AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ ಇನ್​ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ: ಮುರುಗೇಶ್ ನಿರಾಣಿ

ನನಗೂ, ಸಕ್ಕರೆ ಕಾರ್ಖಾನೆಗೂ ಯಾವುದೇ ಸಂಬಂಧವಿಲ್ಲ. ನಾನು ಅದರ ಭಾಗವೂ ಅಲ್ಲ. 2008ರಲ್ಲೇ ನಿರಾಣಿ‌ ಗ್ರೂಪ್‌ಗೆ ರಾಜೀನಾಮೆ ನೀಡಿದ್ದೇನೆ ಎಂದು ಮುರುಗೇಶ್ ನಿರಾಣಿ ಹೇಳಿದರು.

ನವೆಂಬರ್​ನಲ್ಲಿ ಇನ್​ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ: ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
TV9 Web
| Edited By: |

Updated on: Sep 08, 2021 | 5:25 PM

Share

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಇನ್​ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ ನಡೆಯಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಲಾಗುವುದು ಎಂದು ವಿಧಾನಸೌಧದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ರಾಜ್ಯದ ಎಲ್ಲ ನಾಲ್ಕು ಕಂದಾಯ ವಿಭಾಗವಾರು ಕೈಗಾರಿಕಾ ಅದಾಲತ್ ನಡೆಸಿ, ಉದ್ಯಮಿಗಳ ಅಹವಾಲು ಆಲಿಸಲಾಗುವುದು. ದುಬೈನಲ್ಲಿ ಶೀಘ್ರವೇ ಮೇಳ ನಡೆಯಲಿದ್ದು ರಾಜ್ಯ ಸರ್ಕಾರವು ಹೂಡಿಕೆದಾರರನ್ನು ಆಕರ್ಷಿಸಲು ಕೈಗಾರಿಕಾ ಇಲಾಖೆಯ ಸ್ವಾಲ್ ಹಾಕಲಿದೆ. ನಂತರದ ದಿನಗಳಲ್ಲಿ ವಿವಿಧ ದೇಶಗಳಲ್ಲಿ ರೋಡ್ ಶೋ ನಡೆಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಉದ್ಯೋಗ ಮಿತ್ರ ಸಂಸ್ಥೆಯು ದೇಶದ ಅಗ್ರಮಾನ್ಯ ಹೂಡಿಕೆ ಪ್ರಚಾರ ಏಜೆನ್ಸಿಯಾಗಿ ಹೊರ ಹೊಮ್ಮಿದೆ ಎಂದು ತಿಳಿಸಿದ ಅವರು, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 62,085 ಕೋಟಿ ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಳಕೆ ಮಾಡದ ಕೈಗಾರಿಕಾ ಭೂಮಿಯನ್ನು ಹಿಂಪಡೆಯಲು ಚಿಂತನೆ ನಡೆದಿದೆ. ಜಮೀನಿಗಾಗಿ ಹಣ ಪಾವತಿಸಿದ್ದವರಿಗೆ ಅವಕಾಶ ನೀಡಲಾಗುವುದು, ಹಣ ತುಂಬದವರಿಗೆ ನೊಟೀಸ್ ನೀಡುತ್ತೇವೆ. ಉದ್ಯಮಿಗಳಿಗೆ ಕಿರುಕುಳ ಆಗದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತಾಪವಾಗುವ ದೂರುಗಳ ಬಗ್ಗೆ ಕೈಗಾರಿಕಾ ಸಚಿವರ ಹಂತದಲ್ಲಿಯೇ ಸಾಧ್ಯವಾದ ಮಟ್ಟಿಗೂ ತೀರ್ಮಾನಿಸಲಾಗುವುದು. ನಮ್ಮ ವ್ಯಾಪ್ತಿಗೆ ಮೀರಿದ ವಿಚಾರಗಳಿದ್ದರೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಪರಿಹರಿಸಲು ಯತ್ನಿಸುತ್ತೇವೆ. 30 ದಿನಗಳ ಕಾಲಾವಕಾಶ ನೀಡಿದ ನಂತರವೇ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಕಲಬುರಗಿ ರಾಜಕಾರಣ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರಿಂದ ಬೆಂಬಲ ದೊರೆತರೆ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಾಗುತ್ತದೆ. ಮೇಯರ್ ಹುದ್ದೆಗೆ ಜೆಡಿಎಸ್ ಬೇಡಿಕೆ ಇಟ್ಟಿರುವ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಈ ಕುರಿತು ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ. ಅವರ ನಿರ್ಧಾರದಂತೆ ಉಸ್ತುವಾರಿ ಸಚಿವನಾಗಿ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಸಕ್ಕರೆ ಕಾರ್ಖಾನೆ ವೇತನ ಬಾಕಿ ಉಳಿಸಿಲ್ಲ ಮಂಡ್ಯ ಜಿಲ್ಲೆ ಪಾಂಡವಪುರ ಸಕ್ಕರೆ ಕಾರ್ಖಾನೆಯಲ್ಲಿ ವೇತನ ಬಾಕಿ ಉಳಿಸಿಕೊಂಡಿರುವ ವಿಚಾರದ ಬಗ್ಗೆ ಪ್ರಸ್ತಾಪಿಸಿರುವ ಅವರು, ಕಾರ್ಮಿಕರಿಗೆ ವೇತನ ಕೊಟ್ಟಿಲ್ಲ ಎಂಬುದು ಸುಳ್ಳು. ಸಕ್ಕರೆ ಕಾರ್ಖಾನೆಯಲ್ಲಿ ಪ್ರಸ್ತುತ ಯಾವುದೇ ಸಮಸ್ಯೆಯಿಲ್ಲ. ಅಲ್ಲಿನ ಪ್ರತಿಭಟನೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನನಗೂ, ಸಕ್ಕರೆ ಕಾರ್ಖಾನೆಗೂ ಯಾವುದೇ ಸಂಬಂಧವಿಲ್ಲ. ನಾನು ಅದರ ಭಾಗವೂ ಅಲ್ಲ. 2008ರಲ್ಲೇ ನಿರಾಣಿ‌ ಗ್ರೂಪ್‌ಗೆ ರಾಜೀನಾಮೆ ನೀಡಿದ್ದೇನೆ. ಈಗ ಆ ಉದ್ಯಮ ಸಮೂಹದಲ್ಲಿ ನಾನು ನಿರ್ದೇಶಕನೂ ಆಗಿಲ್ಲ. ಕಾರ್ಖಾನೆಯ ಬಗ್ಗೆ ಸಂಬಂಧಿಸಿದವರು ಉತ್ತರ ನೀಡುತ್ತಾರೆ ಎಂದು ಹೇಳಿದರು.

(Invest Karnataka Event on November says Industry Minister)

ಇದನ್ನೂ ಓದಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಗದ್ದುಗೆ ಹಿಡಿಯಲಿದ್ದೇವೆ: ಮುರುಗೇಶ್ ನಿರಾಣಿ

ಇದನ್ನೂ ಓದಿ: ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವುದಕ್ಕೆ ಥಾಯ್ಲೆಂಡ್​ ದೇಶಕ್ಕೆ ಆಹ್ವಾನ ನೀಡಿದ ಸಚಿವ ಮುರುಗೇಶ್ ನಿರಾಣಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ