AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo Flights: ಇಂಡಿಗೋ ವಿಮಾನ ವ್ಯತ್ಯಯ ಎಫೆಕ್ಟ್; ಪಿಜಿ ನೀಟ್​ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಳೆದ ಐದು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಸತತ ಆರನೇ ದಿನವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಇದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸಿದ್ದಾರೆ. ಈ ಹಿನ್ನಲೆ ಪಿಜಿ ನೀಟ್ ಪ್ರವೇಶಾತಿಗೆ ಕಾಲಾವಕಾಶ ಹೆಚ್ಚಿಸಿರುವ ಪ್ರಾಧಿಕಾರ, ಶುಲ್ಕ ಪಾವತಿಯ ದಿನಾಂಕ ಮುಂದೂಡಿದೆ.

IndiGo Flights: ಇಂಡಿಗೋ ವಿಮಾನ ವ್ಯತ್ಯಯ ಎಫೆಕ್ಟ್;  ಪಿಜಿ ನೀಟ್​ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ
ಇಂಡಿಗೋ ವಿಮಾನ ರದ್ದತಿ ಹಿನ್ನಲೆ ಪಿಜಿ ನೀಟ್​ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ
ಭಾವನಾ ಹೆಗಡೆ
|

Updated on: Dec 07, 2025 | 11:04 AM

Share

ಬೆಂಗಳೂರು, ಡಿಸೆಂಬರ್ 07: ಕಳೆದ 5 ದಿನಗಳಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಿದ್ದ ಇಂಡಿಗೋ ವಿಮಾನಗಳ (IndiGo Flights) ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ಇಂದೂ ಅದೇ ದುಸ್ಥಿತಿ ಮುಂದುವರೆದಿದೆ. ಈ ಹಿನ್ನಲೆ ಪ್ರಯಾಣಿಕರು ನಾನಾ ವಿಧದಲ್ಲಿ ಪರದಾಡುತ್ತಿದ್ದಾರೆ. ವಿಮಾನ ರದ್ದಾದ ಕಾರಣ ವಧು-ವರರು ಆನ್​ಲೈನ್​ನಲ್ಲಿ ಆರತಕ್ಷತೆ ಮಾಡಿಕೊಂಡಿದ್ದರು. ಇಷ್ಟೇ ಅಲ್ಲದೇ ಕೆಲ ಖಾಸಗಿ ಬಸ್ ಕಂಪನಿಗಳು ಬೆಂಗಳೂರು-ಮುಂಬೈ ಮಾರ್ಗದ ಟಿಕೆಟ್ ದರವನ್ನು 10,000 ರೂ. ವರೆಗೆ ಹೆಚ್ಚಿಸಿದ್ದವು. ಈ ಎಲ್ಲಾ ಅನಾನುಕೂಲತೆಗಳ ನಡುವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಜಿ ನೀಟ್​ನ ಪ್ರವೇಶ ಪ್ರಕ್ರಿಯೆ ದಿನಾಂಕ ಮುಂದೂಡಿಕೆ ಮಾಡಿದೆ.

ಪ್ರವೇಶಾತಿಗೆ ಡಿ.8 ರವರೆಗೆ ಗಡುವು

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಮುಂದೂಡಲು KEAಗೆ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮನವಿ ಪರಿಗಣಿಸಿರುವ ಪ್ರಾಧಿಕಾರ ದಾಖಲಾತಿಗೆ ಡಿಸೆಂಬರ್ 8ರವರೆಗೆ ಅವಕಾಶ ನೀಡಿದೆ. ಈ ಮೊದಲು ಡಿ.5ರಂದು ಶುಲ್ಕಪಾವತಿ ಮಾಡಿ ಡಿ.6ಕ್ಕೆ ವರದಿಯಾಗಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಲಾಗಿತ್ತು. ಇದೀಗ ಡಿಸೆಂಬರ್ 8ರ ಮಧ್ಯಾಹ್ನ 12.30ರೊಳಗೆ ಶುಲ್ಕ ಪಾವತಿಗೆ ಅವಕಾಶ ನೀಡಿದ್ದು, ಮಧ್ಯಾಹ್ನ 2.30ರೊಳಗೆ ದಾಖಲೆ ಪತ್ರ ಸಲ್ಲಿಕೆಗೆ ಮಾಡಲು ಡೆಡ್​ಲೈನ್ ನಿಗದಿಪಡಿಸಿದೆ.

ಇದನ್ನೂ ಓದಿ ಮುಂದುವರಿದ ವಿಮಾನಗಳ ಹಾರಾಟ ವ್ಯತ್ಯಯ: KIABಯಿಂದ 61 ಇಂಡಿಗೋ ಫ್ಲೈಟ್​ಗಳು ರದ್ದು

ವಿದೇಶಿಯರಿಗೂ ತಟ್ಟಿದ ಪ್ಲೈಟ್ ಕ್ಯಾನ್ಸಲ್ ಬಿಸಿ

ಕೇವಲ ಭಾರತೀಯರಿಗಷ್ಟೇ ಅಲ್ಲದೇ ವಿದೇಶಿ ಪ್ರಯಾಣಿಕರಿಗೂ ವಿಮಾನ ರದ್ದತಿಯ ಬಿಸಿ ತಾಕಿದ್ದು, ಜರ್ಮನಿಯ ಪ್ರಜೆಗಳಿಬ್ಬರಿಗೆ ಸಂಕಷ್ಟ ಎದುರಾಗಿದೆ. ಜೋದಪುರ್ಗೆ ತೆರಳುವ ಸಲುವಾಗಿ ಜರ್ಮನಿಯಿಂದ ಬೆಂಗಳೂರಿಗೆ ಇಬ್ಬರು ವಿದೇಶಿ ಪ್ರಯಾಣಿಕರು ಆಗಮಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ವಿಮಾನ ರದ್ದಾದ ಕಾರಣ ಏರ್ಪೋಟ್ನ ಇಂಡಿಗೋ ಕೌಂಟರ್ ಬಳಿ ಮತ್ತೊಂದು ಪ್ಲೈಟ್ ಟಿಕೆಟ್ ಬುಕ್ ಮಾಡಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ ಇಂಡಿಗೋ ವಿಮಾನ ರದ್ದು ಪ್ರಭಾವ, ಖಾಸಗಿ ಬಸ್​ಗಳಿಂದ ಬೇಕಾಬಿಟ್ಟಿ ವಸೂಲಿ: ಬೆಂಗಳೂರು ಮುಂಬೈ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ!

ಇಂಡಿಗೋ ಸಿಇಓಗೆ ಡಿಜಿಸಿಎ ನೋಟಿಸ್

ದೇಶಾದ್ಯಂತ ಇಂಡಿಗೋ ವಿಮಾನ ಅವ್ಯವಸ್ಥೆ ಹಿನ್ನೆಲೆ ಇಂಡಿಗೋ ಸಿಇಓ ಪೀಟರ್ ಎಲ್ಬರ್ಸ್ಗೆ ಡಿಜಿಸಿಎ (Directorate General of Civil Aviation) ನೋಟಿಸ್ ನೀಡಿದ್ದು, 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ. ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿ ಸೇರಿದಂತೆ ವಿಮಾನಗಳ ಕಾರ್ಯಾಚರಣೆಯ ಸಂಪೂರ್ಣ ವೈಫಲ್ಯ ಕುರಿತು ನೋಟಿಸ್ ನೀಡಲಾಗಿದ್ದು, ಉತ್ತರ ನೀಡಲು ವಿಫಲವಾದರೆ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಡಿಜಿಸಿಎ ಎಚ್ಚರಿಕೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!