AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪ‌; ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು

ಬೆಂಗಳೂರು ಟೆಕ್ ಸಮಿಟ್​ನಲ್ಲಿ ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದ ನಾರಾಯಣಮೂರ್ತಿ ಅವರು ‘ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು. ಜೊತೆಗೆ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದರು. ಇದಕ್ಕೆ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪ‌; ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು
ಇನ್ಫೋಸಿಸ್ ನಾರಾಯಣ ಮೂರ್ತಿ,
ಪ್ರಸನ್ನ ಗಾಂವ್ಕರ್​
| Edited By: |

Updated on: Nov 30, 2023 | 4:39 PM

Share

ಬೆಂಗಳೂರು, ನ.30: ಗ್ಯಾರಂಟಿ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪ‌ ವಿಚಾರಕ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ‘ ಎನ್​ ಆರ್​ ನಾರಾಯಣ ಮೂರ್ತಿಯವರು (NR Narayana Murthy) ಅವರ ಅಭಿಪ್ರಾಯ ತಿಳಿಸಿದ್ದಾರೆ. ಬಂಡವಾಳ ಶಾಹಿಗಳು ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಆ ರೀತಿ ಎಷ್ಟು ಜನ ಮಾಡುತ್ತಾರೆ ಹೇಳಿ ಎಂದು ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಪ್ರತಿಕ್ರಿಯಿಸಿದ್ದಾರೆ.

‘ನಮ್ಮ ದೇಶದಲ್ಲಿ ಸಾಕಷ್ಟು ಬಂಡವಾಳಶಾಹಿಗಳು ಇದ್ದಾರೆ. ಎಷ್ಟು ಕಂಪನಿಗಳು ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಇಟ್ಟುಕೊಂಡಿದ್ದಾರೆ. ಎಲ್ಲರೂ ವಿಶಾಲ ಮನಸ್ಸಿನಿಂದ ಯೋಚನೆ ಮಾಡೋದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕಳೆದ ಒಂದು ದಶಕದಿಂದ ಜನ ಬಡತನ ರೇಖೆಗಿಂತ ಎಷ್ಟು ಕೆಳಗೆ ಹೋಗಿದ್ದಾರೆ ಎನ್ನುವುದನ್ನು ನೋಡಬೇಕು. ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗಿಯೇ ಇರುತ್ತಿದ್ದಾರೆ.

ನಾರಾಯಣ ಮೂರ್ತಿಯವರು ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ. ಅವರು ಇನ್ಫೋಸಿಸ್ ಫೌಂಡೇಶನ್ ಮೂಲಕ ಸಾಕಷ್ಟು ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ನೀವೇನು ಸೇವೆ ಕೊಡುತ್ತಿದ್ದೀರಾ, ಅದರ ಜೊತೆಗೆ ನಾಗರಿಕ ಜವಾಬ್ದಾರಿ ಕೂಡ ಇರಲಿ ಎಂದರು. ನೀವು ಸಿಟಿಜನ್ ರೈಟ್ ಎಂದು ಹೇಳುತ್ತೀರಾ, ಸಿಟಿಜನ್ ಡ್ಯೂಟಿಸ್ ಅನ್ನು ಕೂಡ ಹೇಳಬೇಕು ಎಂದಿದ್ದಾರೆ. ಅದರ ಅರ್ಥ ನಾವು ಸರ್ಕಾರದ ಯೋಜನೆಗಳನ್ನ ಇನ್ಸೆಂಟಿವ್ ರೀತಿ ಕೊಡಬೇಕು ಎಂದರು.

ಇದನ್ನೂ ಓದಿ:ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು; ಸಬ್ಸಿಡಿ ಪಡೆಯುವವರಿಗೂ ಹೊಣೆಗಾರಿಕೆ ಬೇಕು: ನಾರಾಯಣಮೂರ್ತಿ

ಮಧ್ಯಾಹ್ನದ ಬಿಸಿ ಊಟ ಶುರು ಮಾಡಿದ ಉದ್ದೇಶ ಏನಿತ್ತು? ಮಕ್ಕಳು ಹೆಚ್ಚು ಶಾಲೆಗೆ ಬರಬೇಕು ಎಂಬುದು. ಅದರಂತೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಮಕ್ಕಳು ಶಾಲೆಗೆ ಬರುವುದಕ್ಕೆ ಶುರು ಮಾಡಿದರು. ಸ್ಕಾಲರ್ಶಿಪ್ ಕೊಡುವುದರಿಂದ ಶೈಕ್ಷಣಿಕವಾಗಿ ಸಹಾಯ ಆಯಿತು. ಅಧ್ಯಯನದ ಮೇಲೆಯೇ ಯುನಿವರ್ಸಲ್ ಬೇಸಿಕ್ ಇನ್ಕಮ್ ಎಂಬ ಕಾನ್ಸೆಪ್ಟ್ ಬಂದಿದ್ದು, ಗ್ಯಾರಂಟಿಗಳಿಂದ ಕುಟುಂಬಗಳಿಗೆ ಸಾಕಷ್ಟು ಉಳಿತಾಯ ಆಗುತ್ತಿದೆ. ತಿಂಗಳಿಗೆ ಎಂಟರಿಂದ ಹತ್ತು ಸಾವಿರ ಒಂದು ಕುಟುಂಬಕ್ಕೆ ಉಳಿತಾಯ ಆಗುತ್ತಿದೆ.

ಒಂದು ಕುಟುಂಬಕ್ಕೆ ವರ್ಷಕ್ಕೆ 1 ಲಕ್ಷ, 20 ಸಾವಿರ ಉಳಿತಾಯ

ಒಂದು ಕುಟುಂಬಕ್ಕೆ ವರ್ಷಕ್ಕೆ 1 ಲಕ್ಷ, 20 ಸಾವಿರ ಉಳಿತಾಯ ಆಗುತ್ತದೆ. ಇದರಿಂದಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡುತ್ತಾರೆ. ಮಕ್ಕಳು ಚೆನ್ನಾಗಿ ಓದಲಿ ಎಂದು ಟ್ಯೂಷನ್ ಕಳಿಸುತ್ತಾರೆ. ಜೊತೆಗೆ ಅಗತ್ಯ ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಸಹಾಯ ಆಗುತ್ತದೆ. ಇದೆಲ್ಲವೂ ಕೂಡ ವಾಪಸ್ ಬರುತ್ತೆ. ಯೂನಿವರ್ಸಲ್ ಬೇಸಿಕ್ ಇನ್ ಕಂ ಕಾನ್ಸೆಪ್ಟ್ ಗ್ಯಾರೆಂಟಿಯ ಮೂಲಕ ನಾವು ಪ್ರಯೋಗ ಮಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಆಚಾರ ವಿಚಾರ ಇದೆ. ಹಾಗೆಯೇ ಪ್ರಚಾರದ ಕೊರತೆ ಇದೆ. ನಮ್ಮ ಗ್ಯಾರಂಟಿಗಳು ಹೇಗೆ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎನ್ನುವುದಕ್ಕೆ ಒಂದು ವರ್ಷದ ಸೈಕಲ್ ನೋಡಬೇಕು ಎಂದು ಹೇಳಿದರು.

ಯಾವುದನ್ನೂ ಉಚಿತವಾಗಿ ಕೊಡಬಾರದು ಎಂದಿದ್ದ ಇನ್ಫೋಸಿಸ್ ನಾರಾಯಣಮೂರ್ತಿ

ಇಂದು(ನ.30) ಬೆಂಗಳೂರು ಟೆಕ್ ಸಮಿಟ್​ನಲ್ಲಿ ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದ ನಾರಾಯಣಮೂರ್ತಿ ಅವರು ‘ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು. ಉಚಿತವಾಗಿ ಕೊಟ್ಟರೂ ಜೊತೆಯಲ್ಲಿ ಹೊಣೆಗಾರಿಕೆಯನ್ನೂ ಕೊಡಬೇಕು ಎಂದು ಕಿವಿಮಾತು ಹೇಳಿದ್ದರು. ಜೊತೆಗೆ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ