AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗಿದೆ. ಮಾರ್ಚ್ 28ರಂದು ನಡೆಯುವ RCB ಪಂದ್ಯಕ್ಕೆ ಮೆಟ್ರೋ ಸೇವೆ ವಿಸ್ತರಣೆ, ಟ್ರಾಫಿಕ್ ಮತ್ತು ಪಾರ್ಕಿಂಗ್ ನಿಯಮಗಳನ್ನು ಬೆಂಗಳೂರು ಪೊಲೀಸರು ಘೋಷಿಸಿದ್ದಾರೆ. ಅಭಿಮಾನಿಗಳು ಸುರಕ್ಷಿತವಾಗಿ ಪಂದ್ಯ ವೀಕ್ಷಿಸಲು ರಸ್ತೆ ನಿರ್ಬಂಧಗಳು, ಹೆಚ್ಚುವರಿ ಮೆಟ್ರೋ ರೈಲು ಸೇವೆಗಳು ಲಭ್ಯ. ದಟ್ಟಣೆ ತಪ್ಪಿಸಲು ಸಾರ್ವಜನಿಕ ಸಾರಿಗೆ ಬಳಸಿ ಸುಗಮ ಪ್ರಯಾಣ ಕೈಗೊಳ್ಳಬಹುದು.

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ
ಸಾಂದರ್ಭಿಕ ಚಿತ್ರ Image Credit source: Tv9 kannada
Kiran Surya
| Edited By: |

Updated on: Mar 25, 2026 | 9:41 PM

Share

ಬೆಂಗಳೂರು, ಮಾ.25: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿದೆ. ಇದೊಂದು ಅಭಿಮಾನಿಗಳಿಗೆ ಹಬ್ಬವೇ ಸರಿ, ಅದರಲ್ಲೂ ಈ ಬಾರಿ ಆರ್​​ಸಿಬಿ ಮೊದಲ ಪಂದ್ಯ ಇಲ್ಲಿ ನಡೆಯುತ್ತಿರುವ ಕಾರಣ ಇನ್ನು ರೋಚಕವಾಗಿರಲಿದೆ. ಬೆಂಗಳೂರಿನಲ್ಲಿ ಆರ್​ಸಿಬಿ ಅಭಿಮಾನಿಗಳು ಇರುವ ಕಾರಣ ಹೆಚ್ಚು ಜನ ಸೇರಬಹುದು. ಹಾಗೂ ಜನ ದಟ್ಟಣೆಯೂ ಆಗಬಹುದು ಇದರ ಜತೆಗೆ ವಾಹನ ದಟ್ಟಣೆ ಕೂಡ ಆಗಬಹುದು ಎಂಬ ಕಾರಣಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿತ ಮಂಡಳಿ ಹೆಚ್ಚು ವ್ಯವಸ್ಥೆಗಳನ್ನು ಮಾಡಿದೆ. ಸಂಚಾರಿ ಪೊಲೀಸರು ಕೂಡ ಪಾರ್ಕಿಂಗ್​​ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಯೋಜನೆ ಹಾಕಿಕೊಂಡಿದ್ದಾರೆ. ಇದೀಗ ಮೆಟ್ರೋ ಕೂಡ ಈ ದಿನದಂದು ಹೆಚ್ಚಿನ ಸೇವೆಗಳನ್ನು ನೀಡಲು ಮುಂದಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಿದೆ. ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಸುರಕ್ಷಿತವಾಗಿ ಮನೆ ತಲುಪಲು ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯ ಸಮಯದ ಬದಲಾಗಿ ಅಂದು ರಾತ್ರಿ 11 ರಿಂದ ಮುಂಜಾನೆ 2 ಗಂಟೆಯವರೆಗೆ ಮೆಟ್ರೋ ರೈಲುಗಳು ಸಂಚರಿಸಲಿವೆ.

ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಹೊರಡುವ ಸಮಯ:

ವೈಟ್‌ಫೀಲ್ಡ್ (ಕಾಡುಗೋಡಿ): ರಾತ್ರಿ 12.30ಕ್ಕೆ.

ಚೆಲ್ಲಘಟ್ಟ: ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12.45ಕ್ಕೆ.

ಬೊಮ್ಮಸಂದ್ರ: ರಾತ್ರಿ 01.00ಕ್ಕೆ.

ಆರ್.ವಿ. ರಸ್ತೆ: ಮುಂಜಾನೆ 02.00ಕ್ಕೆ.

ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ ನಿಲ್ದಾಣ)ನಿಂದ ನಾಲ್ಕೂ ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲುಗಳು ಹೊರಡಲಿವೆ. ಮೆಟ್ರೋ ನಿಲ್ದಾಣಗಳಲ್ಲಿ ವಾಹನ ನಿಲುಗಡೆಗೆ ಹೆಚ್ಚಿನ ಒತ್ತಡವಿರುವ ಕಾರಣ ಅಂದು ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: ಐಪಿಎಲ್ ಅಭಿಮಾನಿಗಳೇ ಗಮನಿಸಿ! ಪಂದ್ಯದ ದಿನ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳು ಬಂದ್!

ಪಂದ್ಯದ ದಿನ ರಸ್ತೆಗಳು ಬಂದ್!

ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯ ನಡೆಯಲಿದೆ. ಈ ಬಾರಿ ಪಂದ್ಯಕ್ಕೆ ಭಾರೀ ಜನ ಸೇರುವ ಸಾಧ್ಯತೆಗಳು ಇದೆ. ಅದರಲ್ಲೂ ನೆಚ್ಚಿನ ಟೀಮ್​​​ ಆರ್​​ಸಿಬಿ ಬೆಂಗಳೂರಿನಲ್ಲಿ ಆಡುತ್ತಿದೆ ಎಂದರೆ ಖಂಡಿತ ಜನ ಬರುವುದು ಖಂಡಿತ. ಅದಕ್ಕಾಗಿ ಜನರನ್ನು ಹಾಗೂ ವಾಹನಗಳನ್ನು ನಿಭಾಯಿಸಲು ಹಲವು ಕ್ರಮಗಳನ್ನು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿಯ ಮಂಡಳಿ ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ವಾಹನ ಸಂಚಾರ ಹಾಗೂ ಪಾರ್ಕಿಂಗ್​​​, ಜನರ ಓಡಾಟ ಎಲ್ಲದಕ್ಕೂ ಹೊಸ ರೂಲ್ಸ್​​ ತರಲಾಗಿದೆ. ಪಂದ್ಯಗಳ ದಿನದಂದು ಕ್ರೀಡಾಂಗಣದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us