ಛೇ ಇದೆಂತಾ ವಿಕೃತಿ.. ಹಸುಗಳ ಕೆಚ್ಚಲು ಕೊಯ್ದ ದುರುಳರು, ಸ್ಥಳದಲ್ಲಿ ಬಿಗುವಿನ ವಾತಾವರಣ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮಾನವೀಯ ಘಟನೆಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಅತೀ ಭೀಕರ ಘಟನೆಯೊಂದು ವರದಿಯಾಗಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದು, ರಸ್ತೆ ತುಂಬೆಲ್ಲ ರಕ್ತ ಹರಿದಿದ್ದು, ಘಟನಾ ಸ್ಥಳಕ್ಕೆ ಬಿಜೆಪಿ ನಾಯಕರ ಆಗಮಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಛೇ ಇದೆಂತಾ ವಿಕೃತಿ.. ಹಸುಗಳ ಕೆಚ್ಚಲು ಕೊಯ್ದ ದುರುಳರು, ಸ್ಥಳದಲ್ಲಿ ಬಿಗುವಿನ ವಾತಾವರಣ
Chamrajpet Cow
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 12, 2025 | 11:49 AM

ಬೆಂಗಳೂರು, (ಜನವರಿ 12): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುರುಳರು ಅಟ್ಟಹಾಸ ಮೆರೆದಿದ್ದಾರೆ. ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿರುವ ಘಟನೆ ನಡೆದಿದೆ. . ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು (ಜನವರಿ 12) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಾಮರಾಜಪೇಚೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಒಟ್ಟು 8 ಹಸುಗಳನ್ನು ಸಾಕಿರುವ ಕರ್ಣ ಪ್ರತಿ ದಿನ ಆರೈಕೆ ಮಾಡುತ್ತಾರೆ. ಈ ಪೈಕಿ ಮೂರ ರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗುತ್ತದೆ. ಹೀಗೆ ನಿನ್ನೆ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದಾರೆ. ಮೂಕ ಪ್ರಾಣಿಗಳ ನರಳಾಟ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಘಟನಾ ಸ್ಥಳಕ್ಕೆ ಸಂಸದ ಪಿಸಿ ಮೋಹನ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುಟ್ಟಿದ ಹಬ್ಬದಂದೇ ಪ್ರಾಣ ಬಿಟ್ಟ ಬಾಲಕ, ಪೋಷಕರ ಆಕ್ರಂದನ

ಭುಗಿಲೆದ್ದ ಆಕ್ರೋಶ, ಸ್ಥಳದಲ್ಲಿ ಬಿಗುವಿನ ವಾತಾವರಣ

ಮೂಕ ಪ್ರಾಣಿಗಳ ಕೆಚ್ಚಲು ಕೊಯ್ದ ಘಟನೆ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ಸಂಸದ ಪಿಸಿ ಮೋಹನ್​ ಭೇಟಿ ನೀಡಿದ್ದಾರೆ. ಇನ್ನು ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದ್ದಾರೆ.

ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು. ಅಲ್ಲಿಯವರೆಗೂ ಸ್ಥಳದಿಂದ ಹೋಗಲ್ಲ. ವಿರೋಧ ಪಕ್ಷದ ನಾಯಕರು ಈಗ ಸ್ಥಳಕ್ಕೆ ಬರುತ್ತಾರೆ. ಇಲ್ಲಿ ಹಸುವಿನ ಆಸ್ಪತ್ರೆಯಿತ್ತು. ಅದನ್ನು ಮುಚ್ಚಲು ಮುಂದಾಗಿದ್ದರು. ಆದ್ರೆ, ಇದನ್ನು ಹಸುವಿನ ಮಾಲೀಕ ಕರ್ಣ ವಿರೋಧಿಸಿದ್ದ. ಅದಕ್ಕೆ ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಪಿಸಿ ಮೋಹನ್ ಆರೋಪಿಸಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ವಿಪಕ್ಷ ನಾಯಕರ ಆರ್ ಅಶೋಕ್ ಸಹ ಭೇಟಿ ನೀಡಲಿದ್ದಾರೆ. ಹೀಗಾಗಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ರಮೇಶ್ ದೌಡಾಯಿಸಿದ್ದಾರೆ.

ನೋವು ತೋಡಿಕೊಂಡ ಹಸುಗಳ ಮಾಲೀಕ

ಇನ್ನು ಘಟನೆ ಬಗ್ಗೆ ಟಿವಿ9 ಗೆ ಹಸುಗಳ ಮಾಲೀಕ ಕರ್ಣ ಪ್ರತಿಕ್ರಿಯಿಸಿದ್ದು, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿಬೇಕು. ಇಲ್ಲ ನಮ್ಮ ಕೈಯಲ್ಲಿ ಕೊಡಿ ನಾವು ಬುದ್ದಿ ಕಲಿಸುತ್ತೇವೆ. ಹಸುವಿನ ಕಾಲಿಗೆ ಮಚ್ಚಿನಲ್ಲಿ ಹೊಡೆದಿದ್ದಾರೆ. ಮೂರು ಹಸುವಿನ ಕೆಚ್ಚಲು ಕಟ್ ಮಾಡಿದ್ದಾರೆ ಎಂದು ನೋವು ತೋಡಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:41 am, Sun, 12 January 25

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ