ಟಿಕಾಯತ್ ಮೇಲೆ ಮಸಿ‌ ಪ್ರಕರಣ; ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಟಿಕಾಯತ್ ಮೇಲೆ ಪತ್ರಕರ್ತರ ಸೋಗಿನಲ್ಲಿ ಹೋಗಿ ಮಸಿ ಬಳಿದಿದ್ದಾರೆ. ಈ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನ. ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಟಿಕಾಯತ್ ಮೇಲೆ ಮಸಿ‌ ಪ್ರಕರಣ; ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ - ರಾಕೇಶ್ ಟಿಕಾಯತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: May 30, 2022 | 6:48 PM

ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವಾಗ ರೈತ ಮುಖಂಡ ರಾಕೇಶ್ ಟಿಕಾಯತ್ (Rakesh Tikait) ಮೇಲೆ ಹಲ್ಲೆ ನಡೆಸಿ ಮಸಿ ಬಳಿದ (Ink Attack) ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.  ಟಿಕಾಯತ್ ಮೇಲೆ ಪತ್ರಕರ್ತರ ಸೋಗಿನಲ್ಲಿ ಹೋಗಿ ಮಸಿ ಬಳಿದಿದ್ದಾರೆ. ಈ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನ. ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಹಲ್ಲೆ ನಡೆಸಿದವರು ಯಾವ ಪಕ್ಷದವರಾದರೆ ಏನಂತೆ? ಕರ್ನಾಟಕದಲ್ಲಿ ಇಂಥ ಘಟನೆಗಳು ಆಗಬಾರದು. ಇನ್ನೊಂದು ವರ್ಷದಲ್ಲಿ ಚುನಾವಣೆ ನಡೆಯಲಿದೆ.ಕಾಂಗ್ರೆಸ್ ಪಕ್ಷ ಜನರಿಂದ ದೂರವಾಗುತ್ತಿದೆ. ಅದಕ್ಕೋಸ್ಕರ ಡಿಕೆಶಿವಕುಮಾರ್ ಇಂಥ ಹೇಳಿಕೆ ಕೊಡ್ತಿದ್ದಾರೆ. ಇಂಥ ಮಾತುಗಳನ್ನು ಹೇಳಿ ಹೇಳಿಯೇ ಕಾಂಗ್ರೆಸ್ ದೇಶದಲ್ಲೇ ದೂರವಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಚರ್ಚೆ ನಡೆಸಲು ನಗರದ ಗಾಂಧಿ ಭವನದಲ್ಲಿ ಕರೆದಿದ್ದ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್ನಿಂದ ಹಲ್ಲೆ ನಡೆಸಿದ್ದು, ಮಸಿ ಬಳಿದಿದ್ದಾನೆ. ನಂತರ ಸಭೆಯಲ್ಲಿ ನೆರೆದಿದ್ದ ಇತರರು ಆತನನ್ನು ಹಿಡಿದು, ಕುರ್ಚಿಗಳಿಂದಲೇ ಥಳಿಸಿದರು. ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ, ಮಹಿಳೆಯರು ಭಯಗೊಂಡು ಕಿರುಚಿದರು.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಗಳಲ್ಲಿ ರಾಕೇಶ್ ಟಿಕಾಯತ್ ಮುಂಚೂಣಿಯಲ್ಲಿದ್ದರು. ನಂತರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಜಯಗಳಿಸಿತು. ಕೋಡಿಹಳ್ಳಿ ಚಂದ್ರಶೇಖರ್ ಮತ್ತು ರಾಕೇಶ್ ಟಿಕಾಯತ್ ಪರಸ್ಪರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿಕೊಂಡಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿಯಲಾಯಿತು.

ಇದನ್ನೂ ಓದಿ
Image
Rakesh Tikait: ರಾಕೇಶ್ ಟಿಕಾಯತ್, ಯುದ್ಧ್​ವೀರ್ ಸಿಂಗ್​​ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ವ್ಯಕ್ತಿಗೆ ಥಳಿತ
Image
ಸರ್ಕಾರಿ ಭೂಮಿ ಕಬಳಿಕೆ ಆರೋಪ: ಬಿಕೆಯು ಒಡಕಿನ ಬಳಿಕ ಟಿಕಾಯತ್ ಸಹೋದರರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ
Image
‘ರೈತ ನಾಯಕ’ ರಾಕೇಶ್ ಟಿಕಾಯತ್ ಹಾಗೂ ನರೇಶ್ ಟಿಕಾಯಿತ್ ಹೊರ ಹಾಕಿದ ಭಾರತೀಯ ಕಿಸಾನ್ ಯೂನಿಯನ್

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ರಾಕೇಶ್ ಟಿಕಾಯತ್, ‘ಇಂಥ ಘಟನೆ ನಡೆಯಬಾರದಿತ್ತು. ಪೊಲೀಸರು ಭದ್ರತೆ ಒದಗಿಸಿರಲಿಲ್ಲ. ಸರ್ಕಾರವು ಈ ಘಟನೆಯಲ್ಲಿ ಶಾಮೀಲಾಗಿದೆ’ ಎಂದು ಆರೋಪಿಸಿದ್ದಾರೆ.

ರಾಜ್ಯದ  ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ