PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಅಮೃತ್​ ಪಾಲ್​ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ
ಐಪಿಎಸ್ ಅಧಿಕಾರಿ ಅಮೃತ್ ಪೌಲ್
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 15, 2022 | 7:37 PM

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಬಂಧಿತರಾಗಿರುವ ಅಮೃತ್​ ಪಾಲ್​ (IPS Amrit Paul) ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ. ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪಾಲ್ ಜುಲೈ 4ರಂದು ಅಮೃತ್​ ಪಾಲ್​ ಬಂಧಿಸಿದ್ದರು.

ಇಂದು ​ಅಮೃತ್​ ಪಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಮೃತ್​ ಪಾಲ್​ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ  ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ಹೇಳಿದೆ.

14 ದಿನ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪಾಲ್  ಪರಪ್ಪನ ಅಗ್ರಹಾರದ ಕ್ವಾರಂಟೈನ್​​​ ಸೆಲ್​​​​ನಲ್ಲಿರಲಿದ್ದಾರೆ.

ಕೆಳಹಂತದ ಅಧಿಕಾರಿಗಳಿಂದ ಅಮೃತ್ ಪಾಲ್ ತನಿಖೆ ಪ್ರಯೋಜನವಿಲ್ಲ: ಹೈಕೋರ್ಟ್​

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮ್ರಿತ್ ಪಾಲ್ ಅವರ ವಿಚಾರಣೆಯನ್ನು ಕೆಳಹಂತದ ಅಧಿಕಾರಿಗಳು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ನಿನ್ನೆ (ಜುಲೈ 14) ರಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಿಐಡಿ ಪರ ವಕೀಲರು, ಡಿಜಿಪಿ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ (Regional Forensic Science Laboratory – RFSL) ಸಿಐಡಿ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಒಎಂಆರ್‌ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಯಿತು. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾಗಿದೆ.

Published On - 5:13 pm, Fri, 15 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ