Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿರ್ಬಂಧ, ಮಾರ್ಗ ಬದಲಾವಣೆ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಏ.15) ಆರ್​ಸಿಬಿ ಮತ್ತು ಡಿಸಿ​​ ಮಧ್ಯೆ ಟಿ-20 ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

RCB vs DC: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿರ್ಬಂಧ, ಮಾರ್ಗ ಬದಲಾವಣೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
| Updated By: Vinay Bhat

Updated on:Apr 15, 2023 | 12:40 PM

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಇಂದು (ಏ.15) ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್​​ (DC) ಮಧ್ಯೆ ಟಿ-20 ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ವಾಹನ ನಿಲುಗಡೆಗೆ ಅವಕಾಶವಿಲ್ಲ

‘ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಮಧ್ಯಾಹ್ನ 12:30 ರಿಂದ ರಾತ್ರಿ 9 ಗಂಟೆಯವರೆಗೆ ಅವಕಾಶವಿಲ್ಲ.

ವಾಹನ ನಿಲುಗಡೆಗೆ ಅವಕಾಶ

‘ಕಿಂಗ್ಸ್ ರಸ್ತೆ, ಶಿವಾಜಿನಗರ ಬಿಎಂಟಿಸಿ ಬಸ್​ ನಿಲ್ದಾಣದ ಮೊದಲ ಮಹಡಿ, ಹಳೆ ಕೆಜಿಐಡಿ ಕಟ್ಟಡ, ಬಿಆರ್‌ವಿ ಮೈದಾನ, ಕಂಠೀರವ ಕ್ರೀಡಾಂಗಣ, ಯು.ಬಿಸಿಟಿ ಹಾಗೂ ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರು ವಾಹನ ನಿಲ್ಲಿಸಬಹುದು’ ಎಂದು ಹೇಳಿದ್ದಾರೆ.

ವಾಹನ ಸಂಚಾರ ನಿರ್ಬಂಧ

ಕ್ವೀನ್ಸ್ ರಸ್ತೆಯಲ್ಲಿ ಗೂಡ್ಸ್​ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಿದ್ದಲಿಂಗಯ್ಯ ವೃತ್ತದಿಂದ ಎಂಜಿ ರಸ್ತೆ ಕಡೆಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಮತ್ತು ಗೂಡ್ಸ್​ ವಾಹನಗಳು ರೆಸಿಡೆನ್ಸಿ ರಸ್ತೆ ಮೂಲಕ ಹೋಗಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Sat, 15 April 23

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ