AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ!

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಎಐ ಬಳಕೆಗೆ ಆದ್ಯತೆ ನೀಡಲಿದ್ದು, ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಕೌಶಲ್ಯ ತರಬೇತಿ ಸಿಗಲಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಈ ಕುರಿತು ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ!
ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ
ವಿನಯ್​ ಕಾಶಪ್ಪನವರ್​
| Edited By: |

Updated on: Sep 22, 2026 | 7:57 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ.
  • ಕೃಷಿ, ಆರೋಗ್ಯ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ಎಐ ತಂತ್ರಜ್ಞಾನ ಬಳಕೆ.
  • ಜಾಗತಿಕ ಮಟ್ಟದ ಕೌಶಲ್ಯ ತರಬೇತಿಯೊಂದಿಗೆ ಸಾವಿರಾರು ವಿದ್ಯಾರ್ಥಿಗಳಿಗೆ ಹೊಸ ಅವಕಾಶ.

ಬೆಂಗಳೂರು, ಸೆಪ್ಟೆಂಬರ್ 22: ನಗರದಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿಕ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆಗೆ ಕರ್ನಾಟಕ ಗಂಭೀರ ಚಿಂತನೆ ನಡೆಸಿದೆ. ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಎಐ ತಂತ್ರಜ್ಞಾನದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದೊಂದಿಗೆ ಈ ಯೂನಿವರ್ಸಿಟಿ ಸ್ಥಾಪನೆಗೆ ಉನ್ನತ ಶಿಕ್ಷಣ ಇಲಾಖೆ ಆಸಕ್ತಿ ತೋರಿದೆ. ಎಐ ಆಧಾರಿತ ಶಿಕ್ಷಣದಿಂದ ಹಿಡಿದು ಆರೋಗ್ಯ, ಕೃಷಿ, ಸಾರ್ವಜನಿಕ ಸೇವೆ ಹಾಗೂ ಕೈಗಾರಿಕಾ ಕ್ಷೇತ್ರದವರೆಗೆ ತಂತ್ರಜ್ಞಾನದ ಬಳಕೆಗೆ ಒತ್ತು ನೀಡುವ ಯೋಜನೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ

ತಂತ್ರಜ್ಞಾನ ಲೋಕದಲ್ಲಿ ವೇಗವಾಗಿ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ, ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಕೌಶಲ್ಯ ತರಬೇತಿ ನೀಡಲು ಈ ವಿಶ್ವವಿದ್ಯಾಲಯ ಸಹಕಾರಿಯಾಗಲಿದೆ. ಎಐ ಸಹಾಯದ ಬೋಧನಾ ಪದ್ಧತಿಯ ಮೂಲಕ ರಾಜ್ಯದಲ್ಲೇ ಅಗತ್ಯವಿರುವ ಉನ್ನತ ಮಾನವ ಸಂಪನ್ಮೂಲವನ್ನು ಸಿದ್ಧಪಡಿಸಲಾಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿ ರೋಗಗಳ ಮುಂಚಿತ ಪತ್ತೆ ಮತ್ತು ಕೃಷಿ ವಲಯದಲ್ಲಿ ವೈಜ್ಞಾನಿಕ ಬೆಂಬಲ ನೀಡಲು ಎಐ ತಂತ್ರಜ್ಞಾನ ಬಳಸಲು ಯೋಜನೆ ರೂಪಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲೂ ಎಐ ಬಳಕೆಗೆ ಹೆಚ್ಚಿನ ಒತ್ತು

ಗ್ರಾಮೀಣ ಮತ್ತು ನಗರ ಪ್ರದೇಶಗಳ ಆಸ್ಪತ್ರೆಗಳಲ್ಲಿ ರೋಗಗಳ ಮುಂಚಿತ ಪತ್ತೆ, ಅತ್ಯಾಧುನಿಕ ವೈದ್ಯಕೀಯ ಬೆಂಬಲಕ್ಕಾಗಿ ಎಐ ತಂತ್ರಜ್ಞಾನವನ್ನು ಬಳಸುವ ಸಾಧ್ಯತೆ ಇದ್ದು, ಕೃಷಿ ಕ್ಷೇತ್ರದಲ್ಲೂ AI ಬಳಕೆಗೆ ಆದ್ಯತೆ ನೀಡುವ ಉದ್ದೇಶದಿಂದ ಎಐ ವಿವಿ ಸ್ಥಾಪನೆಗೆ ಒಲವು ತೋರಿಸಲು ಮುಂದಾಗಿದೆ.ಈ ಮೂಲಕ ಆರೋಗ್ಯ ಕ್ಷೇತ್ರದಲ್ಲೂ ಎಐ ಬಳಕೆಗೆ ಹೆಚ್ಚಿನ ಒತ್ತು ನೀಡಲು ಇಲಾಖೆ ಮುಂದಾಗಿದೆ.

LIVE TV

ಸಾರ್ವಜನಿಕ ಸೇವೆಗಳಲ್ಲೂ ಕೃತಕ ಬುದ್ಧಿಮತ್ತೆ

ಸಾರ್ವಜನಿಕ ಸೇವೆಗಳಲ್ಲೂ ಕೃತಕ ಬುದ್ಧಿಮತ್ತೆಯ ಬಳಕೆಗೆ ಒತ್ತು ನೀಡಲಾಗುತ್ತಿದ್ದು, ಸರ್ಕಾರದ ಸೇವೆಗಳ ವಿತರಣೆಯನ್ನು ಮತ್ತಷ್ಟು ವೇಗವಾಗಿ, ಜನಸ್ನೇಹಿಯಾಗಿ ಮತ್ತು ಹಸ್ತಕ್ಷೇಪ ರಹಿತವಾಗಿ ಮಾಡುವ ನಿಟ್ಟಿನಲ್ಲಿ ಎಐ ತಂತ್ರಜ್ಞಾನ ಬಳಸುವ ಚಿಂತನೆ ನಡೆದಿದೆ. ಇದರ ಜೊತೆಗೆ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಅಗತ್ಯವಿರುವ ಎಐ ಪರಿಕರಗಳನ್ನು ಒದಗಿಸುವ ಉದ್ದೇಶವೂ ಇದೆ. ಎಐ ಯೂನಿವರ್ಸಿಟಿ ಸ್ಥಾಪನೆಯಾದರೆ ಸಾವಿರಾರು ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳ ತರಬೇತಿ ಸಿಗಲಿದೆ ಎಂಬ ನಿರೀಕ್ಷೆಯನ್ನು ಉನ್ನತ ಶಿಕ್ಷಣ ಇಲಾಖೆ ವ್ಯಕ್ತಪಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ