ಆ ಸಭ್ಯಸ್ಥ ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ, ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದರು: ಕಾರಣವೇನು?

ಇತ್ತೀಚೆಗೆ ಆನೇಕಲ್ ತಾಲೂಕಿನಲ್ಲಿ ಕೊಲೆ ಸುಲಿಗೆ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಿನವೊಂದಕ್ಕೆ ಎರಡರಂತೆ ಕೊಲೆ ನಡೆಯುತ್ತಿರುವುದರಿಂದ ಆನೇಕಲ್ ಜನರು ಬೆಚ್ಚಿ ಬಿದ್ದಿದ್ದಾರೆ.

ಆ ಸಭ್ಯಸ್ಥ ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ, ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದರು: ಕಾರಣವೇನು?
ಆನೇಕಲ್ -ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ
Follow us
| Updated By: ಸಾಧು ಶ್ರೀನಾಥ್​

Updated on: Aug 02, 2023 | 10:44 AM

ಆತ ಸಭ್ಯಸ್ಥ (Innocent) ಯುವಕ ತಾನಾಯ್ತು ತನ್ನ ಕೆಲಸವಾಯ್ತು ಅಂತ ಇದ್ದ… ಎಂದಿನಂತೆ ಬೆಳಗ್ಗೆ ಹಾರ್ಡ್ವೇರ್ ಶಾಪ್ ನಲ್ಲಿ ಕೆಲಸಕ್ಕೆ ಹೋಗಿ ಸಂಜೆ ವೇಳೆಗೆ ಮನೆಗೆ ಬರ್ತಿದ್ದ. ಮೊನ್ನೆ ಸೋಮವಾರ ದಿನ ಕೆಲಸಕ್ಕೆ ಹೋದ ಮಗ ಮನೆಗೆ ಬರಲೇ ಇಲ್ಲ, ತಾಯಿಯು ಮಗನ ಬರುವಿಕೆಗಾಗಿ ಕಾಯುತ್ತಿದ್ದರು. ಆದ್ರೆ ಕಳೆದ ರಾತ್ರಿ ಕೆಲಸ ಮುಗಿಸಿಕೊಂಡು ಮನೆಯ ಕಡೆಗೆ ದ್ವಿಚಕ್ರ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಕೆಲ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ (murder), ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿದ್ದಾರೆ. ಹಂತಕರಿಂದ ದಾಳಿಗೊಳಗಾಗಿ (miscreants) ರಕ್ತದ ಮಡುವಿನಲ್ಲಿ ಬಿದ್ದು ಸಾವಿಗೀಡಾದ ಯುವಕನ ಹೆಸರು ಹೇಮಂತ್. ಈತ ಆನೇಕಲ್ (Anekal) ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದ ವಾಸಿ. ಹೊಟ್ಟೆಪಾಡಿಗೆ ಅತ್ತಿಬೆಲೆಯ ಹಾರ್ಡ್ವೇರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಮೊನ್ನೆ ರಾತ್ರಿಯೂ ಸಹ ಕೆಲಸ ಮುಗಿಸಿ ರಾತ್ರಿ 9 ಘಂಟೆ ಸುಮಾರಿಗೆ ಮೆಣಸಿಗನಹಳ್ಳಿಯ ಮನೆಗೆ ದ್ವಿಚಕ್ರ ವಾಹನದಲ್ಲಿ ವಾಪಸ್ ಆಗುತ್ತಿದ್ದ.

ಆಗ ಕೆಲ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬಾಲಿಸಿ ಬಂದಿದ್ದಾರೆ. ಜನರ ಓಡಾಟ ಕಡಿಮೆ ಇದ್ದ ಕಡೆ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಬೀಳಿಸಿ ಹೇಮಂತ್ ಗೆ ಡ್ರ್ಯಾಗರ್ ಹಾಗೂ ಚಾಕುವಿನಿಂದ ಇರಿದಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟರು ಸಹ ಬಿಡದ ದುಷ್ಕರ್ಮಿಗಳು ಹೊಲಗಳಲ್ಲಿ ಅಟ್ಟಾಡಿಸಿಕೊಂಡು ಹೋಗಿ ದೇಹದ ಹತ್ತಕ್ಕೂ ಹೆಚ್ಚು ಭಾಗಗಳಲ್ಲಿ ಚುಚ್ಚಿದ್ದಾರೆ. ಗಾಯಗೊಂಡ ಹೇಮಂತ್ ಕಿರುಚಾಡುತ್ತಿದ್ದಂತೆ ಅಲ್ಲಿನ ಸುತ್ತಮುತ್ತಲಿನ ರೈತರು ಬಂದು ನೋಡುಷ್ಟರಲ್ಲಿ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನ ಆಸ್ಪತ್ರಗೆ ರವಾನೆ ಮಾಡಿದ್ರು, ಬದುಕುಳಿಯಲಿಲ್ಲ.

ಇನ್ನು ಹೇಮಂತ್ ವೈಯಕ್ತಿಕವಾಗಿ ಯಾರ ಸಹವಾಸಕ್ಕೂ ಹೋಗುತ್ತಿರಲಿಲ್ಲ, ಆತ ಕೆಲಸಕ್ಕೆ ಹೋಗಿ ನೇರವಾಗಿ ಊರಿಗೆ ಬಂದರೆ ತನ್ನ ಕೆಲಸ ಆಯ್ತು ತಾನಾಯ್ತು ಅಂತ ಊರಿನಲ್ಲಿ ಇರುತ್ತಿದ್ದ. ಆದ್ರೆ ಈ ರೀತಿ ಕೊಲೆ ಮಾಡುವಷ್ಟು ದ್ವೇಷ ಯಾರಿಗಿತ್ತು ಎನ್ನುವುದರ ಬಗ್ಗೆ ಆನೇಕಲ್ ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ನಡೆದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್ ಅವರು ಮೃತನ ಕುಟುಂಬದವರ ಬಳಿ ಮಾಹಿತಿಯನ್ನು ಕಲೆ ಹಾಕಲಾಗಿದೆ. ಕೂಡಲೇ ಕೊಲೆ ಮಾಡಿದ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲಂದಡಿ ತಿಳಿಸಿದ್ದಾರೆ.

Also Read: Bagalkot century school: ಶತಮಾನೋತ್ಸವದ ಅಂಚಿನಲ್ಲಿ ಮೇಲ್ಛಾವಣಿ ಕುಸಿದು, ಮಕ್ಕಳಿಗೆ ಆಕಾಶ ದರ್ಶನ ಭಾಗ್ಯ! ಇದು ಸರಕಾರಿ ಮಾದರಿ ಶಾಲೆ

ಒಟ್ಟಿನಲ್ಲಿ ಇತ್ತೀಚೆಗೆ ಆನೇಕಲ್ ತಾಲೂಕಿನಲ್ಲಿ ಕೊಲೆ ಸುಲಿಗೆ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಿನವೊಂದಕ್ಕೆ ಎರಡರಂತೆ ಕೊಲೆ ನಡೆಯುತ್ತಿರುವುದರಿಂದ ಆನೇಕಲ್ ಜನರು ಬೆಚ್ಚಿ ಬಿದ್ದಿದ್ದಾರೆ. ಪೊಲೀಸ್ ಇಲಾಖೆಯಿಂದ ಎಚ್ಚೆತ್ತುಕೊಂಡು ಅಪರಾಧ ಕೃತ್ಯ ಎಸಗಿ ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕಿದೆ.

ಆನೇಕಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ