ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಇಂದು (ಏ.15) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್ (DC) ಮಧ್ಯೆ ಟಿ-20 ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.
‘ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಮಧ್ಯಾಹ್ನ 12:30 ರಿಂದ ರಾತ್ರಿ 9 ಗಂಟೆಯವರೆಗೆ ಅವಕಾಶವಿಲ್ಲ.
‘ಕಿಂಗ್ಸ್ ರಸ್ತೆ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಹಳೆ ಕೆಜಿಐಡಿ ಕಟ್ಟಡ, ಬಿಆರ್‌ವಿ ಮೈದಾನ, ಕಂಠೀರವ ಕ್ರೀಡಾಂಗಣ, ಯು.ಬಿಸಿಟಿ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರು ವಾಹನ ನಿಲ್ಲಿಸಬಹುದು’ ಎಂದು ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿ ಗೂಡ್ಸ್ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಿದ್ದಲಿಂಗಯ್ಯ ವೃತ್ತದಿಂದ ಎಂಜಿ ರಸ್ತೆ ಕಡೆಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಮತ್ತು ಗೂಡ್ಸ್ ವಾಹನಗಳು ರೆಸಿಡೆನ್ಸಿ ರಸ್ತೆ ಮೂಲಕ ಹೋಗಬಹುದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:08 am, Sat, 15 April 23