ಬೆಂಗಳೂರು, ಮಾರ್ಚ್ 25: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಪಂದ್ಯಲ್ಲಿ ಇಂದು ಆರ್ಸಿಬಿ ತಂಡ ಪಂಜಾಬ್ ಕಿಂಗ್ಸ್ (RCB vs PBKS) ಅನ್ನು ಎದುರಿಸಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಕ್ರಮ ಕೈಗೊಂಡಿದ್ದು, ಹಲವೆಡೆ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಹಲವು ಕಡೆ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.
ಸಂಜೆ ಮೂರು ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಅದೇ ರೀತಿ ಸಾರ್ವಜನಿಕ ಸಾರಿಗೆಗಳ ನಿಲುಗಡೆಗೂ ಸ್ಥಳ ಗುರುತಿಸಲಾಗಿದೆ. ಆ ಪ್ರದೇಶಗಳ ವಿವರ ಇಲ್ಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರೀಡಾಭಿಮಾನಿಗಳನ್ನು ಕರೆದುಕೊಂಡು ಬರುವ ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್ಗಳು, ಪಿಕ್ ಆಪ್ ಮತ್ತು ಡ್ರಾಪ್ ಮಾಡುವ ಸ್ಥಳಗಳ ಬಗ್ಗೆಯೂ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದು, ಆ ವಿವರ ಇಲ್ಲಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ RCBಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ..!
ಸೀಸನ್ 17ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿರುವ ಆರ್ಸಿಬಿ ಇಂದು ಎರಡನೇ ಪಂದ್ಯ ಆಡುತ್ತಿದೆ. ಈ ಪಂದ್ಯಾವಳಿಯ ಕಾರಣ ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ಸಂಚಾರಕ್ಕೆ ಅಡಚಣೆಯಾಗದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:56 am, Mon, 25 March 24