ಅಪ್ ಮತ್ತು ಡ್ರಾಪ್ ಸ್ಥಳಗಳು

  • ಪಿಕ್ ಅಪ್ – ಆರ್​​ವಿ ಗ್ರೌಂಡ್
  • ಡ್ರಾಪ್ – ಗೇಟ್​​ ನಂಬರ್ 6

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Fri, 16 October 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More