AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಬ್ರ್ಯಾಂಚ್ ಬೆಂಗಳೂರಿನಲ್ಲಿ ಶುರು: ಹೇಗಿದೆ ನೋಡಿ

ಬೆಂಗಳೂರಿನ ಕೋರಮಂಗಲದಲ್ಲಿ ಸ್ಲೈಸ್ ಫಿನ್‌ಟೆಕ್ ಸಂಸ್ಥೆ ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯನ್ನು ತೆರೆದಿದೆ. ಯುಪಿಐ ಮೂಲಕ ತ್ವರಿತ ಖಾತೆ ತೆರೆಯುವಿಕೆ, ನಗದು ವಹಿವಾಟು, ಮತ್ತು ರೋಬೋಟ್ ಸಹಾಯಕ ಸೇವೆಗಳು ಶಾಖೆಯಲ್ಲಿ ಲಭ್ಯವಿದೆ. ಡೆಬಿಟ್ ಕಾರ್ಡ್ ಇಲ್ಲದೆಯೇ ಯುಪಿಐ ಆ್ಯಪ್ ಸಹಾಯದಿಂದಲೇ ಬ್ಯಾಂಕಿಂಗ್ ವಹಿವಾಟು ನಡೆಸಬಹುದಾಗಿದೆ.

ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಬ್ರ್ಯಾಂಚ್ ಬೆಂಗಳೂರಿನಲ್ಲಿ ಶುರು: ಹೇಗಿದೆ ನೋಡಿ
ಯುಪಿಐ ಆಧಾರಿತ ಬ್ಯಾಂಕ್ ಬ್ರ್ಯಾಂಚ್Image Credit source: Twitter
ಗಣಪತಿ ಶರ್ಮಾ
|

Updated on: Jul 04, 2025 | 12:22 PM

Share

ಬೆಂಗಳೂರು, ಜುಲೈ 4: ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯನ್ನು (UPI Powered Bank Branch) ಬೆಂಗಳೂರಿನ ಕೋರಮಂಗಲದಲ್ಲಿ (Koramangala) ಫಿನ್​ಟೆಕ್ ಸಂಸ್ಥೆ ಸ್ಲೈಸ್ ಆರಂಭಿಸಿದೆ. ಯುಪಿಐ ಇಂಟಿಗ್ರೇಟೆಡ್ ಎಟಿಎಂ, ಇನ್​ಸ್ಟಾಂಟ್ ಅಕೌಂಟ್ ಓಪನಿಂಗ್, ನಗದು ವಹಿವಾಟು ಸೇರಿದಂತೆ ಸಂಪೂರ್ಣ ಡಿಜಿಟಲ್ ಬ್ಯಾಂಕಿಂಗ್ ಅನುಭವ ಇಲ್ಲಿ ಸಿಗಲಿದೆ. ಅಂದಹಾಗೆ, ಈ ಬ್ರ್ಯಾಂಚ್​​ನಲ್ಲಿ ವಹಿವಾಟು ನಡೆಸಲು ಡೆಬಿಟ್ ಕಾರ್ಡ್ ಸಹ ಬೇಕಾಗಿಲ್ಲ. ಯುಪಿಐ ಇದ್ದರೆ ಸಾಕು.

ಯುಪಿಐ ಆಧಾರಿತ ಬ್ಯಾಂಕ್ ಶಾಖೆಯಲ್ಲಿ ಏನೇನಿದೆ?

ಕೋರಮಂಗಲದ 80 ಅಡಿ ರಸ್ತೆಯಲ್ಲಿರುವ ಈ ಶಾಖೆಯು ಕಾರ್ಡ್‌ಗಳ ಬದಲಿಗೆ ಯುಪಿಐ ಆ್ಯಪ್ ಬಳಸಿ ಹಣವನ್ನು ಠೇವಣಿ ಇಡಲು ಮತ್ತು ಹಿಂಪಡೆಯಲು ಅನುವು ಮಾಡಿಕೊಡುತ್ತದೆ. ಈ ವ್ಯವಸ್ಥೆಯು ಡಿಜಿಟಲ್ ಕಿಯೋಸ್ಕ್‌ಗಳನ್ನು ಒಳಗೊಂಡಿದೆ. ಗ್ರಾಹಕರು ಟ್ಯಾಬ್ಲೆಟ್‌ಗಳನ್ನು ಬಳಸಿಕೊಂಡು ಉಳಿತಾಯ ಖಾತೆಗಳನ್ನು ತೆರೆಯಬಹುದಾಗಿದೆ. ಶಾಖೆಯ ಆವರಣದೊಳಗೆ ಗ್ರಾಹಕರಿಗೆ ಮಾರ್ಗದರ್ಶನ ನೀಡಲು ಸಹಾಯ ಮಾಡುವ ರೋಬೋಟ್ ಸಹ ಇದೆ.

ಇದನ್ನೂ ಓದಿ
Image
ಮುಚ್ಚುವ ಆತಂಕದಲ್ಲಿ ಜೀನ್ಸ್ ಉದ್ಯಮ: ಬೀದಿಗೆ ಬೀಳಲಿದೆ 2 ಲಕ್ಷ ಜನರ ಬದುಕು
Image
ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಟ್ವಿಸ್ಟ್
Image
ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!
Image
ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ರೋಬೋಟ್ ಸಹಾಯಕ!

ಶಾಖೆಯ ರೋಬೋಟ್ ಸಹಾಯಕ ಮತ್ತು ಯುಪಿಐ ಆಧಾರಿತ ಬ್ಯಾಂಕಿಂಗ್ ಪ್ರಕ್ರಿಯೆಗಳನ್ನು ತೋರಿಸುವ ವೀಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಯುಪಿಐ ಬ್ರ್ಯಾಂಚ್​ನಲ್ಲಿ ಏನೇನು ಸೇವೆಗಳಿವೆ?

ಪ್ರಾಯೋಗಿಕವಾಗಿ ಈ ಯುಪಿಐ ಆಧಾರಿತ ಹೊಸ ಶಾಖೆಯನ್ನು ಆರಂಭಿಸಲಾಗಿದೆ. ಶಾಖೆಗೆ ಭೇಟಿ ನೀಡುವ ಗ್ರಾಹಕರು ಕನಿಷ್ಠ ಮಾನವ ಸಂವಹನ ಮತ್ತು ಪೂರ್ಣ ಪ್ರಮಾಣದಲ್ಲಿ ಯುಪಿಐ ನೆರವಿನೊಂದಿಗೆ ನಗದು ಠೇವಣಿ ಇರಿಸುವಿಕೆ, ಹಿಂಪಡೆಯುವಿಕೆ ಮತ್ತು ಖಾತೆ ಸೆಟಪ್‌ನಂತಹ ಮೂಲಭೂತ ಬ್ಯಾಂಕಿಂಗ್ ಸೌಕರ್ಯಗಳನ್ನು ಪಡೆಯಬಹುದಾಗಿದೆ ಎಂದು ಸ್ಲೈಸ್ ತಿಳಿಸಿದೆ.

ಯುಪಿಐ ಬ್ರ್ಯಾಂಚ್​ಗೆ ಗ್ರಾಹಕರಿಂದ ಮೆಚ್ಚುಗೆ

ಹೊಸ ಮಾದರಿಯ ಬ್ಯಾಂಕ್ ಶಾಖೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಹಲವಾರು ಬಳಕೆದಾರರು ಯುಪಿಐ ಆಧಾರಿತ ಸೆಟಪ್‌ನ ಅನುಕೂಲತೆ ಮತ್ತು ವೇಗದ ಬ್ಯಾಂಕಿಂಗ್ ಸೇವೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕ್​ನ ಡ್ರಾಫ್ಟ್ ಬಾಕ್ಸ್​ನಲ್ಲಿದ್ದ ಚೆಕ್​ಗಳು ಮಂಗಮಾಯ: ಕದ್ದ ಚೆಕ್ ಏನು ಮಾಡ್ತಾರೆ ಗೊತ್ತಾ? ನಿಜಕ್ಕೂ ಶಾಕ್ ​ಆಗ್ತೀರಾ

ಯುಪಿಐ-ಲಿಂಕ್ಡ್ ಕ್ರೆಡಿಟ್ ಕಾರ್ಡ್ ಅನ್ನು ಸಹ ಬಿಡುಗಡೆ ಮಾಡಿರುವುದಾಗಿ ಸ್ಲೈಸ್ ತಿಳಿಸಿದ್ದು, ಇದು ಯಾವುದೇ ವಾರ್ಷಿಕ ಅಥವಾ ಸೇರ್ಪಡೆ ಶುಲ್ಕವಿಲ್ಲದೆ ಗ್ರಾಹಕರಿಗೆ ದೊರೆಯಲಿದೆ ಎಂದಿದೆ. ಕಾರ್ಡ್ ಖರೀದಿ ಮೇಲೆ ಶೇ 3 ವರೆಗೆ ಕ್ಯಾಶ್‌ಬ್ಯಾಕ್ ಮತ್ತು ಪಾವತಿಗಳನ್ನು 3 ಬಡ್ಡಿ-ಮುಕ್ತ ಇಎಂಐಗಳಾಗಿ ಮಾಡಿಕೊಡುವ ‘ಸ್ಲೈಸ್ ಇನ್ 3’ ಸೌಲಭ್ಯ ಕೂಡ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ