
ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದರೂ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮಾರ್ಗಸೂಚಿ ರಿಲೀಸ್ ಮಾಡಿದ್ದಾರೆ.
ಇದನ್ನೂ ಓದಿ: ಫೈನಲ್ ಪ್ಲೇಯಿಂಗ್ ಇಲೆವೆನ್; RCB ಮುಂದಿದೆ 2 ಆಯ್ಕೆ
IPL ಫೈನಲ್ ಹಿನ್ನೆಲೆ ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಂಗಳೂರು ಪೊಲೀಸರು ಈ ಸೂಚನೆಗಳನ್ನು ಪಾಲಿಸುವಂತೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕ್ರೀಡೆಯನ್ನ ಕ್ರೀಡೆಯಾಗಿ ಸ್ವೀಕರಿಸಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಸೂಚಿಸಲಾಗಿದ್ದು, ಇದನ್ನು ಮೀರಿ ಹುಚ್ಚಾಟ ನಡೆಸಿದರೆ ಕಾನೂನು ಕ್ರಮ ಫಿಕ್ಸ್ ಎಂಬ ಎಚ್ಚರಿಕೆಯನ್ನೂ ನಗರ ಪೊಲೀಸ್ ಆಯುಕ್ತ ಸೀಂಮತ್ ಕುಮಾರ್ ಸಿಂಗ್ ನೀಡಿದ್ದಾರೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:53 am, Sun, 31 May 26