International Yoga Day Highlights: ಯೋಗ ಎಂಬುದು ಕೇವಲ ವ್ಯಾಯಾಮವಲ್ಲ, ಜೀವನ ವಿಧಾನ; ಮೋದಿ

ಆಯೇಷಾ ಬಾನು
| Updated By: Ganapathi Sharma

Updated on:Jun 21, 2023 | 9:54 PM

PM Narendra Modi International Yoga Day Speech In US Live Updates: ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ. ಅಮೆರಿಕದ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿಯೂ ಯೋಗ ದಿನಾಚರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿದ್ದಾರೆ. ಕ್ಷಣಕ್ಷಣದ ಅಪ್​ಡೇಟ್ ಇಲ್ಲಿದೆ.

International Yoga Day Highlights: ಯೋಗ ಎಂಬುದು ಕೇವಲ ವ್ಯಾಯಾಮವಲ್ಲ, ಜೀವನ ವಿಧಾನ; ಮೋದಿ
ವಿಶ್ವಸಂಸ್ಥೆ ಪ್ರಧಾನ ಕಚೇರಿ ಆವರಣದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ

ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಆರೋಗ್ಯದ ಸಮಸ್ಯೆಗಳು ಸಾಮಾನ್ಯವಾಗಿದೆ. ಹೀಗಾಗಿ ಆರೋಗ್ಯವನ್ನು ಉತ್ತಮವಾಗಿಸಲು ಯೋಗ ಅತಿ ಮುಖ್ಯ. ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ (International Yoga Day 2023). ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪುರಾತನ ಕಲೆಯಾಗಿದೆ. ಪ್ರತಿವರ್ಷ ಯೊಗ ದಿನದಂದು ಯೋಗ, ಧ್ಯಾನ, ಸಭೆಗಳು, ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. 7ನೇ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಂಡಿರೋ ಪ್ರಧಾನಿ ಮೋದಿ (Narendra Modi) ಅವರು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ (UN) ಪ್ರಧಾನ ಕಚೇರಿಯಲ್ಲಿ ಆಯೋಜಿಸಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಬನ್ನಿ ದೇಶಾದ್ಯಂತ ನಡೆಯಲಿರುವ ಯೋಗ ದಿನಾಚರಣೆಯ ಕ್ಷಣ ಕ್ಷಣದ ಮಾಹಿತಿ ಟಿವಿ9 ಡಿಜಿಟಲ್​ನಲ್ಲಿ ಪಡೆಯಿರಿ.

LIVE NEWS & UPDATES

The liveblog has ended.
  • 21 Jun 2023 07:28 PM (IST)

    International Yoga Day 2023 Live: ಸುಪ್ರೀಂ ಕೋರ್ಟ್​​ನಲ್ಲಿಯೂ ಯೋಗ ದಿನಾಚರಣೆ

    ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ರಿಜಿಸ್ಟ್ರಿ ಅಧಿಕಾರಿಗಳೊಂದಿಗೆ ಸೇರಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಿದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸರ್ವೋಚ್ಚ ನ್ಯಾಯಾಲಯದ ಇತರ ನ್ಯಾಯಾಧೀಶರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

    ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಾಗೂ ಇತರರು ಯೋಗಾಭ್ಯಾಸ ಮಾಡಿದರು

  • 21 Jun 2023 06:23 PM (IST)

    International Yoga Day 2023 Live: ಯೋಗ ದಿನಾಚರಣೆಯ ಲೈವ್ ಇಲ್ಲಿ ನೋಡಿ

    ಅಮೆರಿಕದ ನ್ಯೂಯಾರ್ಕ್​​ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇರ ಪ್ರಸಾರ ಇಲ್ಲಿ ನೋಡಿ.

  • 21 Jun 2023 06:19 PM (IST)

    International Yoga Day 2023 Live: ಯೋಗ ಎಂಬುದು ಕೇವಲ ವ್ಯಾಯಾಮವಲ್ಲ, ಜೀವನ ವಿಧಾನ; ಮೋದಿ

    ಯೋಗ ಎಂಬುದು ಕೇವಲ ವ್ಯಾಯಾಮವಲ್ಲ, ಜೀವನ ವಿಧಾನ. ಯೋಗ ಅಂದರೆ ಏಕತೆ, ಮಾನವೀಯತೆ. ಯೋಗದ ಶಕ್ತಿ ನಮ್ಮನ್ನು ಆರೋಗ್ಯವಾಗಿರಿಸುವುದಷ್ಟೇ ಅಲ್ಲ, ಸ್ವಸ್ಥವಾಗಿರಿಸುವುದಾಗಿದೆ. ನಿಜವಾಗಿಯೂ ಇಂದು ಯೋಗ ಜಾಗತಿಕವಾಗಿ ಪ್ರಖ್ಯಾತಿಯಾಗಿದೆ. ಯೋಗ ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ. ಸರ್ವೇ ಭವಂತು ಸುಖಿನಃ. ಸರ್ವೇ ಸಂತು ನಿರಾಮಯಃ. ಎಲ್ಲರೂ ಸುಖವಾಗಿ, ಆರೋಗ್ಯವಾಗಿ ಇರುವಂತಾಗಲಿ ಎಂದು ಪ್ರಧಾನಿ ಮೋದಿ ಹೇಳಿದರು.

  • 21 Jun 2023 06:17 PM (IST)

    International Yoga Day 2023 Live: ಯೋಗಕ್ಕಿಲ್ಲ ಪೇಟೆಂಟ್; ಮೋದಿ

    ಯೋಗದ ಅರ್ಥ ಜೋಡಿಸುವುದು ಎಂದಾಗಿದೆ. 9 ವರ್ಷಗಳ ಹಿಂದೆ ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ಕರೆ ನೀಡಿದ್ದೆ. ಅಂದಿನ ನೆನಪುಗಳು ಇಂದು ಮರುಕಳಿಸಿವೆ. ಯೋಗ ಭಾರತದಿಂದ ವಿಶ್ವಕ್ಕೆ ಪಸರಿಸಿದೆ. ಇದಕ್ಕೆ ಪೇಟೆಂಟ್ ಇಲ್ಲ, ಹಕ್ಕುಸ್ವಾಮ್ಯ ಇಲ್ಲ. ಎಲ್ಲರೂ ಅಳವಡಿಸಿಕೊಳ್ಳಬಹುದು. ಮನೆಯಲ್ಲಿ, ಕೆಲಸದ ಸ್ಥಳದಲ್ಲಿ ಸೇರಿದಂತೆ ಎಲ್ಲಿ ಬೇಕಾದರೂ ಮಾಡಬಹುದು. ಒಬ್ಬಂಟಿಯಾಗಿ, ತಂಡವಾಗಿ ಯೋಗಾಭ್ಯಾಸ ಮಾಡಬಹುದು ಎಂದು ಮೋದಿ ಹೇಳಿದರು.

  • 21 Jun 2023 06:14 PM (IST)

    International Yoga Day 2023 Live: ಯೋಗದಿಂದ ನಾವೆಲ್ಲ ಒಗ್ಗಟ್ಟಾಗಿದ್ದೇವೆ; ಪ್ರಧಾನಿ ಮೋದಿ

    9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದಕ್ಕಾಗಿ ನೀವೆಲ್ಲ ಇಲ್ಲಿಗೆ ಬಂದಿದ್ದೀರಿ. ಬಹು ದೂರದಿಂದ ಸೂರ್ಯೋದಯದ ವೇಳೆಗೇ ಇಲ್ಲಿಗೆ ಆಗಮಿಸಿದ್ದೀರಿ. ಯೋಗ ಅಂದರೆ ಒಗ್ಗಟ್ಟು. ಯೋಗದಿಂದಾಗಿ ನಾವೆಲ್ಲ ಇಲ್ಲಿ ಒಂದುಗೂಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

  • 21 Jun 2023 06:08 PM (IST)

    International Yoga Day 2023 Live: ಇಂದಿನ ಆಚರಣೆ ಬಹಳ ವಿಶೇಷ ಏಕೆ? ರುಚಿರ ಕಾಂಬೋಜ್ ಕೊಟ್ಟ ಕಾರಣವಿದು

    ಇಂದಿನ ಆಚರಣೆಯು ನಿಜಕ್ಕೂ ಬಹಳ ವಿಶೇಷವಾಗಿದೆ. ಏಕೆಂದರೆ ಇಲ್ಲಿ ಪ್ರಧಾನಿ ಮೋದಿಯವರು ನಮ್ಮನ್ನು ಮುನ್ನಡೆಸಿ ಯೋಗಾಭ್ಯಾಸ ಮಾಡಿಸಲಿದ್ದಾರೆ. ಅವರ ನೇತೃತ್ವದಲ್ಲಿ ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗದಿನ ಎಂದು ಘೋಷಿಸಲಾಯಿತು ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ರುಚಿರ ಕಾಂಬೋಜ್ ಹೇಳಿದ್ದಾರೆ.

  • 21 Jun 2023 06:00 PM (IST)

    International Yoga Day 2023 Live: ವಿಶ್ವಸಂಸ್ಥೆ ಆವರಣದಲ್ಲಿ ಯೋಗ ದಿನಾಚರಣೆ ಆರಂಭ

    ಅಮೆರಿಕದ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆ ಆವರಣದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆರಂಭಗೊಂಡಿದೆ.

  • 21 Jun 2023 05:53 PM (IST)

    International Yoga Day 2023 Live: ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಹರ್ಷವಾಗುತ್ತಿದೆ; ರಿಕಿ ಕೇಜ್

    ನಾನು ಇಲ್ಲಿರುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ. ಸಾವಿರಾರು ಜನ ಇಲ್ಲಿದ್ದಾರೆ. ನಾನು ಇಂದು ಪ್ರಧಾನಿ ಮೋದಿ ಅವರನ್ನು ಹಿಂಬಾಲಿಸಿಕೊಂಡು ಯೋಗ ಮಾಡುತ್ತೇನೆ. ಈ ಬಾರಿ ಇದು ನಿಜವಾಗಿಯೂ ಅದ್ಭುತವಾಗಲಿದೆ ಎಂದು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತಗಾರ ರಿಕಿ ಕೇಜ್ ನ್ಯೂಯಾರ್ಕ್​​ನಲ್ಲಿ ಹೇಳಿದ್ದಾರೆ. ಅವರು ವಿಶ್ವಸಂಸ್ಥೆ ಆವರಣದಲ್ಲಿ ನಡೆಯುವ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ.

  • 21 Jun 2023 05:35 PM (IST)

    International Yoga Day 2023 Live: ಕೆಲವೇ ಕ್ಷಣಗಳಲ್ಲಿ ವಿಶ್ವಸಂಸ್ಥೆ ಮುಖ್ಯ ಕಚೇರಿಗೆ ಆಗಮಿಸುವ ಮೋದಿ

    ಅಮೆರಿಕದ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆ ಆವರಣದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಕ್ಷಣಗಳಲ್ಲಿ ವಿಶ್ವಸಂಸ್ಥೆ ಮುಖ್ಯ ಕಚೇರಿಗೆ ಮೋದಿ ಆಗಮಿಸಲಿದ್ದಾರೆ.

  • 21 Jun 2023 05:32 PM (IST)

    International Yoga Day 2023 Live: ವಿಶ್ವಸಂಸ್ಥೆ ಆವರಣದಲ್ಲಿ ಕೆಲವೇ ಕ್ಷಣಗಳಲ್ಲಿ ಯೋಗ ದಿನಾಚರಣೆ

    ವಿಶ್ವಸಂಸ್ಥೆ ಆವರಣದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, 180 ದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ.

  • 21 Jun 2023 10:24 AM (IST)

    International Yoga Day 2023 Live: ಟ್ವೀಟ್​ ಮೂಲಕ ಯೋಗ ದಿನಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

    ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಿಎಂ ಟ್ವೀಟ್​ ಮಾಡಿದ್ದಾರೆ. ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ. ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು ಎಂದು ಟ್ವೀಟ್​ ಮೂಲಕ ಸಿಎಂ ಸಿದ್ದರಾಮಯ್ಯ ಜನತೆಗೆ ಶುಭ ಕೋರಿದ್ದಾರೆ.

  • 21 Jun 2023 10:21 AM (IST)

    International Yoga Day 2023 Live: ಎಲ್ಲರೂ ಪ್ರತಿನಿತ್ಯ ಅರ್ಧ ಗಂಟೆ ಯೋಗಾಸನ ಮಾಡಬೇಕು -ಬಿ.ಎಸ್​.ಯಡಿಯೂರಪ್ಪ

    ಎಲ್ಲರೂ ಪ್ರತಿನಿತ್ಯ ಅರ್ಧ ಗಂಟೆ ಯೋಗಾಸನ ಮಾಡಬೇಕು. ಯೋಗ ಮಾಡಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಯೋಗ ಮಾಡುವ ಮೂಲಕ ಮೋದಿ ವಿಶ್ವದ ಗಮನ ಸೆಳೆದಿದ್ದಾರೆ. ಪ್ರಧಾನಿಮಂತ್ರಿ ನರೇಂದ್ರ ಮೋದಿ ಯೋಗದ ಮೂಲಕ ಪ್ರೇರಣೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಯೋಗ ಮಾಡಲು ಸಲಹೆ ಕೊಟ್ಟಿದ್ದಾರೆ.

  • 21 Jun 2023 10:19 AM (IST)

    International Yoga Day 2023 Live: ಯೋಗಾ ದಿನಾಚರಣೆಯಲ್ಲಿ ನಟಿ ಭಾವನ ಭಾಗಿ

    ವಿಶ್ವ ಯೋಗ ದಿನ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗ್ತಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಯೋಗ ಮಾಡುವ ಮೂಲಕ ವಿಶ್ವ ಯೋಗಾ ದಿನವನ್ನ ಆಚರಿಸಲಾಗ್ತಿದೆ.

  • 21 Jun 2023 10:15 AM (IST)

    International Yoga Day 2023 Live: ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆಗೆ ಸಹಾಯಕ -ವೀರೇಂದ್ರ ಹೆಗ್ಗಡೆ

    ಯೋಗ ದಿನಾಚರಣೆಯಿಂದ ವಿಶ್ವದೆಲ್ಲೆಡೆ ಆರೋಗ್ಯ ಪ್ರಜ್ಞೆ ಮೂಡಿದೆ. ಇಂದಿನ ಜೀವನ ಶೈಲಿಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆಗೆ ಸಹಾಯಕ. ವಿಶ್ವಕ್ಕೆ ಯೋಗದಂತಹ ವೈಜ್ಞಾನಿಕ ಕೊಡುಗೆಯನ್ನು ದೇಶ ಕೊಟ್ಟಿದೆ ಎಂದು ಶಿವಮೊಗ್ಗದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯೋಗ ಬಗ್ಗೆ ಸಂದೇಶ ಸಾರಿದ್ದಾರೆ.

  • 21 Jun 2023 09:16 AM (IST)

    International Yoga Day 2023 Live: ಯೋಗ ದಿನದ ಶುಭಾಶಯ ತಿಳಿಸಿದ ಮಾಜಿ ಪ್ರಧಾನಿ ಹೆಚ್​ಡಿಡಿ

    ಯೋಗ ನನ್ನನ್ನು ಉಳಿಸಿಕೊಳ್ಳಲು ಸಹಾಯ ಮಾಡಿದೆ. ಯೋಗ ಅಭ್ಯಾಸ ಮಾಡಿ ಮತ್ತು ಅದರ ಪ್ರಯೋಜನ ಕಂಡುಕೊಳ್ಳಿ ಎಂದು ಟ್ವಿಟರ್ ಮೂಲಕ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.

  • 21 Jun 2023 09:06 AM (IST)

    International Yoga Day 2023 Live: ಯೋಗದ ವೇಳೆ ಮಕ್ಕಳ ತುಂಟಾಟ

    ವಿಶ್ವ ಯೋಗ ದಿನ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗ್ತಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಯೋಗ ಮಾಡುವ ಮೂಲಕ ವಿಶ್ವ ಯೋಗಾ ದಿನವನ್ನ ಆಚರಿಸಲಾಗ್ತಿದೆ.

  • 21 Jun 2023 09:03 AM (IST)

    International Yoga Day 2023 Live: ಯೋಗದ ಮೂಲಕ ಯುವಕರಿಗೆ ಸ್ಫೂರ್ತಿ ತುಂಬಿದ ಪ್ರಲ್ಹಾದ್ ಜೋಶಿ

    ವಿಶ್ವ ಯೋಗ ದಿನ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗ್ತಿದೆ. ಹುಬ್ಬಳ್ಳಿಯಲ್ಲಿ ಯೋಗ ಮಾಡುವ ಮೂಲಕ ಪ್ರಲ್ಹಾದ್ ಜೋಶಿ ಯುವಕರಿಗೆ ಸ್ಫೂರ್ತಿ ತುಂಬಿದ್ದಾರೆ.

  • 21 Jun 2023 09:00 AM (IST)

    International Yoga Day 2023 Live: ಯೋಗ ಮಾಡುವ ಮೂಲಕ ಆರೋಗ್ಯ ಸಚಿವರಿಂದ ಸಂದೇಶ

    ವಿಶ್ವ ಯೋಗ ದಿನ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗ್ತಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಯೋಗ ಮಾಡುವ ಮೂಲಕ ವಿಶ್ವ ಯೋಗಾ ದಿನವನ್ನ ಆಚರಿಸಲಾಗ್ತಿದೆ.

  • 21 Jun 2023 08:56 AM (IST)

    International Yoga Day 2023 Live: ವಿಧಾನಸೌಧ ಮುಂದೆ ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮ

    ವಿಧಾನಸೌಧ ಮುಂದೆ ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮ ಆರಂಭವಾಗಿದ್ದು ರಾಜ್ಯಪಾಲ ತಾವರ್​ಚಂದ್ ಗೆಹ್ಲೋಟ್ ಯೋಗದ ಮಹತ್ವವನ್ನು ಸಾರಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಯೋಗ ಇದೆ. ಯೋಗದ ಮಹತ್ವದ ಕುರಿತು ನಮ್ಮ ಹಳೆಯ ಗ್ರಂಥಗಳಲ್ಲಿ ಉಲ್ಲೇಖವಿದೆ. ಯೋಗಭ್ಯಾಸದಿಂದ ಭೌತಿಕ, ಮಾನಸಿಕ ಆರೋಗ್ಯ ಸುಧಾರಣೆಯಾಗುತ್ತೆ. ಪ್ರಧಾನಿ ಮೋದಿ ಯೋಗ ದಿನ ಆಚರಣೆ ಬಗ್ಗೆ ವಿಶ್ವಸಂಸ್ಥೆ ಬಳಿ ಪ್ರಸ್ತಾಪ ಮಾಡಿದ್ದು, ಅದಕ್ಕೆ ಒಪ್ಪಿ ಇಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗ್ತಿದೆ ಎಂದರು.

  • 21 Jun 2023 08:49 AM (IST)

    International Yoga Day 2023 Live: ನಾನು ಇವತ್ತು ಮೊದಲ ಬಾರಿಗೆ ಯೋಗ ಮಾಡಿದ್ದೇನೆ -ಶಾಸಕ ರಿಜ್ವಾನ್ ಅರ್ಷದ್

    ನಾನು ಇವತ್ತು ಮೊದಲ ಬಾರಿಗೆ ಯೋಗ ಮಾಡಿದ್ದೇನೆ. ಇನ್ಮುಂದೆ ಮುಂದುವರಿಸಬೇಕು ಅಂತ ಅನ್ನಿಸುತ್ತಿದೆ. ಸಾವಿರಾರು ವರ್ಷಗಳಿಂದ ಯೋಗಾ ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ರಾಜಕಾರಣಿಗಳು, ಸರ್ಕಾರದಿಂದ ಯೋಗಕ್ಕೆ ಪಾಪ್ಯುಲಾರಿಟಿ ಬಂದಿಲ್ಲ. ಸಾವಿರಾರು ವರ್ಷಗಳ ಇತಿಹಾಸವನ್ನ ಯೋಗಾ ಹೊಂದಿದೆ ಎಂದು ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ರು.

  • 21 Jun 2023 07:52 AM (IST)

    International Yoga Day 2023 Live: ಸಿಕ್ಕಿಂನಲ್ಲಿ ಭಾರತೀಯ ಸೇನೆಯಿಂದ ಯೋಗ ದಿನ ಆಚರಣೆ

    ಸಿಕ್ಕಿಂನಲ್ಲಿ ಭಾರತೀಯ ಸೇನೆಯಿಂದ ಯೋಗ ದಿನ ಆಚರಣೆ.

  • 21 Jun 2023 07:49 AM (IST)

    International Yoga Day 2023 Live: ಇದೇ ಮೊದಲ ಬಾರಿಗೆ ಕಾರವಾರ ಕಡಲತೀರದಲ್ಲಿ ನೌಕಾನೆಲೆಯಿಂದ ಯೋಗ ದಿನಾಚರಣೆ

    ಕಾರವಾರ ಕಡಲತೀರದಲ್ಲಿ ನೌಕಾನೆಲೆಯಿಂದ ಯೋಗ ದಿನಾಚರಣೆ ಆಚರಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಟ್ಯಾಗೋರ್ ಕಡಲತೀರದಲ್ಲಿ ನೌಕಾನೆಲೆ ಅಧಿಕಾರಿಗಳು, ಸಿಬ್ಬಂದಿ, ಎನ್‌ಸಿಸಿ ವಿದ್ಯಾರ್ಥಿಗಳು ಸೇರಿದಂತೆ 200ಕ್ಕೂ ಅಧಿಕ ನೌಕಾನೆಲೆ ಸಿಬ್ಬಂದಿ ಏಕಕಾಲಕ್ಕೆ ಯೋಗ ಮಾಡಿದ್ದಾರೆ. ಇದೇ ಮೊದಲಬಾರಿಗೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನೌಕಾನೆಲೆಯಿಂದ ಯೋಗ ನಡೆಯುತ್ತಿದೆ.

  • 21 Jun 2023 07:34 AM (IST)

    International Yoga Day 2023 Live: ಜೋಲ್ಲೆ ದಂಪತಿಯಿಂದ ಸಾಮೂಹಿಕ ಯೋಗ ದಿನಾಚರಣೆ ಆಚರಣೆ

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಭಾ ಪಟ್ಟಣದ ನನದಿ ಶಾಲೆಯಲ್ಲಿ ಆಯೋಜನೆ ಮಾಡಿರುವ ಸಾಮೂಹಿಕ ಯೋಗ ದಿನಕ್ಕೆ ಶಾಸಕಿ ಶಶಿಕಲಾ ಜೋಲ್ಲೆ ಹಾಗೂ ಸಂಸದ ಅಣ್ಣಾಸಾಬ ಜೋಲ್ಲೆ ಚಾಲನೆ ನೀಡಿದ್ರು. ಯೋಗ ದಿನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಾಲಾ ಮಕ್ಕಳು ಹಾಗೂ ಸ್ಥಳೀಯರು ಭಾಗಿಯಾಗಿದ್ದಾರೆ.

  • 21 Jun 2023 07:24 AM (IST)

    International Yoga Day 2023 Live: ಶರಣಬಸವೇಶ್ವರ ವಿಶ್ವವಿದ್ಯಾಲಯದ ಆವರಣದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗ

    ಪತಂಜಲಿ ಯೋಗ ಸಮಿತಿ‌ ಹಾಗೂ ಅಪ್ಪಾ ಕಾಲೇಜು ಸಹಯೋಗದಲ್ಲಿ ಶರಣಬಸವೇಶ್ವರ ವಿಶ್ವವಿದ್ಯಾಲಯದ ಆವರಣದಲ್ಲಿ ಯೋಗ ದಿನಾಚರಣೆ ನಡೆಯುತ್ತಿದೆ. 1000 ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ.

  • 21 Jun 2023 07:20 AM (IST)

    International Yoga Day 2023 Live: ಬಳ್ಳಾರಿಯ ಎಸ್​ಜಿ ಕಾಲೇಜು ಆವರಣದಲ್ಲಿ ಸಸಿಗೆ ನೀರು ಹಾಕಿ ಯೋಗ ದಿನ ಆಚರಣೆ

    ಬಳ್ಳಾರಿಯ ಎಸ್​ಜಿ ಕಾಲೇಜು ಆವರಣದಲ್ಲಿ ಯೋಗ ದಿನ ಆಚರಿಸಲಾಗುತ್ತಿದ್ದು ಶಾಸಕ, ಸಚಿವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಮೇಯರ್ ತ್ರಿವೇಣಿ, ಸಿಇಓ ರಾಹುಲ್ ಸಂಕನೂರು, ಎಡಿಸಿ ಮಹಮ್ಮದ್ ಜುಬೇರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದಾರೆ. ಮೇಯರ್ ತ್ರಿವೇಣಿ ಸಸಿಗೆ ನೀರು ಹಾಕುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದ್ದು ಎರಡು ಸಾವಿರ ಸಸಿ ವಿತರಣೆ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ.

  • 21 Jun 2023 07:17 AM (IST)

    International Yoga Day 2023 Live: ಯೋಗ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೈರು

    ಬೆಳಗಾವಿಯ ಸುವರ್ಣಸೌಧದ ಪಶ್ಚಿಮದ್ವಾರದ ಮೆಟ್ಟಿಲುಗಳ ಎದುರು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದೆ. ಆಯುಷ್ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉದ್ಘಾಟಿಸಿದರು. ಬೆಳಗಾವಿ ಜಿಲ್ಲೆಯ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗಿದ್ದಾರೆ.

  • 21 Jun 2023 07:14 AM (IST)

    International Yoga Day 2023 Live: ಮೈಸೂರು ಅರಮನೆ ಆವರಣದಲ್ಲಿ ಯೋಗ

    ಮೈಸೂರು ಅರಮನೆ ಆವರಣದಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಾವಿರಾರು ಯೋಗಪಟುಗಳಿಂದ ಯೋಗ ಪ್ರದರ್ಶನ ನಡೆಯುತ್ತಿದೆ. ಮೈಸೂರು ಜಿಲ್ಲಾಡಳಿತದಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಸಂಸದ ಪ್ರತಾಪ್​​​ ಸಿಂಹ, ಶಾಸಕ ಶ್ರೀವತ್ಸ ಸೇರಿ ಹಲವರು ಭಾಗಿಯಾಗಿದ್ದಾರೆ.

  • 21 Jun 2023 07:13 AM (IST)

    International Yoga Day 2023 Live: ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ ಯೋಗ ಪ್ರದರ್ಶನ

    ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ವಿಧಾನಸೌಧದ ‌ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಲಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.

  • 21 Jun 2023 07:08 AM (IST)

    International Yoga Day 2023 Live: ನಗರದಾದ್ಯಂತ ಯೋಗ ಹಬ್ಬದ ಸಂಭ್ರಮ

    ಇಂದು ಅಂತರಾಷ್ಟ್ರೀಯ ಯೋಗ ದಿನಚರಣೆ ಹಿನ್ನಲ್ಲೆ ಜಾತಿ, ಧರ್ಮ, ವಯಸ್ಸಿನ ಮಿತಿ ಇಲ್ಲದೇ ಯೋಗ ಹಬ್ಬ ನಡೆಯುತ್ತಿದೆ. ನಗರದ ಹಲವು ಕಾಲೇಜು, ಪಾರ್ಕ್, ಗ್ರೌಂಡ್ ಗಳಲ್ಲಿ, ನಗರದ ಪಿಇಎಸ್ ಯೂನಿವರ್ಸಿಟಿಯಲ್ಲಿ ಯೋಗ ಡೇ ಆಯೋಜನೆ ಮಾಡಲಾಗಿದೆ. ಬೆಳ್ಳಗ್ಗೆ 7 ಗಂಟೆಗೆ ಆರಂಭವಾಗಿ 10 ಗಂಟೆಯವರೆಗೂ ಯೋಗ ಡೇ ನಡೆಯಲಿದೆ. ಯೋಗ ಡೇ ಟೀ ಶರ್ಟ್ ಧರಿಸಿ ಯೋಗ ಡೇಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ.

  • 21 Jun 2023 07:02 AM (IST)

    International Yoga Day 2023 Live: ಯೋಗದಿಂದ ದೇಹಕ್ಕೆ ಏನೇನು ಲಾಭ?

    ಯೋಗ ಮಾಡುವುದು ಒತ್ತಡವನ್ನು ನಿವಾರಿಸುವ ಮೂಲಕ ಉತ್ತಮ ಆರೋಗ್ಯವನ್ನು ಬೆಂಬಲಿಸುತ್ತದೆ. ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ, ನಿದ್ರೆ, ದೇಹ ಸಮತೋಲನವನ್ನು ಸುಧಾರಿಸುತ್ತದೆ. ಬೆನ್ನು ನೋವು, ಕುತ್ತಿಗೆ ನೋವು, ತಲೆನೋವಿನ ಸಮಸ್ಯೆಗಳಿಗೆ ಯೋಗವು ಒಳ್ಳೆಯ ಪರಿಹಾರವಾಗಿದೆ. ಬೊಜ್ಜು ಮತ್ತು ಅಧಿಕ ತೂಕವನ್ನು ಕಡಿಮೆಗೊಳಿಸುವಲ್ಲಿ ಸಹಾಯ ಮಾಡುತ್ತದೆ. ವ್ಯಸನಗಳಿಂದ ಮುಕ್ತಿಪಡೆಯಲು ಒಳ್ಳೆಯ ಅಭ್ಯಾಸವಾಗಿದೆ. ಖಿನ್ನತೆ ಮತ್ತು ಆತಂಕದ ಸಮಸ್ಯೆಗಳನ್ನು ನಿವಾರಿಸುವಲ್ಲಿ ಉಪಯುಕ್ತವಾಗಿದೆ.

  • 21 Jun 2023 07:00 AM (IST)

    International Yoga Day 2023 Live: ಹಲಸೂರಿನಲ್ಲಿ ಐನೂರಕ್ಕೂ ಹೆಚ್ಚು ಸೇನಾ ಸಿಬ್ಬಂದಿ, ಅಧಿಕಾರಿಗಳಿಂದ ಯೋಗ

    ವಿಶ್ವ ಯೋಗ ದಿನ ಹಿನ್ನಲೆ ಬೆಂಗಳೂರಿನ ಹಲಸೂರಿನ ಸೇನಾ ಎಂಇಜಿ ಅಂಡ್ ಸೆಂಟರ್​ನಲ್ಲಿ ವಿಶ್ವ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ಸುಮಾರು ಐನೂರಕ್ಕೂ ಹೆಚ್ಚು ಸೇನಾ ಸಿಬ್ಬಂದಿ ಮತ್ತು ಅಧಿಕಾರಿಗಳು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

  • 21 Jun 2023 06:57 AM (IST)

    International Yoga Day 2023 Live: ಮಧ್ಯಪ್ರದೇಶದಲ್ಲಿ ಉಪರಾಷ್ಟ್ರಪತಿ ಜಗದೀಪ್​​ ಧನಕರ್ ಯೋಗ ಆಚರಣೆ

    ಇಂದು ದೇಶಾದ್ಯಂತ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮ ನಡೆಯುತ್ತಿದ್ದು ಉಪರಾಷ್ಟ್ರಪತಿ ಜಗದೀಪ್​​ ಧನಕರ್​​​​​ ಭಾಗಿಯಾಗಿದ್ದಾರೆ.

  • 21 Jun 2023 06:50 AM (IST)

    International Yoga Day 2023 Live: ಯೋಗ ಗುರು ಬಾಬಾ ರಾಮ್​ದೇವ್​ ನೇತೃತ್ವದಲ್ಲಿ ಹರಿದ್ವಾರದಲ್ಲಿ ಯೋಗ

    ಇಂದು ದೇಶಾದ್ಯಂತ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು ಉತ್ತರಾಖಂಡ್​ನ ಹರಿದ್ವಾರದಲ್ಲಿ ಯೋಗ ಗುರು ಬಾಬಾ ರಾಮ್​ದೇವ್​ ನೇತೃತ್ವದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯುತ್ತಿದೆ. ಯೋಗ ಕಾರ್ಯಕ್ರಮದಲ್ಲಿ ಉತ್ತರಾಖಂಡ್​ ಸಿಎಂ ಪುಷ್ಕರ್​ ಸಿಂಗ್ ಭಾಗಿಯಾಗಿದ್ದಾರೆ.

  • 21 Jun 2023 06:47 AM (IST)

    International Yoga Day 2023 Live: ವಿಶ್ವಸಂಸ್ಥೆಯಲ್ಲಿ ಮೋದಿ ಯೋಗ

    ಇಂದು ಅಮೆರಿಕದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ವಿಶ್ವಸಂಸ್ಥೆಯಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 180 ದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ.

  • 21 Jun 2023 06:45 AM (IST)

    International Yoga Day 2023 Live: ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಕಾತರನಾಗಿದ್ದೇನೆ -ಮೋದಿ

    ಅಮೆರಿಕ ತಲುಪಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅಮೆರಿಕ ನಾಯಕರ ಜೊತೆ ಮಾತುಕತೆ ನಡೆಸಲು ಉತ್ಸುಕನಾಗಿದ್ದೇನೆ. ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಕಾತರನಾಗಿದ್ದೇನೆ ಎಂದು ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಹಾಗೂ ವಿಡಿಯೋ ಮೂಲಕ ಯೋಗ ದಿನದ ಸಂದೇಶ ರವಾನಿಸಿದ್ದಾರೆ.

  • Published On - Jun 21,2023 6:42 AM

    Follow us
    ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
    ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
    ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
    ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
    ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
    ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
    ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
    ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
    ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
    ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
    ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
    ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
    ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
    ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
    ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
    ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
    ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
    ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
    ‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
    ‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ