ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಬಡ್ತಿ ನೀಡಿದ ಕರ್ನಾಟಕ ಸರ್ಕಾರ
ಐಎಂಎ ಹಗರಣ ಪ್ರಕರಣದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡ ಆರೋಪ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿತ್ತು. ಆದರೆ, ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಿದ್ದ ಹಿನ್ನೆಲೆ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಸದ್ಯ ಹಿಲೋರಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು, ಆಗಸ್ಟ್ 28: ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ (Ajay Hilori) ಅವರಿಗೆ ಡಿಐಜಿಪಿ ಆಗಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಶಾನ್ಯ ವಲಯ ಡಿಐಜಿಪಿ (DIGP) ಆಗಿ ಅಜಯ್ ಹಿಲೋರಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಐಎಂಎ ಹಗರಣ ಪ್ರಕರಣದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡ ಆರೋಪ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿತ್ತು. ಆದರೆ, ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಿದ್ದ ಹಿನ್ನೆಲೆ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಸದ್ಯ ಹಿಲೋರಿ ಅವರಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿದೆ.
ಇದನ್ನೂ ಓದಿ: 21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು ಮೂಲದ ಐಎಂಎ ಮತ್ತು ಅದರ ಗುಂಪು ಸಂಸ್ಥೆಗಳು ಇಸ್ಲಾಂ ಹೂಡಿಕೆಯ ಮಾರ್ಗಗಳನ್ನು ಬಳಸಿಕೊಂಡು ಜನರಿಗೆ ಹೆಚ್ಚಿನ ಆದಾಯದ ಆಸೆ ಹುಟ್ಟಿಸಿ ಸಾವಿರಾರು ಜನರಿಂದ ಹೂಡಿಕೆ ಮಾಡಿಸಿಕೊಂಡು 4000 ಕೋಟಿ ರೂಪಾಯಿ ವಂಚಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ನ ರೋಷನ್ ಬೇಗ್, ಜಮೀರ್ ಅಹ್ಮದ್ ಖಾನ್ ಸಿಲುಕಿದ್ದರು. ಅಲ್ಲದೆ, ಅಜಯ್ ಹಿಲೋರಿ ಸೇರಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳೂ ವಿಚಾರಣೆಯನ್ನು ಎದುರಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ