AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿಂದು ಐಪಿಎಲ್: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನಲ್ಲಿ RCB vs RR ಐಪಿಎಲ್ ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂಜಿ ರಸ್ತೆ ಮುಂತಾದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ. ಪಾರ್ಕಿಂಗ್ ವ್ಯವಸ್ಥೆ ಮತ್ತು ಮೆಟ್ರೋ ಸೇವೆಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.

ಬೆಂಗಳೂರಿನಲ್ಲಿಂದು ಐಪಿಎಲ್: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ
ಬೆಂಗಳೂರಿನ ರಸ್ತೆಯೊಂದರಲ್ಲಿ ಸಂಚಾರ ದಟ್ಟಣೆ (ಸಾಂದರ್ಭಿಕ ಚಿತ್ರ)Image Credit source: Twitter
Follow us
Ganapathi Sharma
|

Updated on: Apr 24, 2025 | 11:44 AM

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ ರಾಯಲ್ಸ್ (RR) ತಂಡಗಳ ನಡುವೆ ಐಪಿಎಲ್ (IPL 2025) ಟಿ20 ಕ್ರಿಕೆಟ್ ಸೆಣಸಾಟ ನಡೆಯಲಿದೆ. ಹೀಗಾಗಿ ಸ್ಟೇಡಿಯಂ ಸುತ್ತಮುತ್ತ ಸಂಜೆ ವೇಳೆಗೆ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣದ ಯೋಜನೆ ರೂಪಿಸಿವುದು ಒಳಿತು. ಸಂಚಾರ ನಿರ್ಬಂಧ, ಪಾರ್ಕಿಂಗ್ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರಿಂದ ಇತ್ತೀಚಿನ ಪ್ರಕಟಣೆ ಬಿಡುಗಡೆ ಆಗಿಲ್ಲ. ಆದಾಗ್ಯೂ, ಈ ಹಿಂದಿನ ಪಂದ್ಯಗಳ ವೇಳೆ ಜಾರಿಯಲ್ಲಿದ್ದ ಸಂಚಾರ ನಿರ್ಬಂಧ ಜಾರಿಯಲ್ಲಿರುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗಬಹುದು?

ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೀಧಿ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ವಾಹನ ಪಾರ್ಕಿಂಗ್?

ಈ ಹಿಂದಿನ ಪಂದ್ಯಗಳ ವೇಳೆ ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿತ್ತು. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಒದಗಿಸಲಾಗಿತ್ತು. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿತ್ತು.

ಇದನ್ನೂ ಓದಿ
Image
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
Image
IPL 2025: SRH vs MI ಮ್ಯಾಚ್ ಮೇಲೆ ಫಿಕ್ಸಿಂಗ್ ಆರೋಪ
Image
ಬೌಲ್ಟ್-ಚಾಹರ್ ಮಾರಕ ದಾಳಿ; ಹೈದರಾಬಾದ್​ಗೆ 6ನೇ ಸೋಲು
Image
ಬೆಂಗಳೂರಿನಲ್ಲಿ ಪ್ಲೇಯಿಂಗ್ 11 ಬದಲಿಸುತ್ತಾ ರಾಜಸ್ಥಾನ್?

ಮೆಟ್ರೋ ರೈಲು ಸಂಚಾರ ಸಮಯ ವಿಸ್ತರಣೆ

ಐಪಿಎಲ್ ಪಂದ್ಯಗಳ ದಿನ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ ಎಂದು ಬಿಎಂಆರ್​ಸಿಎಲ್ ಈ ಹಿಂದೆಯೇ ತಿಳಿಸಿದೆ. ಈ ಹಿಂದಿನ ಪಂದ್ಯಗಳ ವೇಳೆಯೂ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆಯಾಗಿತ್ತು. ಎಲ್ಲಾ ನಾಲ್ಕು ಟರ್ಮಿನಲ್​ಗಳಿಂದ, ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿತ್ತು.

ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್, ಐಪಿಎಲ್ ಪಂದ್ಯ ಪ್ರಯುಕ್ತ ರಾತ್ರಿ 12.30 ರ ವರಗೆ ಸಂಚಾರ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಆಡಿರುವ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದೆ. ಆದರೆ, ತವರಿನಲ್ಲಿ ಆಡಿರುವ ಎಲ್ಲ ಪಂದ್ಯಗಳಲ್ಲಿ ಸೋಲನುಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ