AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ!

ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವರ ಘೋಷಣೆ ಬಳಿಕ, 18 ದೇಶಗಳ ಪ್ರತಿನಿಧಿಗಳು ಹಾಗೂ ಅರಣ್ಯಾಧಿಕಾರಿಗಳು ವನ್ಯಜೀವಿ ಸಂರಕ್ಷಣೆ ಸೇರಿ ಹಲವು ವಿಷಯದ ಕುರಿತು ಈ ಸಭೆಯಲ್ಲಿ ಚರ್ಚಿಸಲಿದ್ದಾರೆ. ಫೆಬ್ರುವರಿ 9 ರಿಂದ 13ರವರೆಗೆ ಈ ಸಭೆ ನಡೆಯಲಿದೆ.

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ!
ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! Image Credit source: Christian meerman Photography
ಭಾವನಾ ಹೆಗಡೆ
|

Updated on:Feb 02, 2026 | 12:33 PM

Share

ಬೆಂಗಳೂರು, ಫೆಬ್ರುವರಿ 02: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಕೇಂದ್ರ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ, ಈ ವರ್ಷದ ಅಂತಾರಾಷ್ಟ್ರೀಯ ಹುಲಿ ಶೃಂಗಸಭೆಯನ್ನು (International Big cat Summit) ಭಾರತದಲ್ಲಿ ಆಯೋಜಿಸಲು ಸಿದ್ಧತೆಗಳು ಜೋರಾಗಿವೆ. ಈ ಮಹತ್ವದ ಕಾರ್ಯಕ್ರಮಕ್ಕೆ ಕರ್ನಾಟಕದ ಬಂಡೀಪುರ (Bandipur) ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳನ್ನು ಆಯ್ಕೆ ಮಾಡಿರುವುದು ವಿಶೇಷವಾಗಿದೆ.

5 ದಿನದ ಕಾರ್ಯಾಗಾರದಲ್ಲಿ 18 ದೇಶದ ಪ್ರತಿನಿಧಿಗಳು ಭಾಗಿ

ಫೆಬ್ರುವರಿ 9ರಿಂದ 13ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಕಾರ್ಯಾಗಾರ ಮತ್ತು ತರಬೇತಿ ಕಾರ್ಯಕ್ರಮವನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಸಂಯುಕ್ತವಾಗಿ ಆಯೋಜಿಸುತ್ತಿವೆ. ಇದು ಭಾರತದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯಾಗಿದ್ದು, ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆಯ ಕುರತು ಜಾಗತಿಕ ಗಮನ ಸೆಳೆಯುವ ಉದ್ದೇಶ ಹೊಂದಿದೆ.

ಇದನ್ನೂ ಓದಿ ಮೋದಿ ಸಫಾರಿ: ಗಮನ ಸೆಳೆದ ಮೋದಿ ಡ್ರೆಸ್, ಬಂಡೀಪುರ ಲೋಗೋ ಇರುವ ದಿರಿಸು ಚಿತ್ರಗಳಲ್ಲಿ ನೋಡಿ

18 ದೇಶಗಳ ಪ್ರತಿನಿಧಿಗಳು ಹಾಗೂ ದೇಶದ ಎಲ್ಲಾ ರಾಜ್ಯಗಳ ಅರಣ್ಯಾಧಿಕಾರಿಗಳು ಮೊದಲ ಎರಡು ದಿನ ಬಂಡೀಪುರದಲ್ಲಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದು, ಫೆಬ್ರುವರಿ 11 ಮತ್ತು 12ರಂದು ನಾಗರಹೊಳೆಯಲ್ಲಿ ಕಾರ್ಯಕ್ರಮ ಮುಂದುವರಿಯಲಿದೆ. 2023ರಲ್ಲಿ ಮೈಸೂರುನಲ್ಲಿ ಹುಲಿ ಗಣತಿ ವರದಿ ಬಿಡುಗಡೆ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಘೋಷಿಸಿದ್ದರು.

ಸಭೆಯಲ್ಲಿ ಏನೆಲ್ಲಾ ಚರ್ಚೆ?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿದ್ದು, ಚಿರತೆ, ಹಿಮ ಚಿರತೆ ಸೇರಿದಂತೆ ಬಿಗ್ ಕ್ಯಾಟ್‌ಗಳ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಂರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಕೆ, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಹಕಾರ, ಮತ್ತು ಉತ್ತಮ ಕಾರ್ಯಪದ್ಧತಿಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇದೊಂದಿಗೆ ಅರಣ್ಯ ನಿವಾಸಿಗಳ ಪುನರ್ವಸತಿ, ಹುಲಿ ವಾಸಸ್ಥಾನಗಳಲ್ಲಿ ಅಭಿವೃದ್ಧಿ ಯೋಜನೆಗಳ ನಿಯಂತ್ರಣ ಹಾಗೂ ಸ್ವತಂತ್ರ ವಿಮರ್ಶೆಗಳಿಗೆ ಅವಕಾಶ ನೀಡಬೇಕೆಂಬ ಅಭಿಪ್ರಾಯವೂ ತಜ್ಞರಿಂದ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:31 pm, Mon, 2 February 26

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ