ಚಾಮರಾಜಪೇಟೆ ಈದ್ಗಾ ಮೈದಾನ ಯಾವುದೇ ಚಟುವಟಿಕೆಗೆ ನೀಡದಂತೆ ರಾಜ್ಯ ಸರ್ಕಾರಕ್ಕೆ ಗುಪ್ತದಳದಿಂದ ಮಾಹಿತಿ
ಶಾಂತಿಸಭೆ ಬಳಿಕ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಮಾತನಾಡಿದ್ದು ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ಮಾಡುತ್ತೇವೆ ಎಂದರು. ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸುತ್ತೇವೆ. ಬಿಬಿಎಂಪಿ ಆದೇಶವನ್ನು ಒಪ್ಪಲು ಆಗುವುದಿಲ್ಲ.
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನವನ್ನು ಯಾವುದೇ ಚಟುವಟಿಕೆಗೆ ನೀಡದಂತೆ ರಾಜ್ಯ ಸರ್ಕಾರಕ್ಕೆ ಗುಪ್ತದಳದಿಂದ ಮಾಹಿತಿ ಸಿಕ್ಕಿದೆ. ವಿವಿಧ ಕಾರಣಗಳಿಗಾಗಿ ಮೈದಾನವನ್ನು ಯಾರಿಗೂ ನೀಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಗುಪ್ತದಳ ಮಾಹಿತಿ ನೀಡಿದೆ. ಇನ್ನು ಮತ್ತೊಂದೆಡೆ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಶಾಂತಿಸಭೆ ನಡೆಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣಾ ಆವರಣದ ಹಾಲ್ನಲ್ಲಿ ಮುಸ್ಲಿಂ ಮುಖಂಡರ ಜೊತೆ ಡಿಸಿಪಿ ಲಕ್ಷ್ಮಣ ನಿಂಬರಗಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಸದಸ್ಯರು, ಹಾಲಿ ಮತ್ತು ಮಾಜಿ ಪಾಲಿಕೆ ಸದಸ್ಯರು, ಮೌಲ್ವಿಗಳು, ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಸೇರಿ ಹಲವರು ಭಾಗಿಯಾಗಿದ್ದಾರೆ.
ಸೌಹಾರ್ದತೆ ಕಾಪಾಡುವಂತೆ ಮುಸ್ಲಿಂ ನಾಯಕರಿಗೆ ಮನವಿ
ಶಾಂತಿ ಸಭೆ ಬಳಿಕ ಡಿಸಿಪಿ ಲಕ್ಷ್ಮಣ ನಿಬಂರಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ರು. ಈ ವೇಳೆ ಅವರು, ಕೋಮು ಸೌಹಾರ್ದತೆ, ಕಾನೂನು ಸುವ್ಯವಸ್ಥೆಗೆ ತೊಡಕಾಗುವಂತಾ ವಿಚಾರಗಳ ಬಗ್ಗೆ ಎಚ್ಚರ ವಹಿಸುವಂತೆ ಸಭೆಯಲ್ಲಿ ಸೂಚಿಸಿದ್ದೇನೆ. ಎಲ್ಲಾ ಮುಖಂಡರೂ ಕಾನೂನು ಪಾಲಿಸೋ ಭರವಸೆ ನೀಡಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಸಂದೇಶಕ್ಕೆ ಕಮೆಂಟ್ ಮಾಡದಂತೆ ಹಾಗೂ ಪೋಸ್ಟ್ಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ ಎಂದರು.
ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ಮಾಡುತ್ತೇವೆ
ಶಾಂತಿಸಭೆ ಬಳಿಕ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಮಾತನಾಡಿದ್ದು ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ಮಾಡುತ್ತೇವೆ ಎಂದರು. ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸುತ್ತೇವೆ. ಬಿಬಿಎಂಪಿ ಆದೇಶವನ್ನು ಒಪ್ಪಲು ಆಗುವುದಿಲ್ಲ. ಕಂದಾಯ ಸಚಿವರು ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಲ್ಲ. ಮೈದಾನದ ಬಗ್ಗೆ ಕಂದಾಯ ಇಲಾಖೆ ಬಳಿ ದಾಖಲೆ ಇದ್ದರೆ ನೀಡಲಿ. ಸಭೆಯಲ್ಲಿ ಪೊಲೀಸರು ಶಾಂತಿ ಕಾಪಾಡುವಂತೆ ಹೇಳಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಬೇಡಿ ಅಂತ ಹೇಳಿದ್ದಾರೆ. ಹಿಂದೂ, ಮುಸ್ಲಿಂ ಒಂದೇ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿದ್ರು.
Published On - 7:40 pm, Wed, 10 August 22