International Anti Drug Day 2021: ನಾಳೆ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

| Updated By: guruganesh bhat

Updated on: Jun 25, 2021 | 8:50 PM

ದೇಶದಲ್ಲಿ ರಾಜ್ಯಗಳ ಪಟ್ಟಿಯಲ್ಲಿ ನಮ್ಮ ರಾಜ್ಯ ಅತಿ ಹೆಚ್ಚು ಡ್ರಗ್ ಸೀಜ್ ಮಾಡಿದ ಪಟ್ಟಿಯಲ್ಲಿದೆ ಮಾದಕ ವಸ್ತುಗಳ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪದಲ್ಲಿ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

International Anti Drug Day 2021: ನಾಳೆ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us on

ನೆಲಮಂಗಲ: ನಾಳೆ (ಜೂನ್ 26) ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನವಾಗಿದ್ದು, ಕಳೆದ 12 ತಿಂಗಳಲ್ಲಿ ಜಪ್ತಿಪಡಿಸಿಕೊಂಡ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಳೆಯೇ ಡಾಬಸ್‌ಪೇಟೆಯ ಕರ್ನಾಟಕ ವೇಸ್ಟ್‌ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್​ನಲ್ಲಿ ನಾಶಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನ್ಯಾಯಾಲಯದ ಅನುಮತಿ ಪಡೆದು ಬೆಂಗಳೂರು ನಗರ ಸೇರಿದಂತೆ 5ಜಿಲ್ಲೆಯ ವಿವಿಧ ಪ್ರಕರಣಗಳಲ್ಲಿ ಸಂಗ್ರಹವಾಗಿದ್ದ 7ಟನ್ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳು ಸುಟ್ಟು ಭಸ್ಮ ಮಾಡಲಾಗುವುದು. ಗಾಂಜಾ-ಅಫೀಮು, ಬ್ರೌನ್ ಶುಗರ್, ಹೆರಾಯಿನ್, ಚರಸ್, ಕೊಕೆನ್ ಮುಂತಾದ ಒಟ್ಟು ಹನ್ನೆರಡು ಪ್ರಕಾರದ 50.23 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು. ಬೆಂಗಳೂರಿನ ಡಿಸಿಪಿಗಳು ಸೇರಿದಂತೆ 5ಜಿಲ್ಲೆಯ ಎಸ್ಪಿಗಳು ಹಾಗೂ ಡ್ರಗ್‌ ಕಮಿಟಿ ಪೊಲೀಸ್ ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.
ಡಿಜಿ ಪ್ರವೀಣ್ ಸೂದ್, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು. ಸಂಪೂರ್ಣ ಯಾಂತ್ರಿಕ ವ್ಯವಸ್ಥೆಯಲ್ಲಿ ರಾಮ್ಕಿ ಸಿಬ್ಬಂದಿ ಸಹಾಯದಿಂದ ಡ್ರಗ್ಸ್ ನಾಶಪಡಿಸಲಾಗುವುದು. 2020-21ನೇ ಸಾಲಿನಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 4,066 ಪ್ರಕರಣ ದಾಖಲಿಸಿ 5,291 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿವರಿಸಿದರು.

ದೇಶದಲ್ಲಿ ರಾಜ್ಯಗಳ ಪಟ್ಟಿಯಲ್ಲಿ ನಮ್ಮ ರಾಜ್ಯ ಅತಿ ಹೆಚ್ಚು ಡ್ರಗ್ ಸೀಜ್ ಮಾಡಿದ ಪಟ್ಟಿಯಲ್ಲಿದೆ ಮಾದಕ ವಸ್ತುಗಳ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪದಲ್ಲಿ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನಾನು ಜೈಲಿಗೆ ಹೋಗಿ ಬಂದ ಮೇಲೆ ನನ್ನ ತಂದೆ ತಾಯಿ ನನ್ನನ್ನು ಮನೆಗೆ ಸೇರಿಸಲಿಲ್ಲ: ‘ಆ ದಿನಗಳ‘ ಅನುಭವ ಬಿಚ್ಚಿಟ್ಟ ಸಚಿವ ಆರ್ ಅಶೋಕ್

ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ

( International Anti Drug Day 2021 Karnataka Home Minister Basavaraj Bommai says will 50 destroy crore worth of narcotics tomorrow)