AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Anti Drug Day 2021: ನಾಳೆ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ದೇಶದಲ್ಲಿ ರಾಜ್ಯಗಳ ಪಟ್ಟಿಯಲ್ಲಿ ನಮ್ಮ ರಾಜ್ಯ ಅತಿ ಹೆಚ್ಚು ಡ್ರಗ್ ಸೀಜ್ ಮಾಡಿದ ಪಟ್ಟಿಯಲ್ಲಿದೆ ಮಾದಕ ವಸ್ತುಗಳ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪದಲ್ಲಿ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

International Anti Drug Day 2021: ನಾಳೆ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jun 25, 2021 | 8:50 PM

Share

ನೆಲಮಂಗಲ: ನಾಳೆ (ಜೂನ್ 26) ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನವಾಗಿದ್ದು, ಕಳೆದ 12 ತಿಂಗಳಲ್ಲಿ ಜಪ್ತಿಪಡಿಸಿಕೊಂಡ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಳೆಯೇ ಡಾಬಸ್‌ಪೇಟೆಯ ಕರ್ನಾಟಕ ವೇಸ್ಟ್‌ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್​ನಲ್ಲಿ ನಾಶಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನ್ಯಾಯಾಲಯದ ಅನುಮತಿ ಪಡೆದು ಬೆಂಗಳೂರು ನಗರ ಸೇರಿದಂತೆ 5ಜಿಲ್ಲೆಯ ವಿವಿಧ ಪ್ರಕರಣಗಳಲ್ಲಿ ಸಂಗ್ರಹವಾಗಿದ್ದ 7ಟನ್ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳು ಸುಟ್ಟು ಭಸ್ಮ ಮಾಡಲಾಗುವುದು. ಗಾಂಜಾ-ಅಫೀಮು, ಬ್ರೌನ್ ಶುಗರ್, ಹೆರಾಯಿನ್, ಚರಸ್, ಕೊಕೆನ್ ಮುಂತಾದ ಒಟ್ಟು ಹನ್ನೆರಡು ಪ್ರಕಾರದ 50.23 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು. ಬೆಂಗಳೂರಿನ ಡಿಸಿಪಿಗಳು ಸೇರಿದಂತೆ 5ಜಿಲ್ಲೆಯ ಎಸ್ಪಿಗಳು ಹಾಗೂ ಡ್ರಗ್‌ ಕಮಿಟಿ ಪೊಲೀಸ್ ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಡಿಜಿ ಪ್ರವೀಣ್ ಸೂದ್, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು. ಸಂಪೂರ್ಣ ಯಾಂತ್ರಿಕ ವ್ಯವಸ್ಥೆಯಲ್ಲಿ ರಾಮ್ಕಿ ಸಿಬ್ಬಂದಿ ಸಹಾಯದಿಂದ ಡ್ರಗ್ಸ್ ನಾಶಪಡಿಸಲಾಗುವುದು. 2020-21ನೇ ಸಾಲಿನಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 4,066 ಪ್ರಕರಣ ದಾಖಲಿಸಿ 5,291 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿವರಿಸಿದರು.

ದೇಶದಲ್ಲಿ ರಾಜ್ಯಗಳ ಪಟ್ಟಿಯಲ್ಲಿ ನಮ್ಮ ರಾಜ್ಯ ಅತಿ ಹೆಚ್ಚು ಡ್ರಗ್ ಸೀಜ್ ಮಾಡಿದ ಪಟ್ಟಿಯಲ್ಲಿದೆ ಮಾದಕ ವಸ್ತುಗಳ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪದಲ್ಲಿ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನಾನು ಜೈಲಿಗೆ ಹೋಗಿ ಬಂದ ಮೇಲೆ ನನ್ನ ತಂದೆ ತಾಯಿ ನನ್ನನ್ನು ಮನೆಗೆ ಸೇರಿಸಲಿಲ್ಲ: ‘ಆ ದಿನಗಳ‘ ಅನುಭವ ಬಿಚ್ಚಿಟ್ಟ ಸಚಿವ ಆರ್ ಅಶೋಕ್

ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ

( International Anti Drug Day 2021 Karnataka Home Minister Basavaraj Bommai says will 50 destroy crore worth of narcotics tomorrow)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್