AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಐಪಿಎಲ್ ಪಂದ್ಯ: ಪಾರ್ಕಿಂಗ್, ಸಂಚಾರ ನಿರ್ಬಂಧ ವಿವರ ಇಲ್ಲಿದೆ

ಪ್ರಸಕ್ತ ಋತುವಿನ ಐಪಿಎಲ್​​ನ 2ನೇ ಪಂದ್ಯ ಆಡಲು ಆರ್​ಸಿಬಿ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದ್ದು, ಕ್ರಿಕೆಟ್ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಕ್ರೀಡಾಂಗಣಕ್ಕೆ ತೆರಳುವ ಕ್ರೀಡಾಭಿಮಾನಿಗಳಿಗೆ ಎಲ್ಲಿ ವಾಹನ ಪಾರ್ಕ್ ಮಾಡಬಹುದು? ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧವಿದೆ ಎಂಬ ಮಾಹಿತಿ ಇಲ್ಲಿದೆ.

IPL 2024: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಐಪಿಎಲ್ ಪಂದ್ಯ: ಪಾರ್ಕಿಂಗ್, ಸಂಚಾರ ನಿರ್ಬಂಧ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 25, 2024 | 11:57 AM

Share

ಬೆಂಗಳೂರು, ಮಾರ್ಚ್​ 25: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)​ ಪಂದ್ಯಲ್ಲಿ ಇಂದು ಆರ್​ಸಿಬಿ ತಂಡ ಪಂಜಾಬ್ ಕಿಂಗ್ಸ್ (RCB vs PBKS) ಅನ್ನು ಎದುರಿಸಲಿದೆ​. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಕ್ರಮ ಕೈಗೊಂಡಿದ್ದು, ಹಲವೆಡೆ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಹಲವು ಕಡೆ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.

ಸಂಜೆ ಮೂರು ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಅದೇ ರೀತಿ ಸಾರ್ವಜನಿಕ ಸಾರಿಗೆಗಳ ನಿಲುಗಡೆಗೂ ಸ್ಥಳ ಗುರುತಿಸಲಾಗಿದೆ. ಆ ಪ್ರದೇಶಗಳ ವಿವರ ಇಲ್ಲಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ

  • ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
  • ವಿಟ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರೀಡಾಭಿಮಾನಿಗಳನ್ನು ಕರೆದುಕೊಂಡು ಬರುವ ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್​​ಗಳು, ಪಿಕ್ ಆಪ್ ಮತ್ತು ಡ್ರಾಪ್ ಮಾಡುವ ಸ್ಥಳಗಳ ಬಗ್ಗೆಯೂ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದು, ಆ ವಿವರ ಇಲ್ಲಿದೆ.

  • ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
  • ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
  • ಕಿಂಗ್ಸ್ ರಸ್ತೆ (ಕಬ್ಬನ್ ಪಾರ್ಕ್ ಒಳಭಾಗ)

ಇದನ್ನೂ ಓದಿ: ಬೆಂಗಳೂರಿನಲ್ಲಿ RCBಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ..!

ಸೀಸನ್ 17ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಮುಗ್ಗರಿಸಿರುವ ಆರ್​ಸಿಬಿ ಇಂದು ಎರಡನೇ ಪಂದ್ಯ ಆಡುತ್ತಿದೆ. ಈ ಪಂದ್ಯಾವಳಿಯ ಕಾರಣ ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ಸಂಚಾರಕ್ಕೆ ಅಡಚಣೆಯಾಗದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Mon, 25 March 24