ಮೋದಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಹಾಫ್ ಕೋಟ್ ಉಡುಗೊರೆಯಾಗಿ ನೀಡಿದ ಇಂಡಿಯನ್ ಆಯಿಲ್ ಕಂಪನಿ

ಇಂಡಿಯನ್ ಆಯಿಲ್ ಕಂಪನಿಯು ಪ್ರಧಾನಿ ಮೋದಿ ಅವರಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಹಾಫ್ ಕೋಟ್ ಉಡುಗೊರೆಯಾಗಿ ನೀಡಿದೆ.

ಮೋದಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಹಾಫ್ ಕೋಟ್ ಉಡುಗೊರೆಯಾಗಿ ನೀಡಿದ ಇಂಡಿಯನ್ ಆಯಿಲ್ ಕಂಪನಿ
ಮೋದಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಹಾಫ್ ಕೋಟ್ ಉಡುಗೊರೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 06, 2023 | 3:08 PM

ಬೆಂಗಳೂರು: ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆಯೋಜಿಸಿದ್ದ ‘ಭಾರತ ಇಂಧನ ಸಪ್ತಾಹ-2023’ಕ್ಕೆ ಇಂದು(ಫೆಬ್ರವರಿ 06) ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಏಕಬಳಕೆ ಪೆಟ್ ಬಾಟಲ್ ಮರು ಬಳಸಿ ತಯಾರಿಸಿದ ಜಾಕೆಟ್, ಸೋಲಾರ್ ಕುಕ್ ಟಾಪ್ ಬಿಡುಗಡೆ ಮಾಡಿದ ಅವರು, ಹಸಿರು ಇಂಧನ ಮೂಲದಿಂದ ಚಾಲಿತ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು‌. ಇದೇ ಸಂದರ್ಭದಲ್ಲಿ ನರೇಂದ್ರ ಮೋದಿಯವರಿಗೆ ಇಂಡಿಯನ್ ಆಯಿಲ್​ನ ಅಧ್ಯಕ್ಷರು ತ್ಯಾಜ್ಯ ಪೆಟ್​ ಬಾಟಲಿಗಳಿಂದ ತಯಾರಿಸಿದ ಪೇಟ ಮತ್ತು ಹಾಫ್ ಕೋಟ್ ಉಡುಗೊರೆಯಾಗಿ ನೀಡಿದರು.

ಇದನ್ನೂ ಓದಿ: PM Modi in Karnataka Live: ಇಂಧನ ಕ್ಷೇತ್ರದಲ್ಲಿ ಒನ್ ನೇಷನ್, ಒನ್​ ಗ್ರಿಡ್​ ಆಶಯದತ್ತ ದಾಪುಗಾಲು: ನರೇಂದ್ರ ಮೋದಿ

ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಸಮವಸ್ತ್ರವನ್ನು ಮೋದಿ ಅವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಇಂಡಿಯನ್ ಆಯಿಲ್ ಕಂಪನಿ ಲೋಕಾರ್ಪಣೆ ಮಾಡಿತು. ಬಳಿಕ ಪರಿಸರ ಇಂಧನದ ಹಲವು ಸಾಧ್ಯತೆಗಳನ್ನು ಬಿಂಬಿಸುವ ಸಾಕ್ಷ್ಯಚಿತ್ರವನ್ನು ಸಮಾವೇಶದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಮೋದಿಯವರು ಅಡುಗೆಮನೆಗಳಲ್ಲಿ ಸುಲಭವಾಗಿ ಬಳಸಲು ಸಾಧ್ಯವಿರುವ ವಿಶಿಷ್ಟ ಟ್ವಿನ್ ಕುಕ್​ಟಾಪ್ ಸೋಲಾರ್ ಕುಕ್ಕರ್​ ಒಂದನ್ನು ಅನಾವರಣಗೊಳಿಸಿದರು. ಇದೇ ವೇಳೆ ಗ್ರೀನ್ ಮೊಬಿಲಿಟಿ ರ್ಯಾಲಿಗೂ ಮೋದಿಯವರು ಚಾಲನೆ ನೀಡಿದರು.

ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ಹಂತಹಂತವಾಗಿ ತೊಡೆದುಹಾಕಲು ಪ್ರಧಾನ ಮಂತ್ರಿಯವರ ದೂರದೃಷ್ಟಿಯಿಂದ ಮಾರ್ಗದರ್ಶನ ಪಡೆದುಕೊಂಡಿರುವ ಇಂಡಿಯನ್ ಆಯಿಲ್, ಮರುಬಳಕೆಯ ಪಾಲಿಯೆಸ್ಟರ್ (rPET) ಮತ್ತು ಹತ್ತಿಯಿಂದ ಮಾಡಿದ ಚಿಲ್ಲರೆ ಗ್ರಾಹಕ ಅಟೆಂಡೆಂಟ್‌ಗಳು ಮತ್ತು ಎಲ್‌ಪಿಜಿ ವಿತರಣಾ ಸಿಬ್ಬಂದಿಗೆ ಸಮವಸ್ತ್ರವನ್ನು ಅಳವಡಿಸಿಕೊಂಡಿದೆ.

ಇಂಡಿಯನ್‌ ಆಯಿಲ್‌ನ ಗ್ರಾಹಕ ಅಟೆಂಡೆಂಟ್‌ನ ಪ್ರತಿಯೊಂದು ಸಮವಸ್ತ್ರವು ಸುಮಾರು 28 ಬಳಸಿದ PET ಬಾಟಲಿಗಳ ಮರುಬಳಕೆಯನ್ನು ಬೆಂಬಲಿಸುತ್ತದೆ. ಇಂಡಿಯನ್ ಆಯಿಲ್ ಈ ಉಪಕ್ರಮವನ್ನು ‘ಅನ್‌ಬಾಟಲ್ಡ್’ ಮೂಲಕ ಮತ್ತಷ್ಟು ತೆಗೆದುಕೊಳ್ಳುತ್ತಿದೆ. ಸುಸ್ಥಿರ ಉಡುಪುಗಳ ಬ್ರ್ಯಾಂಡ್, ಮರುಬಳಕೆಯ ಪಾಲಿಯೆಸ್ಟರ್‌ನಿಂದ ತಯಾರಿಸಿದ ಸರಕುಗಳಿಗಾಗಿ ಪ್ರಾರಂಭಿಸಲಾಗಿದೆ. ಈ ಬ್ರ್ಯಾಂಡ್ ಅಡಿಯಲ್ಲಿ, ಇಂಡಿಯನ್ ಆಯಿಲ್ ಇತರ ತೈಲ ಮಾರುಕಟ್ಟೆ ಕಂಪನಿಗಳ ಗ್ರಾಹಕ ಅಟೆಂಡೆಂಟ್‌ಗಳಿಗೆ ಸಮವಸ್ತ್ರದ ಅವಶ್ಯಕತೆಗಳನ್ನು ಪೂರೈಸುವ ಗುರಿಯನ್ನು ಹೊಂದಿದೆ. ಸೈನ್ಯಕ್ಕೆ ಯುದ್ಧ ಸಮವಸ್ತ್ರಗಳು, ಸಂಸ್ಥೆಗಳಿಗೆ ಸಮವಸ್ತ್ರಗಳು / ಉಡುಪುಗಳು ಮತ್ತು ಚಿಲ್ಲರೆ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶವನ್ನು ಇದು ಹೊಂದಿದೆ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ