AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Canteen: ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಿಜೆಪಿ ಸರ್ಕಾರದಿಂದ ಎಳ್ಳು ನೀರು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಳ್ಳು ನೀರು ಬಿಟ್ಟಿದೆ.

Indira Canteen: ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಿಜೆಪಿ ಸರ್ಕಾರದಿಂದ ಎಳ್ಳು ನೀರು
Indira Canteen
TV9 Web
| Edited By: |

Updated on:Oct 31, 2022 | 10:52 AM

Share

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಳ್ಳು ನೀರು ಬಿಟ್ಟಿದೆ. ಬೆಂಗಳೂರಿನ 40 ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಲಾಗಿದೆ. ಆರ್ ಆರ್ ನಗರ ವಲಯದಲ್ಲಿ ಒಟ್ಟು 8 ಕ್ಯಾಂಟೀನ್​ಗಳನ್ನು ಕ್ಲೋಸ್ ಮಾಡಲಾಗಿದೆ.

ಬಿಬಿಎಂಪಿಯಿಂದ ಸಬ್ಸಿಡಿ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎನ್ನುವ ಕಾರಣವನ್ನು ನೀಡಿ ಸಾಕಷ್ಟು ಕಡೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ.

ಹಾಗೂ ಕೆಲವೇ ಬಿಜೆಪಿ ಶಾಸಕರ ಸೂಚನೆ ಮೇರೆಗೆ ಕ್ಯಾಂಟೀನ್​ಗಳನ್ನು ಮುಚ್ಚಲಾಗುತ್ತಿದೆ. ಪಾರ್ವತಿಪುರ, ಸಂಪಿಗೆ ರಾಮನಗರ, ಬಿಸ್ಮಿಲ್ಲಾನಗರದ ಟ್ಯಾಂಕ್‌ಬಂಡ್‌ ರಸ್ತೆ, ಹೊಸಹಳ್ಳಿ, ಪುಲಿಕೇಶಿ ನಗರ, ಎಚ್‌ಎಸ್‌ಆರ್‌ ಲೇಔಟ್‌ನ ಸೋಮಸುಂದರ ಪಾಳ್ಯ, ಸುಬ್ರಮಣ್ಯಪುರಂನ ವಸಂತನಗರ, ಮಹದೇವಪುರದ ಎ. ನಾರಾಯಣಪುರ, ಕೋಗಿಲು, ಪ್ರಕೃತಿನಗರ ಸೇರಿದಂತೆ 40 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಲಾಗಿದೆ. ನಗರದ 198 ವಾರ್ಡ್‌ಗಳಲ್ಲೂ ತಲಾ ಒಂದು ಇಂದಿರಾ ಕ್ಯಾಂಟೀನ್‌ ತೆರೆಯಲು ಯೋಜನೆ ರೂಪಿಸಲಾಗಿತ್ತು.

ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎನ್ನಲಾಗಿದೆ. ಮೊದಲು ದಿನ ನಿತ್ಯ 3.5 ಲಕ್ಷ ಮಂದಿ ಪ್ರತಿದಿನ ಕ್ಯಾಂಟೀನ್ ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ.

ಆರಂಭದಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ ತಲಾ 400 ಜನರು ಆಗಮಿಸುತ್ತಿದ್ದರು. ಈಗ ಅದರ ಸಂಖ್ಯೆ ಪ್ರತಿ ನಿತ್ಯ 100ಕ್ಕೆ ಇಳಿಕೆಯಾಗಿದೆ ಎಂದು ಹೇಳಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್ ಗಳಿವೆ. ಈ ಪೈಕಿ 175 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟೀನ್​ಗಳಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Mon, 31 October 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್