ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಳ್ಳು ನೀರು ಬಿಟ್ಟಿದೆ. ಬೆಂಗಳೂರಿನ 40 ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ. ಆರ್ ಆರ್ ನಗರ ವಲಯದಲ್ಲಿ ಒಟ್ಟು 8 ಕ್ಯಾಂಟೀನ್ಗಳನ್ನು ಕ್ಲೋಸ್ ಮಾಡಲಾಗಿದೆ.
ಬಿಬಿಎಂಪಿಯಿಂದ ಸಬ್ಸಿಡಿ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎನ್ನುವ ಕಾರಣವನ್ನು ನೀಡಿ ಸಾಕಷ್ಟು ಕಡೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ.
ಹಾಗೂ ಕೆಲವೇ ಬಿಜೆಪಿ ಶಾಸಕರ ಸೂಚನೆ ಮೇರೆಗೆ ಕ್ಯಾಂಟೀನ್ಗಳನ್ನು ಮುಚ್ಚಲಾಗುತ್ತಿದೆ. ಪಾರ್ವತಿಪುರ, ಸಂಪಿಗೆ ರಾಮನಗರ, ಬಿಸ್ಮಿಲ್ಲಾನಗರದ ಟ್ಯಾಂಕ್‌ಬಂಡ್ ರಸ್ತೆ, ಹೊಸಹಳ್ಳಿ, ಪುಲಿಕೇಶಿ ನಗರ, ಎಚ್‌ಎಸ್‌ಆರ್ ಲೇಔಟ್‌ನ ಸೋಮಸುಂದರ ಪಾಳ್ಯ, ಸುಬ್ರಮಣ್ಯಪುರಂನ ವಸಂತನಗರ, ಮಹದೇವಪುರದ ಎ. ನಾರಾಯಣಪುರ, ಕೋಗಿಲು, ಪ್ರಕೃತಿನಗರ ಸೇರಿದಂತೆ 40 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ. ನಗರದ 198 ವಾರ್ಡ್‌ಗಳಲ್ಲೂ ತಲಾ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಯೋಜನೆ ರೂಪಿಸಲಾಗಿತ್ತು.
ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎನ್ನಲಾಗಿದೆ. ಮೊದಲು ದಿನ ನಿತ್ಯ 3.5 ಲಕ್ಷ ಮಂದಿ ಪ್ರತಿದಿನ ಕ್ಯಾಂಟೀನ್ ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ.
ಆರಂಭದಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ ತಲಾ 400 ಜನರು ಆಗಮಿಸುತ್ತಿದ್ದರು. ಈಗ ಅದರ ಸಂಖ್ಯೆ ಪ್ರತಿ ನಿತ್ಯ 100ಕ್ಕೆ ಇಳಿಕೆಯಾಗಿದೆ ಎಂದು ಹೇಳಲಾಗಿತ್ತು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್ ಗಳಿವೆ. ಈ ಪೈಕಿ 175 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟೀನ್ಗಳಿತ್ತು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:51 am, Mon, 31 October 22