AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Final: ಆರ್​ಸಿಬಿ ಗೆದ್ರೆ ಅತಿರೇಕದ ವರ್ತನೆ ಬೇಡ; ಬೆಂಗಳೂರಿನಲ್ಲಿ ಕಟ್ಟೆಚ್ಚರಕ್ಕೆ ಪೊಲೀಸ್ ಕಮಿಷನರ್ ಸೂಚನೆ

RCB vs PBKS: ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲುವ ಫೇವರಿಟ್ ತಂಡವಾದ ಕಾರಣ, ಸಂಭ್ರಮಾಚರಣೆ ಹೆಸರಿನಲ್ಲಿ ಅಭಿಮಾನಿಗಳು ಅತಿರೇಕದ ವರ್ತನೆ ತೋರದಂತೆ ಎಚ್ಚರಿಕೆ ನೀಡಲಾಗಿದೆ. ಸಂಭ್ರಮಾಚರಣೆ ಸಂದರ್ಭ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಸೂಚನೆ ನೀಡಿದ್ದಾರೆ.

IPL Final: ಆರ್​ಸಿಬಿ ಗೆದ್ರೆ ಅತಿರೇಕದ ವರ್ತನೆ ಬೇಡ; ಬೆಂಗಳೂರಿನಲ್ಲಿ ಕಟ್ಟೆಚ್ಚರಕ್ಕೆ ಪೊಲೀಸ್ ಕಮಿಷನರ್ ಸೂಚನೆ
ಆರ್​ಸಿಬಿ ಅಭಿಮಾನಿಗಳು (ಸಾಂದರ್ಭಿಕ ಚಿತ್ರ)
Ganapathi Sharma
|

Updated on: Jun 03, 2025 | 9:00 AM

Share

ಬೆಂಗಳೂರು, ಜೂನ್ 3: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಗುಜರಾತ್​ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)  ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಆರ್​ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿವೆ. ಇದೇ ಸಂದರ್ಭದಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸರಿಗೆ (Bengaluru Police) ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಿರ್ದೇಶನ ನೀಡಲಾಗಿದೆ.

ಆರ್​ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ.

ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುವಂತಿಲ್ಲ

ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುವಂತಿಲ್ಲ ಎಂದು ಅಭಿಮಾನಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ರಸ್ತೆ ತಡೆಯುವುದು, ಟೈರ್​ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ನಿಗಾ ವಹಿಸಲು ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ
Image
3+6+2+0+2+5: RCB ಅಭಿಮಾನಿಗಳ 18ರ ಲೆಕ್ಕಾಚಾರ... ಈ ಸಲ ಕಪ್ ನಮ್ದೆ
Image
ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್
Image
ಮೊದಲ ಕಪ್​ಗೆ ಆರ್​ಸಿಬಿ-ಪಂಜಾಬ್ ನಡುವೆ ಕೊನೆಯ ಹೋರಾಟ
Image
ಬಿಬಿಎಂಪಿ ಶುಭ ಸುದ್ದಿ: ಬಿ ಖಾತಾ ಬದಲಿಗೆ ಎ ಖಾತಾ ನೀಡುವ ಸುಳಿವು!

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ.

ಸ್ಕ್ರೀನ್​ ಅಳವಡಿಸಲು ಪೊಲೀಸರ ಅನುಮತಿ ಅಗತ್ಯ

ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್​​ ಅಳವಡಿಕೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: 3+6+2+0+2+5: RCB ಅಭಿಮಾನಿಗಳ 18ರ ಲೆಕ್ಕಾಚಾರ… ಈ ಸಲ ಕಪ್ ನಮ್ದೆ

ಪಬ್, ಕ್ಲಬ್, ರೆಸ್ಟೋರೆಂಟ್​​​ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್​​​ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ.

ವರದಿ: ವಿಕಾಸ್, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?