ಚಾಲಕನ ಅತಿರೇಕ ವರ್ತನೆ: ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು; ವಿಡಿಯೋ ವೈರಲ್​

ಬೆಂಗಳೂರಿನ ಕಡೆಗೆ ಬರುವ ಹೆಬ್ಬಾಳ ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ​ವಾಹನದಿಂದ ಕೆಳೆಗೆ ಇಳಿದ ಇಟಿಯಾಸ್ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಆಗ ಚಾಲಕ ಇನ್ನೋವಾ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್ ಚಾಲಕ ದಾರಿ ಬಿಟ್ಟಿಲ್ಲ. ಮುಂದೇನಾಯ್ತು? ಇಲ್ಲಿದೆ ಓದಿ..

Follow us
Kiran Surya
| Updated By: ವಿವೇಕ ಬಿರಾದಾರ

Updated on:Dec 04, 2023 | 12:35 PM

ಬೆಂಗಳೂರು, (ಡಿಸೆಂಬರ್ 04): ವ್ಯಕ್ತಿಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕಡೆಗೆ ಬರುವ ಹೆಬ್ಬಾಳ (Hebbal) ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ಇಟಿಯಾಸ್​ ವಾಹನದ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಈ ವೇಳೆ ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್​ ವಾಹನ ಚಾಲಕ ಪಕ್ಕಕ್ಕೆ ಹೋಗಿಲ್ಲ. ಆಗ ಚಾಲಕ ಇನ್ನೋವಾ ಕಾರಿನಿಂದ, ಇಟಿಯಾಸ್​ ಚಾಲಕನನ್ನು ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋಗಿದ್ದಾನೆ.

ಬಳಿಕ ಕಾರು ನಿಲ್ಲಿಸಿ ಚಾಲಕ ಇಟಿಯಾಸ್​ ವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ದೃಶ್ಯಾವಳಿಗಳು ಕಾರಿನ ಡ್ಯಾಶ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋವನ್ನು ಪ್ರದೀಪ್​ ಹೆರಳೆ ಎಂಬುವರು ಎಕ್ಸ್​ (ಟ್ವಿಟರ್​) ನಲ್ಲಿ ಪೋಸ್ಟ್​ ಹಾಕಿ ಬೆಂಗಳೂರು ಸಂಚಾರ ಪೊಲೀಸರಿಗೆ ಟ್ಯಾಗ್​ ಮಾಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

“ಈ ಬಗ್ಗೆ ಅಂದು ಟ್ರಾಫಿಕ್​ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ. ಗಾಡಿಯಲ್ಲಿ ಪ್ಯಾಸೆಂಜರ್ ಇದ್ದರೂ ಕೂಡ ಕೆಎ 05, ಎಎಲ್ 7999 ವಾಹನ ಚಾಲಕನ ಅತಿರೇಕದ ವರ್ತನೆ ತೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:28 pm, Mon, 4 December 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ