ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಲಾ ಆಂಡ್ ಆರ್ಡರ್ ಪೊಲೀಸರ ಬಳಕೆಗೆ ಸೂಚನೆ: ಡಿಜಿ ಐಜಿಪಿ ಅಲೋಕ್ ಮೋಹನ್

Bengaluru News: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಹೆಚ್ಚುತ್ತಿರುವ ಹಿನ್ನೆಲೆ ಇದರ ನಿರ್ಹಹಣೆ ಕುರಿತು ಚರ್ಚಿಸಲು ಇಂದು ಕರ್ನಾಟಕ ಡಿಜಿ ಐಜಿಪಿ ಅಲೋಕ್ ಮೋಹನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಲಾ ಆಂಡ್ ಆರ್ಡರ್ ಪೊಲೀಸರ ಬಳಕೆಗೆ ಸೂಚನೆ: ಡಿಜಿ ಐಜಿಪಿ ಅಲೋಕ್ ಮೋಹನ್
ಕರ್ನಾಟಕ ಡಿಜಿ ಐಜಿಪಿ ಅಲೋಕ್ ಮೋಹನ್
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Jul 01, 2023 | 9:05 PM

ಬೆಂಗಳೂರು: ಒಂದು ತಿಂಗಳಲ್ಲಿ ನಗರದಲ್ಲಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಒಂದು ಕ್ರಮ ಅಗಲಿದೆ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರದಲ್ಲಿ ಟ್ರಾಫಿಕ್ (Bengaluru Traffic) ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಟ್ರಾಫಿಕ್ ನಿರ್ವಹಣೆಗೆ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರ ಬಳಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿಶೇಷವಾಗಿ ಟ್ರಾಫಿಕ್ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವವರ ಬಗ್ಗೆ ಚರ್ಚೆ ಮಾಡಲಾಗಿದೆ. ಒಂದು ತಿಂಗಳಲ್ಲಿ ನಗರದಲ್ಲಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಒಂದು ಕ್ರಮ ಅಗಲಿದೆ. ಸಂಚಾರ ನಿರ್ವಹಣೆಗೆ ಹೆಚ್ಚುವರಿ ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗುವುದು ಎಂದರು.

ಇದನ್ನೂ ಓದಿ: New Traffic Guidelines: ಇನ್ಮುಂದೆ ನಿಮಗೆ ಟ್ರಾಫಿಕ್​ ಪೊಲೀಸರ ಕಿರಿಕಿರಿ ಇಲ್ಲ, ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ಪೀಕ್ ಟೈಮ್​ನಲ್ಲಿ ಟ್ರಾಫಿಕ್ ಹೆಚ್ಚು ಇರುತ್ತದೆ. ಈ ವೇಳೆ ಕಾನೂನು ಸುವ್ಯವಸ್ಥೆ ಪೊಲೀಸರು ಕೂಡ ಫೀಲ್ಡ್​​ನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಲಾ ಆಂಡ್ ಆರ್ಡರ್ ಪೊಲೀಸರನ್ನ ಟ್ರಾಫಿಕ್ ಕೆಲಸಕ್ಕೆ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಕೆಲವು ಸಲ ಟ್ರಾಫಿಕ್ ಪೊಲೀಸರು ಇರಬೇಕಾದರೆ ಕ್ರೈಮ್ ಆಗುತ್ತದೆ. ಈ ವೇಳೆ ಅವರು ಕೂಡಲೇ ಆ್ಯಕ್ಟಿವ್ ಆಗಬೇಕು. ಸರಗಳ್ಳತನ ಸೇರಿ ಕೆಲವು ಕೃತ್ಯಗಳು ಟ್ರಾಫಿಕ್ ಪೊಲೀಸರ ಗಮನದಲ್ಲಿರುತ್ತದೆ. ಕೂಡಲೇ ಆರೋಪಿಗಳನ್ನು ಅವರು ಬೆನ್ನತ್ತಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sat, 1 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್